ಐಪಿಎಲ್ 2023 | ಟಾಸ್‌ ಗೆದ್ದ ಹಾರ್ದಿಕ್ ಪಾಂಡ್ಯ; ಎರಡೂ ತಂಡಗಳಲ್ಲೂ ಬದಲಾವಣೆ  

Date:

Advertisements

ಐಪಿಎಲ್ 16ನೇ ಆವೃತ್ತಿಯ ಏಳನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಗುಜರಾತ್ ಟೈಟಾನ್ಸ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಗುಜರಾತ್‌ ಮೊದಲ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದರೆ, ಡೆಲ್ಲಿ ಜಯದ ನಿರೀಕ್ಷೆಯಲ್ಲಿದೆ. ಗುಜರಾತ್ ಟೈಟಾನ್ಸ್ ತಂಡದಲ್ಲಿ 2 ಮಹತ್ವದ ಬದಲಾವಣೆ ಮಾಡಲಾಗಿದ್ದು, ಗಾಯಗೊಂಡಿರುವ ಕೇನ್ ವಿಲಿಯಮ್ಸನ್ ಬದಲು ಡೇವಿಡ್ ಮಿಲ್ಲರ್ ಹಾಗೂ ವಿಜಯ್ ಶಂಕರ್ ಬದಲು ಸಾಯಿ ಸುದರ್ಶನ್ ತಂಡ ಸೇರಿಕೊಂಡಿದ್ದಾರೆ.

ಡೆಲ್ಲಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. 20 ವರ್ಷದ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್‌ಮನ್ ಅಭಿಷೇಕ್ ಪೊರೆಲ್ ಪದಾರ್ಪಣೆ ಮಾಡಿದ್ದಾರೆ. ರೊವ್ಮೆನ್ ಪೊವೆಲ್ ತಂಡದಿಂದ ಹೊರಬಿದ್ದಿದ್ದು, ಅನ್ರಿಚ್ ನೋರ್ಜೆ ಡೆಲ್ಲಿ ತಂಡ ಸೇರಿಕೊಂಡಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಲ್ ತಲಾ ಒಂದು ಪಂದ್ಯ ಆಡಿದೆ. ಇದರ ಫಲಿತಾಂಶದ ಆಧಾರದಲ್ಲಿ ಗುಜರಾತ್ ಟೈಟಾನ್ಸ್ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 9ನೇ ಸ್ಥಾನದಲ್ಲಿದೆ. 

ಪಂದ್ಯವಾಡುವ ಹನ್ನೊಂದರ ಬಳಗ

ಗುಜರಾತ್ ಟೈಟಾನ್ಸ್
ವೃದ್ಧಿಮಾನ್ ಸಾಹ, ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ಟಿವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶುವಾ ಲಿಟಲ್, ಯಶ್ ದಯಾಳ್, ಅಲ್ಜಾರಿ ಜೆಸೋಫ್

ಡೆಲ್ಲಿ ಕ್ಯಾಪಿಟಲ್ಸ್
ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಶ್, ರಿಲೆ ರೊಸೊ, ಸರ್ಫರಾಜ್ ಖಾನ್, ಅಕ್ಸರ್ ಪಟೇಲ್, ಅಭಿಷೇಕ್ ಪೊರೆಲ್, ಕುಲ್ದೀಪ್ ಯಾದವ್, ಚೇತನ್ ಸಕಾರಿಯಾ, ಖಲೀಲ್ ಅಹಮ್ಮದ್, ಅನ್ರಿಚ್ ನೋರ್ಜೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ: ಪಾಕಿಸ್ತಾನದ ಕಾಲೆಳೆದ ಪ್ರಧಾನಿ ಮೋದಿ

ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ...

ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ಶೀತಲ್ ದೇವಿಗೆ ಐತಿಹಾಸಿಕ ಚಿನ್ನ; ವಿಶ್ವ ಪ್ಯಾರಾ ಆರ್ಚರಿಯಲ್ಲಿ ಭಾರತದ ಹೆಮ್ಮೆ

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

Download Eedina App Android / iOS

X