ಐಪಿಎಲ್ | ಪಂಜಾಬ್ ವಿರುದ್ಧ ಗುಜರಾತ್ ಟೈಟನ್ಸ್‌ಗೆ ಮೂರು ವಿಕೆಟ್‌ಗಳ ಜಯ

Date:

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಗುಜರಾತ್‌ ಟೈಟನ್ಸ್‌ ತಂಡವು ಮೂರು ವಿಕೆಟ್‌ಗಳಿಂದ ಸೋಲಿಸಿದೆ.

ಶುಭ್ಮನ್‌ ಗಿಲ್‌ ಪಡೆಯ ಸಂಘಟಿತ ಬೌಲಿಂಗ್‌ ದಾಳಿಗೆ ತತ್ತರಿಸಿದ್ದ ಪಂಜಾಬ್‌ ಬ್ಯಾಟರ್‌ಗಳು, ಸಾಲು ಸಾಲು ವಿಕೆಟ್‌ ಕಳೆದುಕೊಂಡು ಪೆವಿಲಿಯನ್‌ ಕಡೆ ಹೆಜ್ಜೆ ಹಾಕಿದ್ದರಿಂದ ನಿಗದಿತ 20 ಓವರ್‌ಗಳಲ್ಲಿ ಆಲೌಟ್ ಆಗಿ, ಕೇವಲ 143 ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಗುಜರಾತ್, 19.1 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 146 ರನ್ ಗಳಿಸಿತು. ಕೊನೆಯ ಓವರ್‌ನ ಮೊದಲ ಎಸೆತವನ್ನು ಬೌಂಡರಿಗೆ ಬಾರಿಸುವ ಮೂಲಕ ರಾಹುಲ್ ತೆವಾಟಿಯಾ ತಂಡಕ್ಕೆ ಗೆಲುವು ತಂದುಕೊಟ್ಟರು.

ಗುಜರಾತ್ ಪರ ಬ್ಯಾಟಿಂಗ್‌ನಲ್ಲಿ ನಾಯಕ ಶುಭ್‌ಮನ್ ಗಿಲ್ 35, ರಾಹುಲ್ ತೆವಾಟಿಯಾ 36, ಸಾಯಿ ಸುದರ್ಶನ್ 31 ರನ್ ಗಳಿಸಿ, ತಂಡದ ಗೆಲುವಿನಲ್ಲಿ ತಮ್ಮದೇ ಕೊಡುಗೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪಂಜಾಬ್ ಪರ ಬೌಲಿಂಗ್‌ನಲ್ಲಿ ಹರ್ಷಲ್ ಪಟೇಲ್ 3, ಲಿವಿಂಗ್‌ಸ್ಟನ್ 2, ಸ್ಯಾಮ್ ಕರನ್ ಹಾಗೂ ಅರ್ಷ್‌ದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಪಡೆದರು.

ಗುಜರಾತ್‌ ಬೌಲಿಂಗ್‌ ಪ್ರದರ್ಶನ

ಗುಜರಾತ್‌ ಪರ ಉತ್ತಮ ಬೌಲಿಂಗ್‌ ಪ್ರದರ್ಶನ ಇಂದು ಕಂಡು ಬಂತು. ರವಿಶ್ರೀನಿವಾಸನ್ ಸಾಯಿ ಕಿಶೋರ್ ಅವರು ಪ್ರಮುಖ ನಾಲ್ಕು ವಿಕೆಟ್‌ಗಳನ್ನು ಕಬಳಿಸಿ ಮಿಂಚಿದರು. ನೂರ್ ಅಹ್ಮದ್ ಮತ್ತು ಮೋಹಿತ್ ಶರ್ಮಾ ತಲಾ ಎರಡು ವಿಕೆಟ್‌ ಹಾಗೂ ರಶೀದ್‌ ಖಾನ್‌ ಒಂದು ವಿಕೆಟ್‌ ಉರುಳಿಸುವ ಮೂಲಕ ಪಂಜಾಬ್‌ ಬ್ಯಾಟರ್‌ಗಳನ್ನು 142ಕ್ಕೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ಬಾರಿಯ ಐಪಿಎಲ್‌ನಲ್ಲಿ ಸದ್ದೇ ಮಾಡದ ಮ್ಯಾಕ್ಸ್‌ವೆಲ್ ಬ್ಯಾಟ್‌: ಗಳಿಸಿದ್ದು ಕೇವಲ 52 ರನ್!

ಬುಧವಾರ ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಎಲಿಮಿನೇಟರ್...

ಸೋಲಿನೊಂದಿಗೆ ಐಪಿಎಲ್‌ಗೆ ವಿದಾಯ ಹೇಳಿದ ‘ಮ್ಯಾಚ್ ಫಿನಿಶರ್ ದಿನೇಶ್ ಕಾರ್ತಿಕ್’

17ನೇ ಆವೃತ್ತಿಯ ಫೈನಲ್ ತಲುಪುವ ಭರವಸೆ ಮೂಡಿಸಿದ್ದ ಅಭಿಮಾನಿಗಳ ಫೇವರೀಟ್ ತಂಡ...

ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 22ರಂದು ನಡೆದ 2024ರ ಇಂಡಿಯನ್...

ಐಪಿಎಲ್ | ರಾಜಸ್ಥಾನಕ್ಕೆ ಜಯ: ಆರ್‌ಸಿಬಿ ಕಪ್ ಕನಸು ಮತ್ತೆ ಭಗ್ನ

ಲೀಗ್ ಹಂತದ ಪ್ರಮುಖ ಆರು ಪಂದ್ಯಗಳನ್ನು ಸತತವಾಗಿ ಗೆದ್ದು, ಪ್ಲೇ ಆಫ್...