ಇಂಗ್ಲೆಂಡ್‌ ಆಟಗಾರರ ವಿರುದ್ಧ ಶುಭ್‌ಮನ್‌ ಗಿಲ್ ವಾಗ್ವಾದ; ವೈರಲ್‌ ಆದ ವಿಡಿಯೋ

Date:

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಮೊದಲ ದಿನದಾಟದಲ್ಲಿ ಬಾಝ್ ಬಾಲ್ ಬದಲಿಗೆ ನಿಧಾನಗತಿಯಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ಇಂಗ್ಲೆಂಡ್ ಬ್ಯಾಟರ್​ಗಳನ್ನು ವ್ಯಂಗ್ಯವಾಡಿ ಗಮನ ಸೆಳೆದಿದ್ದ ಗಿಲ್, ಇದೀಗ ಮೂರನೇ ದಿನದಾಟದ ಅಂತ್ಯದ ವೇಳೆ ಆಂಗ್ಲ ಬ್ಯಾಟರ್​ಗಳ ಚಳಿ ಬಿಡಿಸಲು ಮುಂದಾಗಿದ್ದಾರೆ. ಈ ಪಂದ್ಯದಲ್ಲಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ 387 ರನ್​ಗಳಿಸಿ ಆಲೌಟ್ ಆದರೆ, ಟೀಮ್ ಇಂಡಿಯಾ ಕೂಡ 387 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತ್ತು.

- Advertisement -

ಇದರ ಬೆನ್ನಲ್ಲೇ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದರು. ಆದರೆ ಮೂರನೇ ದಿನದಾಟದ ಅಂತ್ಯದ ವೇಳೆ ಇನಿಂಗ್ಸ್ ಆರಂಭಿಸಿದ್ದರಿಂದ ಇಂಗ್ಲೆಂಡ್ ಆರಂಭಿಕ ಜೋಡಿ ಸಮಯ ವ್ಯರ್ಥ ಮಾಡುವ ಕಾಯಕಕ್ಕೆ ಕೈ ಹಾಕಿದ್ದರು. ಇತ್ತ ಅಲ್ಪ ಸಮಯದೊಳಗೆ ಎಷ್ಟು ಸಾಧ್ಯವೊ ಅಷ್ಟು ಓವರ್​ಗಳನ್ನು ಎಸೆಯುವ ನಿರ್ಧಾರದೊಂದಿಗೆ ಕಣಕ್ಕಿಳಿದ ಟೀಮ್ ಇಂಡಿಯಾಗೆ ಇಂಗ್ಲೆಂಡ್ ಬ್ಯಾಟರ್​ಗಳ ನಾಟಕ ಸ್ಪಷ್ಟವಾಗಿ ತಿಳಿಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಜಸ್​ಪ್ರೀತ್ ಬುಮ್ರಾ ಎಸೆದ 2ನೇ ಓವರ್​ನ 5ನೇ ಎಸೆತವು ಇಂಗ್ಲೆಂಡ್ ಆಟಗಾರ ಝಾಕ್ ಕ್ರಾಲಿ ಗ್ಲೌಸ್​ಗೆ ತಾಗಿದೆ. ಇದನ್ನೆ ನೆಪ ಮಾಡಿಕೊಂಡ ಕ್ರಾಲಿ ಕ್ರೀಸ್​ನಿಂದ ಹೊರಗೆ ನಿಂತು ನೋವಾಗುತ್ತಿದೆ ಎಂದು ನಾಟಕ ಮಾಡಲಾರಂಭಿಸಿದ್ದಾರೆ. ಇತ್ತ ಟೀಮ್ ಇಂಡಿಯಾ ಆಟಗಾರರು ಝಾಕ್ ಕ್ರಾಲಿಯ ಈ ನಾಟಕವನ್ನು ಚಪ್ಪಾಳೆ ತಟ್ಟುತ್ತಾ ಗೇಲಿ ಮಾಡಿದರು. ಅಲ್ಲದೆ ಜ್ಯಾಕ್ ಕ್ರಾಲಿ ಹಲವಾರು ಬಾರಿ ಸ್ಕ್ರೀಜ್‌ನಿಂದ ದೂರ ಸರಿದು ಸಮಯ ವ್ಯರ್ಥ ಮಾಡಿದರು. ಇದಕ್ಕೆ ಭಾರತದ ನಾಯಕ ಶುಭ್‌ಮನ್‌ ಗಿಲ್ ಜ್ಯಾಕ್ ಕ್ರಾಲಿಯ ಬಳಿ ಬಂದು ತಮ್ಮ ಕೋಪವನ್ನು ವ್ಯಕ್ತಪಡಿಸಲು ಕೈಯಿಂದ ಸನ್ನೆ ಮಾಡಿದರು. “ಕೊನೆಯವರೆಗೂ ಆಡುವಷ್ಟು ತಾಕತ್ತು ಪ್ರದರ್ಶಿಸು” ಎಂದು ಜಾಕ್‌ ಕ್ರಾಲಿಗೆ ಸವಾಲೆಸೆದರು. ಆದಾದ ನಂತರ ಇಬ್ಬರ ನಡುವೆ ಕೆಲಕ್ಷಣಗಳವರೆಗಿನ ವಾಗ್ವಾದಕ್ಕೆ ಕಾರಣವಾಯಿತು.

ಇದನ್ನು ಓದಿದ್ದೀರಾ? ಇಂಗ್ಲೆಂಡ್‌ ನೆಲದಲ್ಲಿ ಹೊಸ ದಾಖಲೆ ಬರೆದ ಭಾರತದ ಮಹಿಳಾ ಕ್ರಿಕೆಟ್ ತಂಡ

ಆದರೆ ಇಷ್ಟಕ್ಕೆ ಸುಮ್ಮನಾಗದ ಜ್ಯಾಕ್‌ ಕ್ರಾಲಿ, ಕೆಲವು ಎಸೆತಗಳ ನಂತರ ಮತ್ತೆ ಸಮಯ ವ್ಯರ್ಥ ಮಾಡುವ ತಂತ್ರಗಾರಿಕೆಗೆ ಮೊರೆ ಹೋದರು. ಡಕೆಟ್ ಜೊತೆ ಮಾತನಾಡಲು ತೆರಳಿದ ಕ್ರಾಲಿ ಅವರಿಗೆ ಭಾರತೀಯ ಆಟಗಾರರು ವ್ಯಂಗ್ಯ ಮಾಡಲು ಚಪ್ಪಾಳೆ ತಟ್ಟಿದರು. ಈ ವೇಳೆ ಮತ್ತೊಮ್ಮೆ ಕ್ರಾಲಿ ಬಳಿ ಬಂದ ಗಿಲ್‌, ವಾಗ್ವಾದಕ್ಕಿಳಿದರು. ಇದಾದ ಬಳಿಕ ಮತ್ತೋರ್ವ ಆಟಗಾರ ಬೆನ್ ಡಕೆಟ್ ಹಾಗೂ ಶುಭ್​ಮನ್ ಗಿಲ್ ನಡುವೆ ಮಾತಿನ ಚಕಮಕಿ ನಡೆಯಿತು. ಕೂಡಲೇ ಮಧ್ಯಪ್ರವೇಶಿದ ಅಂಪೈರ್‌ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಇದೀಗ ಶುಭ್​ಮನ್ ಗಿಲ್ ಅವರ ಈ ವಾರ್ನಿಂಗ್ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...