ಪ್ಯಾರಾಲಿಂಪಿಕ್‌ ಪಟು ವಿಶ್ವಾಸ್‌ಗೆ ಬಹುಮಾನ ನೀಡದ ಸರ್ಕಾರಕ್ಕೆ 2 ಲಕ್ಷ ರೂ. ದಂಡ: ಹೈಕೋರ್ಟ್

Date:

ಅಂತಾರಾಷ್ಟ್ರೀಯ ಪ್ಯಾರಾ-ಈಜು ಸ್ಪರ್ಧೆಯಲ್ಲಿ ವಿಶ್ವಾಸ್‌ ಕೆ.ಎಸ್‌ ಅವರು ಕೈಗಳಿಲ್ಲದಿದ್ದರೂ, ಈಜಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರಿಗೆ ರಾಜ್ಯ ಸರ್ಕಾರವು ಯಾವುದೇ ಬಹುಮಾನ ನೀಡಿಲ್ಲ, ಗೌರವಿಸಿಲ್ಲ. ವಿಶ್ವಾಸ್‌ ಅವರನ್ನು ಸರ್ಕಾರ ಗೌರವಿಸಬೇಕಿತ್ತು ಎಂದಿರುವ ಕರ್ನಾಟಕ ಹೈಕೋರ್ಟ್‌, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಗೆ 2 ಲಕ್ಷ ರೂ. ದಂಡ ವಿಧಿಸಿದೆ.

- Advertisement -

2017 ಮತ್ತು 2023ರಲ್ಲಿ ಚಾಂಪಿಯನ್ ಆಗಿರುವ ವಿಶ್ವಾಸ್‌ ಅವರು ಪ್ರಾತಿನಿಧ್ಯಗಳನ್ನು ಸಲ್ಲಿಸಿದ್ದರು. ಆದರೂ, ಅವರಿಗೆ ಸರ್ಕಾರದಿಂದ ಯಾವುದೇ ಗೌರವ ದೊರೆತಿಲ್ಲ. ಪರಿಹಾರ ನೀಡಲಾಗಿಲ್ಲ. ಸರ್ಕಾರದ ಧೋರಣೆಯನ್ನು ಪ್ರಶ್ನಿಸಿ ವಿಶ್ವಾಸ್ ಅವರು 2023ರಲ್ಲಿ ಹೈಕೋರ್ಟ್‌ ಮೂಲಕ ನೋಟಿಸ್‌ ನೀಡಿದ ಬಳಿಕ, 4.74 ಲಕ್ಷ ರೂ.ಗಳನ್ನು ಸರ್ಕಾರ ಪಾವತಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಆದಾಗ್ಯೂ, ಪದಕಗಳನ್ನು ಗೆದ್ದಿದ್ದಕ್ಕಾಗಿ ಗೌರವಾರ್ಥವಾಗಿ ನೀಡಬೇಕಿದ್ದ 6 ಲಕ್ಷ ರೂಪಾಯಿಗಳಲ್ಲಿ 1.26 ಲಕ್ಷ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ಇದನ್ನು ಪ್ರಶ್ನಿಸಿ ವಿಶ್ವಾಸ್‌ ಮತ್ತೆ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅವರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌, “ಚಾಂಪಿಯನ್‌ ವಿಶ್ವಾಸ್ ಅವರು ಕೈಗಳಿಲ್ಲದೆ ಇದ್ದರೂ, ಈಜುಕೊಳಗಳಿಗೆ ಧುಮುಕಿ ವಿಜಯಶಾಲಿಯಾಗಿದ್ದಾರೆ. ಮಾತ್ರವಲ್ಲದೆ, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ವಿಜಯಶಾಲಿಯಾಗಿ ಹೊರಹೊಮ್ಮಿದ್ದಾರೆ. ಅವರನ್ನು ರಾಜ್ಯ ಸರ್ಕಾರವು ಗೌರವಿಸಬೇಕು. ಆದರೆ, ಅವರ ಹಕ್ಕನ್ನು ಹತ್ತಿಕ್ಕಿದೆ. ಇದು ಉತ್ತಮ ನಡೆಯಲ್ಲ” ಎಂದು ಹೇಳಿದೆ.

“ವಿಶ್ವಾಸ್‌ ಅವರಿಗೆ ಸರ್ಕಾರ ಬಿಡುಗಡೆ ಮಾಡಬೇಕಿದ್ದ 1.26 ಲಕ್ಷ ರೂ. ಮತ್ತು ಅವರ ಮೊಕದ್ದಮೆ ವೆಚ್ಚ 74 ಲಕ್ಷ ರೂ. ಎರಡೂ ಸೇರಿ 2 ಲಕ್ಷ ರೂ. ಪಾವತಿ ಮಾಡಬೇಕು. ಸರ್ಕಾರವು ಎರಡು ವಾರಗಳಲ್ಲಿ ಹಣವನ್ನು ಪಾವತಿಸದಿದ್ದರೆ, ವಿಳಂಬದ ದಿನಗಳಲ್ಲಿ ಎಷ್ಟು ದಿನ ತಡವಾಗುತ್ತದೆಯೋ, ಅಷ್ಟೂ ದಿನಕ್ಕೆ 1,000 ರೂ. ಭತ್ಯೆ ಪಾವತಿಸಬೇಕು” ಎಂದು ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...