ಐಪಿಎಲ್ | ಉಮೇಶ್ ಯಾದವ್ ಸಾಹಸ: ಮುಂಬೈ ವಿರುದ್ಧ ಗುಜರಾತ್‌ಗೆ 6 ರನ್‌ಗಳ ರೋಚಕ ಜಯ

Date:

ಗುಜರಾತ್‌ನ ಅಹ್ಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆದ ಐಪಿಎಲ್‌ನ 5ನೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್‌ ವಿರುದ್ಧ ಗುಜರಾತ್‌ ಟೈಟಾನ್ಸ್‌ ತಂಡವು 6 ರನ್‌ಗಳ ರೋಚಕ ಗೆಲುವು ದಾಖಲಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದ್ದ ನೂತನ ನಾಯಕ ಶುಭ್‌ಮನ್‌ ಗಿಲ್ ನೇತೃತ್ವದ ಗುಜರಾತ್‌ ಟೈಟಾನ್ಸ್‌ ತಂಡ, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್‌ ದಾಖಲಿಸಿತ್ತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 162 ರನ್ ಗಳಿಸಲಷ್ಟೇ ಶಕ್ತವಾಯಿತು.

ಮುಂಬೈ ಇಂಡಿಯನ್ಸ್‌ಗೆ ಕೊನೆಯ ಓವರ್‌ನಲ್ಲಿ ಗೆಲ್ಲಲು 19 ರನ್‌ಗಳ ಅವಶ್ಯಕತೆ ಇತ್ತು. ಈ ವೇಳೆ ಗುಜರಾತ್ ಪರ ದಾಳಿಗಿಳಿದ ವೇಗಿ ಉಮೇಶ್ ಯಾದವ್, ಮೊದಲ ಬಾಲ್‌ನಲ್ಲಿ ಸಿಕ್ಸ್‌ ಹಾಗೂ 2ನೇ ಎಸೆತದಲ್ಲಿ ಬೌಂಡರಿ ನೀಡಿದಾಗ ಗೆಲುವಿನ ಆಸೆ ಕಮರಿತ್ತು. ಮೂರನೇ ಬಾಲ್‌ನಲ್ಲಿ ಕಮ್‌ಬ್ಯಾಕ್ ಮಾಡಿದ ಯಾದವ್, ಹಾರ್ದಿಕ್ ಅವರ ವಿಕೆಟ್ ಪಡೆಯುವಲ್ಲಿ ಸಫಲರಾದರು. ಆ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು. ಬಳಿಕ ಕ್ರೀಸ್‌ಗೆ ಬಂದ ಪೀಯೂಷ್ ಚಾವ್ಲಾ ಕೂಡ ದೊಡ್ಡ ಹೊಡೆತಕ್ಕೆ ಯತ್ನಿಸಿದರಾದರೂ, ಬೌಂಡರಿ ಲೈನ್‌ನಲ್ಲಿದ್ದ ರಶೀದ್ ಖಾನ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ಕೊನೆಯಲ್ಲಿ ಬುಮ್ರಾ ಹಾಗೂ ಮುಲಾನಿ ಅವರು ಯತ್ನಿಸಿದರಾದರೂ ಲಕ್ ಅವರ ಕಡೆಗೆ ವಾಲಲಿಲ್ಲ. ಕೊನೆಗೆ 6 ರನ್‌ಗಳಿಂದ ಸೋಲಿಗೆ ಶರಣಾದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಗೆಲುವಿನ ಮೂಲಕ ಗುಜರಾತ್‌ ತಂಡದ ನೂತನ ಕ್ಯಾಪ್ಟನ್ ಶುಭ್‌ಮನ್ ಗಿಲ್, ನಾಯಕತ್ವ ನಿಭಾಯಿಸುವ ಶಕ್ತಿ ಪ್ರದರ್ಶಿಸಿದ್ದಾರೆ. ಐಪಿಎಲ್‌ನ ಆರಂಭದಿಂದಲೇ ವಿವಾದಕ್ಕೀಡಾಗಿದ್ದ ಹಾರ್ದಿಕ್ ಪಾಂಡ್ಯ, ಮೊದಲ ಪಂದ್ಯದಲ್ಲಿ ತನ್ನ ಹಳೆಯ ಫ್ರಾಂಚೈಸಿಯ ವಿರುದ್ಧ ಸೋಲನುಭವಿಸುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಪರವಾಗಿ ಬ್ಯಾಟಿಂಗ್‌ನಲ್ಲಿ ಮಾಜಿ ಕಪ್ತಾನ ರೋಹಿತ್ ಶರ್ಮಾ 43 ರನ್, ಇಂಪ್ಯಾಕ್ಟ್ ಆಟಗಾರ ಡೆವಾಲ್ಡ್ ಬ್ರೇವಿಸ್ 46, ತಿಲಕ್ ವರ್ಮಾ 25, ನಮನ್ ಧೀರ್ 20 ರನ್ ದಾಖಲಿಸಿದರು.

ಗುಜರಾತ್ ಪರವಾಗಿ ಉಮೇಶ್ ಯಾದವ್ 31ಕ್ಕೆ 2, ಅಝ್ಮತುಲ್ಲಾ ಒಮರ್ ಝಾಯ್ 27ಕ್ಕೆ 2, ಮೋಹಿತ್ ಶರ್ಮಾ 32ಕ್ಕೆ 2 ಹಾಗೂ ಸ್ಪೆನ್ಸರ್ ಜಾನ್ಸನ್ 25ಕ್ಕೆ 2 ವಿಕೆಟ್ ಪಡೆದು ಮಿಂಚಿದರೆ, ಸಾಯಿ ಕಿಶೋರ್ 24ಕ್ಕೆ 1 ವಿಕೆಟ್ ಪಡೆಯುವಲ್ಲಿ ಸಫಲರಾದರು.

ಸಂಕ್ಷಿಪ್ತ ಸ್ಕೋರ್

ಗುಜರಾತ್ ಟೈಟಾನ್ಸ್: 168ಕ್ಕೆ 6 ವಿಕೆಟ್

ಮುಂಬೈ ಇಂಡಿಯನ್ಸ್: 162ಕ್ಕೆ 9 ವಿಕೆಟ್

ಫಲಿತಾಂಶ: ಗುಜರಾತ್ ಟೈಟಾನ್ಸ್‌ಗೆ 6 ರನ್‌ಗಳ ರೋಚಕ ಜಯ

ಪಂದ್ಯಶ್ರೇಷ್ಠ: ಸಾಯಿ ಸುದರ್ಶನ್

45 ರನ್(39 ಎಸೆತ, 3 ಬೌಂಡರಿ, 1 ಸಿಕ್ಸ್)

(ಗುಜರಾತ್ ಟೈಟಾನ್ಸ್)

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ ಫೈನಲ್ | ಕೋಲ್ಕತ್ತಾ ನೈಟ್‌ ರೈಡರ್ಸ್‌ ಮಾರಕ ಬೌಲಿಂಗ್‌ಗೆ ಮಕಾಡೆ ಮಲಗಿದ ಹೈದರಾಬಾದ್!

ಐಪಿಎಲ್‌ನ ಲೀಗ್ ಹಂತದಲ್ಲಿ ಭರ್ಜರಿ ಸ್ಫೋಟಕ ಬ್ಯಾಟಿಂಗ್‌ನ ಕಾರಣಕ್ಕೆ ಸುದ್ದಿಯಾಗುತ್ತಿದ್ದ ಪ್ಯಾಟ್...

ಟಿ20 ವಿಶ್ವಕಪ್ | ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಅಮೆರಿಕಕ್ಕೆ ಹಾರಿದ ಟೀಮ್ ಇಂಡಿಯಾದ ಮೊದಲ ಬ್ಯಾಚ್

ಜೂನ್ 2ರಿಂದ ಆರಂಭವಾಗಲಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾ...

ಅವಕಾಶ ಕೈಚೆಲ್ಲಿದ ರಾಜಸ್ಥಾನ ಸ್ಪಿನ್ ಮೋಡಿಗೆ ‘ಬಲಿ’ : ಫೈನಲ್‌ಗೆ ಲಗ್ಗೆ ಇಟ್ಟ ಸನ್‌ರೈಸರ್ಸ್‌ ಹೈದರಾಬಾದ್

ಈ ಬಾರಿಯ ಐಪಿಎಲ್‌ನಲ್ಲಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಬಳಗ...