ಗೌತಮ್ ಗಂಭೀರ್ ಬೇಡಿಕೆಗಳಿಗೆ ಬಿಸಿಸಿಐ ಒಪ್ಪಿಗೆ: ಟೀಂ ಇಂಡಿಯಾ ಕೋಚ್ ಸ್ಥಾನ ಬಹುತೇಕ ಖಚಿತ

Date:

ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಕೆಆರ್‌ನ ಮುಖ್ಯ ಕೋಚ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ಗೌತಮ್‌ ಗಂಭೀರ್‌ ಅವರು ಟೀಂ ಇಂಡಿಯಾ ಮುಖ್ಯ ಕೋಚ್‌ ಆಗಿ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ.

- Advertisement -

ಪ್ರಸ್ತುತ ಮುಖ್ಯ ತರಬೇತುದಾರನಾಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್‌ ದ್ರಾವಿಡ್‌ ಅವರ ಅವಧಿ ಟಿ20 ವಿಶ್ವಕಪ್‌ ನಂತರ ಮುಕ್ತಾಯಗೊಳ್ಳಲಿದ್ದು, ಗಂಭೀರ್‌ ದ್ರಾವಿಡ್‌ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶೀಘ್ರದಲ್ಲಿಯೇ ಗಂಭೀರ್‌ ಅವರನ್ನು ಬಿಸಿಸಿಐ ಮುಖ್ಯ ಕೋಚ್‌ ಆಗಿ ನೇಮಿಸಲಿದೆ. ಕೋಚ್‌ ಸ್ಥಾನ ಅಲಂಕರಿಸುವಂತೆ ಬಿಸಿಸಿಐನ ಮನವಿಯನ್ನು ಗಂಭೀರ್‌ ಒಪ್ಪಿಕೊಂಡಿದ್ದು, ಇದರ ಜೊತೆ ಗೌತಮ್‌ ಗಂಭೀರ್‌ ಅವರ ಕೆಲವು ಬೇಡಿಕೆಗಳಿಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಮ್ಮತಿ ಸೂಚಿಸಿದೆ ಎನ್ನಲಾಗಿದೆ.

“ಭಾರತ ತಂಡದ ಮುಖ್ಯ ಕೋಚ್‌ ನೇಮಕಕ್ಕೆ ಸಂಬಂಧಿಸಿದಂತೆ ನಾವು ಗಂಭೀರ್‌ ಅವರೊಂದಿಗೆ ಮಾತನಾಡಿದ್ದೇವೆ. ಟಿ20 ವಿಶ್ವಕಪ್‌ ನಂತರ ನಿರ್ಗಮಿಸುತ್ತಿರುವ ರಾಹುಲ್ ದ್ರಾವಿಡ್‌ ಅವರ ಸ್ಥಾನವನ್ನು ಗಂಭೀರ್‌ ತುಂಬಲಿದ್ದಾರೆ” ಎಂದು ಮಾಧ್ಯಮವೊಂದಕ್ಕೆ ಬಿಸಿಸಿಐ ತಿಳಿಸಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಟಿ20 ವಿಶ್ವಕಪ್ | ಬಾಂಗ್ಲಾ ವಿರುದ್ಧ ಜಯದೊಂದಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ

ತಮ್ಮ ನಿರ್ಧಾರದಂತೆ ಬೆಂಬಲಿತ ಸಿಬ್ಬಂದಿಯನ್ನು ನೇಮಸಿಕೊಂಡರೆ ತಾವು ಕೋಚ್‌ ಹುದ್ದೆಯನ್ನು ಒಪ್ಪಿಕೊಳ್ಳುವುದಾಗಿ ಗೌತಮ್‌ ಗಂಭೀರ್‌ ಬಿಸಿಸಿಐಗೆ ತಿಳಿಸಿದ್ದಾರೆ ಎನ್ನಲಾಗಿದೆ. ಗಂಭೀರ ಅವರ ಬೇಡಿಕೆಗಳನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಒಪ್ಪಿಕೊಂಡಿದ್ದು ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಆರಂಭದಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ರವಿ ಶಾಸ್ತ್ರಿ ಅವರು ಮುಖ್ಯ ಕೋಚ್‌ ಆಗಿದ್ದಾಗ ಸಂಜಯ್‌ ಬಂಗಾರ್‌ ಅವರನ್ನು ವಿಕ್ರಮ್‌ ರಾಥೋರ್‌ ಬದಲಿಗೆ ಬ್ಯಾಟಿಂಗ್‌ ಕೋಚ್‌ ಆಗಿ ನೇಮಿಸಿಕೊಳ್ಳಲಾಗಿತ್ತು. ದ್ರಾವಿಡ್‌ ಅವರು ಮುಖ್ಯ ಕೋಚ್‌ ಆದ ನಂತರ ವಿಕ್ರಮ್‌ ರಾಥೋರ್‌ ಬ್ಯಾಟಿಂಗ್‌ ಕೋಚ್‌ ಆಗಿ ಮುಂದುವರೆದಿದ್ದರು.

ಪ್ರಸ್ತುತ ಪರಾಸ್‌ ಮಾಂಬ್ರೆ ಬೌಲಿಂಗ್‌ ಹಾಗೂ ಟಿ ದಿಲೀಪ್‌ ಫೀಲ್ಡಿಂಗ್‌ ಕೋಚ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಗೌತಮ್‌ ಗಂಭೀರ್‌ ಕೋಚ್‌ ಆದ ನಂತರವಷ್ಟೆ ಬೆಂಬಲಿತ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇನ್ನೊಂದು ಪ್ರಮುಖವಾದ ವಿಚಾರವೆಂದರೆ ಗಂಭೀರ್ ತಂಡದಲ್ಲೂ ಬದಲಾವಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಕೆಕೆಆರ್‌ನ ಮುಖ್ಯ ಕೋಚ್‌ ಹಾಗೂ ಮಾರ್ಗದರ್ಶಕರಾಗಿರುವ ಗಂಭೀರ್‌ ನೇತೃತ್ವದಲ್ಲಿ ತಂಡವು  ಐಪಿಎಲ್‌ನಲ್ಲಿ 2024ರಲ್ಲಿ ಟ್ರೋಫಿಯನ್ನು ಎತ್ತಿಹಿಡಿದಿತ್ತು.

“ನಾನು ಭಾರತ ತಂಡದ ಕೋಚ್‌ ಆಗಲು ಇಷ್ಟಪಡುತ್ತೇನೆ.ನಮ್ಮ ರಾಷ್ಟ್ರೀಯ ತಂಡದ ಮುಖ್ಯ ಕೋಚ್‌ ಸ್ಥಾನಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.ನೀವು 140 ಕೋಟಿ ಭಾರತೀಯರು ಹಾಗೂ ವಿಶ್ವವನ್ನು ಪ್ರತಿನಿಧಿಸುತ್ತೀರಿ” ಎಂದು ಇತ್ತೀಚಿಗಷ್ಟೆ ಸಂದರ್ಶನವೊಂದರಲ್ಲಿ ಗಂಭೀರ್ ಹೇಳಿದ್ದರು.

ಗಂಭೀರ್‌ 2011ರ ಏಕದಿನ ವಿಶ್ವಕಪ್‌ ಹಾಗೂ 2007ರ ಟಿ20 ವಿಶ್ವಕಪ್‌ ಭಾರತ ವಿಜೇತ ತಂಡದ ಸದಸ್ಯರಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...