ವಿಶ್ವಕಪ್ ಕ್ರಿಕೆಟ್ | ಅತ್ಯಂತ ವೇಗದ ಶತಕ ಬಾರಿಸಿ ದಾಖಲೆ ಸೃಷ್ಟಿಸಿದ ಮ್ಯಾಕ್ಸ್‌ವೆಲ್

Date:

ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್, ನೆದರ್‌ಲ್ಯಾಂಡ್ಸ್‌ ವಿರುದ್ಧ ದೆಹಲಿಯಲ್ಲಿ ಇಂದು ನಡೆದ ವಿಶ್ವಕಪ್ ಪಂದ್ಯದಲ್ಲಿ ಕೇವಲ 40 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ, ಏಕದಿನ ಕ್ರಿಕೆಟ್ ಇತಿಹಾಸದಲ್ಲಿಯೇ ಅತಿ ವೇಗದ ಶತಕ ಬಾರಿಸಿ ವಿಶ್ವದಾಖಲೆ ನಿರ್ಮಿಸಿದರು.

- Advertisement -

46.2ನೇ ಓವರ್‌ ಇದ್ದಾಗ ಅರ್ಧ ಶತಕ ಸಿಡಿಸಿದ್ದ ಮ್ಯಾಕ್ಸ್‌ವೆಲ್, 48.4 ಓವರ್‌ ವೇಳೆಗೆ ಭರ್ಜರಿ ಸಿಕ್ಸ್‌, ಫೋರ್‌ಗಳ ನೆರವಿನೊಂದಿಗೆ ಮುಂದಿನ 14 ಎಸೆತಗಳಲ್ಲಿ ಶತಕ ಪೂರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಶ್ವದಾಖಲೆಯ ಶತಕ ಸಿಡಿಸಿದ ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 44 ಎಸೆತಗಳಲ್ಲಿ 9 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸ್‌ನ ನೆರವಿನೊಂದಿಗೆ 106 ರನ್ ಗಳಿಸಿ 50ನೇ ಓವರ್‌ನಲ್ಲಿ ಔಟಾದರು.

ತನ್ನ ಈ ಐತಿಹಾಸಿಕ ಸಾಧನೆಯನ್ನು ಇತ್ತೀಚೆಗೆ ಜನಿಸಿದ ತನ್ನ ಮಗ ಲೋಗನ್ ಮೇವರಿಕ್ ಮ್ಯಾಕ್ಸ್‌ವೆಲ್‌ಗೆ ಅರ್ಪಿಸುವುದಾಗಿ ತಿಳಿಸಿದರು.

ನೆದರ್‌ಲ್ಯಾಂಡ್ಸ್‌ ಗೆಲುವಿಗೆ ಕಠಿಣ ಗುರಿ
ಬುಧವಾರ(ಅ25) ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 24ನೇ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್‌ ತಂಡದ ವಿರುದ್ಧ ಆಸ್ಟ್ರೇಲಿಯಾ ಡೇವಿಡ್ ವಾರ್ನರ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 399 ರನ್‌ಗಳನ್ನು ಗಳಿಸಿದ್ದು, ನೆದರ್‌ಲ್ಯಾಂಡ್ಸ್‌ ತಂಡಕ್ಕೆ 400 ರನ್‌ಗಳ ಗುರಿ ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಆಸ್ಟ್ರೇಲಿಯಾ ತಂಡದ ಇನ್ನಿಂಗ್ಸ್ ಆರಂಭಿಸಿದ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಉತ್ತಮ ಆರಂಭ ನೀಡಲಾಗಲಿಲ್ಲ. ಮಾರ್ಷ್ ಕೇವಲ 9 ರನ್ ಗಳಿಸಿ ಔಟಾದರು. ನಂತರ ಜೊತೆಯಾದ ಡೇವಿಡ್ ವಾರ್ನರ್ ಮತ್ತು ಸ್ಟೀವನ್ ಸ್ಮಿತ್ 2ನೇ ವಿಕೆಟ್‌ಗೆ 132 ರನ್‌ಗಳ ಜೊತೆಯಾಟ ನಿರ್ಮಿಸಿದರು.

ಸ್ಟೀವನ್ ಸ್ಮಿತ್ 68 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ 71 ರನ್ ಗಳಿಸಿ ಔಟಾದರು. ಬಳಿಕ ಕ್ರೀಸ್‌ಗೆ ಆಗಮಿಸಿದ ಮಾರ್ನಸ್ ಲ್ಯಾಬುಶೈನ್ 47 ಎಸೆತಗಳಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್ ಸಮೇತ 62 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ವೇಳೆ ಬ್ಯಾಟಿಂಗ್‌ಗೆ ಬಂದ ಜೋಶ್ ಇಂಗ್ಲಿಸ್ 12 ಎಸೆತಗಳಲ್ಲಿ 1 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 14 ರನ್ ಗಳಿಸಿ ಔಟಾದರು. ಡೇವಿಡ್ ವಾರ್ನರ್ ಸತತ ಎರಡನೇ ಶತಕ ಬಾರಿಸಿದರು. 93 ಎಸೆತಗಳಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್ ಸಮೇತ 104 ರನ್ ಬಾರಿಸಿದರು. ವಿಶ್ವದಾಖಲೆಯ ಶತಕ ಸಿಡಿಸಿದ ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 44 ಎಸೆತಗಳಲ್ಲಿ 9 ಬೌಂಡರಿ ಹಾಗೂ 8 ಭರ್ಜರಿ ಶತಕದ ನೆರವಿನೊಂದಿಗೆ 106 ರನ್ ಗಳಿಸಿ ಕೊನೆಯ ಓವರ್‌ನಲ್ಲಿ ಔಟಾದರು. ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ಮಿಚೆಲ್ ಸ್ಟಾರ್ಕ್ ತಲಾ 8 ರನ್ ಗಳಿಸಿದರು.

ಬೌಲಿಂಗ್‌ನಲ್ಲಿ ನೆದರ್‌ಲ್ಯಾಂಡ್ಸ್‌ ಪರ ಲೋಗನ್ ವ್ಯಾನ್ ಬೀಕ್ 10 ಓವರ್‌ಗಳಲ್ಲಿ 74 ರನ್ ನೀಡಿ 4 ವಿಕೆಟ್ ಕಬಳಿಸಿದರೆ, ಬಾಸ್ ಡಿ ಲೀಡ್ 10 ಓವರ್‌ಗಳಲ್ಲಿ 115 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಆರ್ಯನ್ ದತ್ 1 ವಿಕೆಟ್ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...