ಐಪಿಎಲ್ | ಮಳೆಯಿಂದ ರದ್ದಾದ ಕೆಕೆಆರ್-ಗುಜರಾತ್‌ ಪಂದ್ಯ: ಪ್ಲೇ-ಆಫ್ ರೇಸ್‌ನಿಂದ ಹೊರಬಿದ್ದ ಶುಭ್‌ಮನ್ ಬಳಗ

Date:

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಗುಜರಾತ್ ಟೈಟನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಧ್ಯೆ ನಿಗದಿಪಡಿಸಲಾಗಿದ್ದ 63ನೇ ಐಪಿಎಲ್ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ.

- Advertisement -

ಹವಾಮಾನ ವೈಪರೀತ್ಯದಿಂದಾಗಿ ಗುಜರಾತ್‌ನ ಹಲವು ಕಡೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಅಹ್ಮದಾಬಾದ್‌ನಲ್ಲೂ ಉತ್ತಮ ಮಳೆಯಾಗುತ್ತಿದ್ದು, 10.45ರ ಸುಮಾರಿಗೂ ಮಳೆ ನಿಲ್ಲದ ಕಾರಣ ಇಂದಿನ ಪಂದ್ಯವನ್ನು ರದ್ದುಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ ಐಪಿಎಲ್ ನಿಯಮದಂತೆ ಎರಡೂ ತಂಡಗಳಿಗೂ ತಲಾ ಎರಡು ಅಂಕಗಳನ್ನು ನೀಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಪ್ಲೇಆಫ್‌ಗೆ ಪ್ರಯಾಣಿಸುವಾಗ ತಮ್ಮ ಅಗ್ರ ಎರಡು ಸ್ಥಾನಗಳನ್ನು ಖಚಿತಪಡಿಸಿಕೊಂಡಿದೆ. ಕೆಕೆಆರ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಮೇ 19ರಂದು ಲೀಗ್‌ನ ಕೊನೆಯ ಹಾಗೂ 74ನೇ ಪಂದ್ಯವನ್ನಾಡಲಿದೆ.

ಇಂದಿನ ಪಂದ್ಯ ರದ್ದುಗೊಂಡ ಪರಿಣಾಮ ಪ್ಲೇ-ಆಫ್ ರೇಸ್‌ನಿಂದ ಶುಭ್‌ಮನ್ ಗಿಲ್ ನೇತೃತ್ವದ ಗುಜರಾತ್ ಟೈಟನ್ಸ್ ಅಧಿಕೃತವಾಗಿ ಹೊರಬಿದ್ದಿದೆ. ಗುಜರಾತ್ ಟೈಟನ್ಸ್ ತಂಡವು 2022ರಲ್ಲಿ ಐಪಿಎಲ್ ಚಾಂಪಿಯನ್ ಆಗಿದ್ದರೆ, 2023ರಲ್ಲಿ ಚೆನ್ನೈ ವಿರುದ್ಧ ಸೋತು ರನ್ನರ್ ಅಪ್ ಆಗಿತ್ತು. 2024ರ ಸಾಲಿನಲ್ಲಿ ಈವರೆಗೆ 13 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಐದು ಗೆಲುವು ಹಾಗೂ 7 ಸೋಲು, ಒಂದು ರದ್ದುನೊಂದಿಗೆ 11 ಅಂಕ ಗಳಿಸಿದ್ದು, ಲೀಗ್‌ ಹಂತದಲ್ಲೇ ಹೊರಬಿದ್ದಿದೆ.

ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ ಮೇ 16ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಕೊನೆಯ ಪಂದ್ಯವನ್ನು ಆಡಲಿದೆ. ಹೈದರಾಬಾದ್‌ ವಿರುದ್ಧ ಗೆದ್ದರೆ ಪ್ಲೇ ಆಫ್‌ ರೇಸ್‌ನಲ್ಲಿ ಇನ್ನೂ ಉಳಿದುಕೊಂಡಿರುವ ಆರ್‌ಸಿಬಿಗೆ ಲಾಭವಾಗುವ ಸಾಧ್ಯತೆ ಇದೆ. ಮೇ 18ರಂದು ಆರ್‌ಸಿಬಿ ಹಾಗೂ ಚೆನ್ನೈ ನಡುವೆ ಬೆಂಗಳೂರಿನಲ್ಲಿ ನಡೆಯಲಿರುವ ಪಂದ್ಯವು ರೋಚಕವಾಗಿರಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...