ಸ್ಮೃತಿ ಮಂಧಾನ ಶತಕದ ದಾಖಲೆ: ಟಿ20 ಚಾಂಪಿಯನ್ನರನ್ನು ಮಣಿಸಿದ ಭಾರತದ ವನಿತೆಯರು

Date:

ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ನ್ಯೂಜಿಲೆಂಡ್ ವಿರುದ್ಧದ ಸರಣಿಯ ಮೂರನೇ ಪಂದ್ಯದಲ್ಲಿ ಅದ್ಭುತ ಶತಕ ಸಿಡಿಸುವ ಮೂಲಕ ಅತಿಹೆಚ್ಚು ಏಕದಿನ ಶತಕ ಸಾಧಿಸಿದ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

- Advertisement -

ಮಿಥಾಲಿ ರಾಜ್ ಹೆಸರಿನಲ್ಲಿದ್ದ ಏಳು ಶತಕಗಳ ದಾಖಲೆಯನ್ನು ಮುರಿದ ಸ್ಮೃತಿ, ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಭಾರತ 2-1 ಅಂತರದಲ್ಲಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಇತ್ತೀಚಿಗಷ್ಟೆ ಟಿ20 ವಿಶ್ವಕಪ್ ಜಯಿಸಿದ್ದ ಕಿವೀಸ್‌ ಮಹಿಳೆಯರ ತಂಡ ಟೀಂ ಇಂಡಿಯಾ ವಿರುದ್ಧ ಸರಣಿ ಸೋತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗುಜರಾತ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಭಾರತ, ಪ್ರವಾಸಿ ತಂಡದ ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು. 122 ಎಸೆತಗಳಲ್ಲಿ 100 ರನ್‌ ಗಳಿಸಿದ ಮಂಧಾನ ತಮ್ಮ ಅದ್ಭುತ ಸಾಮರ್ಥ್ಯವನ್ನು ಪ್ರದರ್ಶಿಸಿದರು.

ಈ ಸುದ್ದಿ ಓದಿದ್ದೀರಾ? ಟಿ20 ಪಂದ್ಯದಲ್ಲಿ 344 ರನ್ ಬಾರಿಸಿದ ಜಿಂಬಾಬ್ವೆ: ಒಂದೇ ಪಂದ್ಯದಲ್ಲಿ 7 ವಿಶ್ವದಾಖಲೆ ನಿರ್ಮಾಣ

ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ 49.5 ಓವರ್‌ಗಳಲ್ಲಿ 232 ರನ್ ಗಳಿಸಿದರೆ, ಮಂಧಾನ ಶತಕದ ನೆರವಿನಿಂದ ಭಾರತ 44.2 ಓವರ್ ಗಳಲ್ಲಿ ಕೇವಲ 4 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.

ವಿಕೆಟ್ ಕೀಪರ್ ಯಷ್ಟಿಕಾ ಬಬಿತಾ 35 ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್ 59 ರನ್ ಗಳೊಂದಿಗೆ ಜೊತೆ ನೀಡಿದರು. ಸ್ಮೃತಿ ಮತ್ತು ಮಿಥಾಲಿ ರಾಜ್ ಬಳಿಕ ಭಾರತ ಏಕದಿನ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಆರು ಶತಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಇವರು ಕೂಡಾ ಪಂದ್ಯದ ಗತಿಯನ್ನು ಯಾವುದೇ ಕ್ಷಣದಲ್ಲಿ ಬದಲಾಯಿಸುವ ಸಾಮರ್ಥ್ಯ ಹೊಂದಿದ್ದಾರೆ. ಒತ್ತಡದ ನಡುವೆಯೂ ಅದ್ಭುತ ಪ್ರದರ್ಶನ ನೀಡುವ ಕೌಶಲ ಅವರದ್ದಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...