ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

Date:

ಕಳಪೆ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟ್ ಆಟಗಾರರಾದ ವಿರಾಟ್‌ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ವಿರುದ್ಧ ಭಾರತ ತಂಡದ ಮಾಜಿ ಕೋಚ್‌ ಹಾಗೂ ರವಿ ಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಐಸಿಸಿ ಪರಿಶೀಲನಾ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, “ಅವರಿಗೆ ಟೆಸ್ಟ್‌ನಲ್ಲಿ ಹೆಚ್ಚು ಅಂತರವಿದ್ದರೆ ಅವರು ದೇಶೀಯ ಕ್ರಿಕೆಟ್‌ಗೆ ಹಿಂತಿರುಗಿ ಅಲ್ಲಿ ಕೆಲವು ಪಂದ್ಯಗಳನ್ನು ಆಡಬೇಕು. ನೀವು ಹೆಚ್ಚು ಸಮಯವಿರುವ ಟೆಸ್ಟ್‌ ಕ್ರಿಕೆಟ್ ಆಡುವಾಗ ಎರಡು ಕಾರಣಗಳಿಗೆ ದೇಶೀಯ ಕ್ರಿಕೆಟ್ ಮುಖ್ಯವಾಗುತ್ತದೆ. ನೀವು ಇಂದಿನ ಪೀಳಿಗೆಯ ಆಟಗಾರರ ಜೊತೆ ಇರುತ್ತೀರಿ. ನಿಮ್ಮ ಅನುಭವದೊಂದಿಗೆ ಕಿರಿಯರಿಗೆ ಮಾರ್ಗದರ್ಶನ ನೀಡಲು ಅನುಕೂಲವಾಗುತ್ತದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್‌ – ಗವಾಸ್ಕರ್‌ ಟ್ರೋಫಿಯನ್ನು ಟೀಂ ಇಂಡಿಯಾ ಸೋತಾದ ಹಲವು ಹಿರಿಯ ಆಟಗಾರರ ವಿರುದ್ದ ಟೀಕೆಗಳು ವ್ಯಕ್ತವಾದವು. ಈ ಸರಣಿಯಲ್ಲಿ ಕೊಹ್ಲಿ 5 ಟೆಸ್ಟ್‌ಗಳಲ್ಲಿ 190 ರನ್‌ ಮಾತ್ರ ಪೇರಿಸಿದ್ದರೆ, ನಾಯಕ ರೋಹಿತ್‌ ಶರ್ಮಾ ಬ್ಯಾಟಿಂಗ್‌ ಸರಾಸರಿ 6.2 ಮಾತ್ರ ಇತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

“ಎದುರಾಳಿ ತಂಡದಲ್ಲಿ ಗುಣಮಟ್ಟದ ಸ್ಪಿನ್ನರ್‌ಗಳಿದ್ದರೆ, ಅವರು ಬ್ಯಾಟರ್‌ಗಳಿಗೆ ತೊಂದರೆ ನೀಡುತ್ತಾರೆ. ಹಾಗೆಯೇ ಟಿಂ ಇಂಡಿಯಾಗೂ ಮಾರಕವಾಗಿ ಪರಿಣಮಿಸುತ್ತಾರೆ. ಇಬ್ಬರು ಆಟಗಾರರಿಗೆ ರನ್‌ಗಳ ಬರ ಎಷ್ಟಿದೆಯೆಂದು ತಿಳಿಯುತ್ತದೆ. ಒಬ್ಬರಿಗೆ 36 ವರ್ಷವಾಗಿದ್ದರೆ, ಮತ್ತೊಬ್ಬರಿಗೆ 38 ವರ್ಷವಾಗಿದೆ. ನೀವು ತೆಂಡೂಲ್ಕರ್‌ ಅವರ ಕೊನೆಯ ಆಟದ ವರ್ಷಗಳನ್ನು ಗಮನಿಸಿ, ಅವರು ಉತ್ತಮ ಆಟವಾಡದಿದ್ದರೂ ಮುಂದಿನ ಪೀಳಿಗೆಯ ಆಟಗಾರರಿಗೆ ಉತ್ತಮ ಮಾರ್ಗದರ್ಶನ ನೀಡುತ್ತಿದ್ದರು” ಎಂದು ರವಿಶಾಸ್ತ್ರಿ ಹೇಳಿದ್ದಾರೆ.

“ವಿರಾಟ್‌ ಕೊಹ್ಲಿ ಅವರಂತಹ ಹಿರಿಯರಿಂದ ಯಶಸ್ವಿ ಜೈಸ್ವಾಲ್, ಶುಭ್‌ಮನ್‌ ಗಿಲ್, ರಿಷಭ್ ಪಂತ್‌ರಂಥ ಕಿರಿಯರು ಮಾರ್ಗದರ್ಶನ ಪಡೆಯಬೇಕಿದೆ. ಈ ಇಬ್ಬರು ಆಟಗಾರರು ಕಿರಿಯರಿಗೆ ತಮ್ಮ ವೃತ್ತಿ ಜೀವನದ ಅನುಭವವನ್ನು ಧಾರೆ ಎರೆಯಬೇಕಿದೆ” ಎಂದು ರವಿ ಶಾಸ್ತ್ರಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...