ಐಪಿಎಲ್‌ 2023 | ಗುಜರಾತ್‌ vs ಡೆಲ್ಲಿ; ಒತ್ತಡದಲ್ಲಿ ವಾರ್ನರ್‌ ಪಡೆ, ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

Date:

  • ಗೆಲ್ಲಲೇ ಬೇಕಾದ ಒತ್ತಡದಲ್ಲಿ ವಾರ್ನರ್‌ ನೇತೃತ್ವದ ಡೆಲ್ಲಿ
  • ಎಂಟು ಪಂದ್ಯಗಳಲ್ಲಿ 2 ಗೆಲುವು ಕಂಡಿರುವ ವಾರ್ನರ್‌ ಪಡೆ

ಐಪಿಎಲ್‌ 16ನೇ ಆವೃತ್ತಿಯಲ್ಲಿ ಮಂಗಳವಾರ ನಡೆಯುವ ಪಂದ್ಯದಲ್ಲಿ ʻಟೇಬಲ್‌ ಟಾಪರ್‌ʼ ಗುಜರಾತ್‌ ಟೈಟನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಈಗಾಗಲೇ 8 ಪಂದ್ಯಗಳನ್ನಾಡಿರುವ ಡೇವಿಡ್‌ ವಾರ್ನರ್‌ ಸಾರಥ್ಯದ ಡೆಲ್ಲಿ ಕೇವಲ 2 ಪಂದ್ಯಗಳಲ್ಲಷ್ಟೇ ಗೆಲುವಿನ ಸವಿಯುಂಡಿದೆ. ಮತ್ತೊಂದೆಡೆ ಗುಜರಾತ್‌ ಟೈಟನ್ಸ್‌ ಕೇವಲ 2 ಪಂದ್ಯಗಳಲ್ಲಷ್ಟೇ ಸೋಲು ಕಂಡಿದೆ.

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ, ಕ್ವಾಲಿಫೈಯರ್‌ ಆಸೆಯನ್ನು ಜೀವಂತವಾಗಿರಿಸಬೇಕಾದರೆ ಇನ್ನುಳಿದ ಎಲ್ಲಾ 6 ಪಂದ್ಯಗಳಲ್ಲಿ ಗೆಲುವು ಅನಿವಾರ್ಯ.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ಚೆನ್ನೈ vs ಪಂಜಾಬ್;‌ ವಿಶಿಷ್ಠ ದಾಖಲೆ ಬರೆದ ಎಂಎಸ್‌ ಧೋನಿ

ಅಹ್ಮದಾಬಾದ್‌ನಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಸುರಿಯುತ್ತಿದ್ದು, ಇಂದಿನ ಪಂದ್ಯ ನಡೆಯುವುದು ಬಹುತೇಕ ಅನುಮಾನ ಎನಿಸಿದೆ. ಪಂದ್ಯ ರದ್ದಾದರೆ ಗುಜರಾತ್‌ ಅಗ್ರಸ್ಥಾನದಲ್ಲೇ ಮುಂದುವರಿಯಲಿದೆ. ಆದರೆ ಡೆಲ್ಲಿಯ ನಾಕೌಟ್‌ ಪಯಣದ ಕನಸು ಬಹುತೇಕ ಭಗ್ನವಾಗಲಿದೆ.  

ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಫಿಲ್ ಸಾಲ್ಟ್, ಡೇವಿಡ್ ವಾರ್ನರ್‌ ಹಾಗೂ ಮಿಚೆಲ್ ಮಾರ್ಷ್ ಅವರನ್ನೇ  ಬಹುವಾಗಿ ನೆಚ್ಚಿಕೊಂಡಿದೆ. ಉಳಿದಂತೆ ಭಾರತೀಯ ಬ್ಯಾಟರ್‌ಗಳಾದ ಪೃಥ್ವಿ ಶಾ, ಮನೀಶ್ ಪಾಂಡೆ, ಸರ್ಫರಾಜ್ ಖಾನ್, ಯಶ್ ಧುಲ್, ಅಮನ್ ಖಾನ್, ರಿಪಾಲ್ ಪಟೇಲ್, ಅಭಿಷೇಕ್ ಪೊರೆಲ್, ಪ್ರಿಯಮ್ ಗಾರ್ಗ್ ತಂಡದ ಗೆಲುವಿನತ್ತ ಕೊಂಡೊಯ್ಯುವ ಇನ್ನಿಂಗ್ಸ್‌ ಆಡುವಲ್ಲಿ ವಿಫಲರಾಗಿದ್ದಾರೆ.

ರೋವ್ಮನ್ ಪೊವೆಲ್ ಅಲಭ್ಯತೆ ಗಾಯದ ಮೇಲೆ ಬರೆ ಎಂಬಂತಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಸಿಸಿ ಏಕದಿನ ರ್‍ಯಾಂಕಿಂಗ್ | ವಿಶ್ವದ ನಂಬರ್ ಒನ್ ಬೌಲರ್ ಆಗಿ ವೇಗಿ ಮೊಹಮ್ಮದ್ ಸಿರಾಜ್

ಕಳೆದ ರವಿವಾರ ಶ್ರೀಲಂಕಾ ವಿರುದ್ಧ ನಡೆದ ಏಷ್ಯಾ ಕಪ್ ಫೈನಲ್‌ನಲ್ಲಿ ಟೀಮ್...

ಏಷ್ಯಾ ಕಪ್ ಫೈನಲ್ | ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ಅರ್ಪಿಸಿದ ಸಿರಾಜ್

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ...

ಏಷ್ಯಾ ಕಪ್ ಫೈನಲ್ | ಸಿರಾಜ್ ಮ್ಯಾಜಿಕ್; 8ನೇ ಬಾರಿಗೆ ಟೀಮ್ ಇಂಡಿಯಾ ಚಾಂಪಿಯನ್

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ...

ಏಷ್ಯಾ ಕಪ್ ಫೈನಲ್ | 50 ರನ್‌ಗೆ ಆಲೌಟಾದ ಶ್ರೀಲಂಕಾ!

ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ...