ಐಸಿಸಿ ಟಿ20 ರ‍್ಯಾಂಕಿಂಗ್: ಆಲ್‌ರೌಂಡರ್‌ಗಳಲ್ಲಿ ಮೊದಲ ಸ್ಥಾನಕ್ಕೇರಿದ ಹಾರ್ದಿಕ್ ಪಾಂಡ್ಯ

Date:

ಭಾರತ ಟಿ20 ವಿಶ್ವಕಪ್‌ ಗೆದ್ದ ನಂತರ ಟೀಂ ಇಂಡಿಯಾ ಆಟಗಾರರು ಮತ್ತಷ್ಟು ಮೈಲಿಗಲ್ಲನ್ನು ತಲುಪಿದ್ದಾರೆ. ಟ್ರೋಫಿ ಜಯಿಸಲು ಪ್ರಮುಖ ರೂವಾರಿಗಳಲ್ಲಿ ಒಬ್ಬರಾದ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಈ ಮುಂಚೆ ಮೊದಲ ಸ್ಥಾನದಲ್ಲಿದ್ದ ಶ್ರೀಲಂಕಾದ ವನಿಂದು ಹಸರಂಗ ಎರಡನೇ ಸ್ಥಾನಕ್ಕಿಳಿದಿದ್ದಾರೆ. ಟಿ20 ವಿಶ್ವಕಪ್‌ಗೂ ಮುನ್ನ ಹಾರ್ದಿಕ್‌ ಪಾಂಡ್ಯ ಮೂರನೇ ಸ್ಥಾನದಲ್ಲಿದ್ದರು.

- Advertisement -

ಟೀಂ ಇಂಡಿಯಾದ ಉಪ ನಾಯಕನಾಗಿರುವ ಹಾರ್ದಿಕ್‌ ಪಾಂಡ್ಯ ಟಿ20 ವಿಶ್ವಕಪ್‌ನಲ್ಲಿ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡೂ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಜೂನ್‌ 29ರಂದು ಬಾರ್ಬೊಡೋಸ್‌ನ ಕೆನ್ಸಿಂಗ್ಟ‌ನ್‌ ಓವಲ್‌ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ತೋರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ

ಭಾರತ ತಂಡ ನೀಡಿದ್ದ 177 ರನ್‌ಗಳ ಸವಾಲನ್ನು ದಕ್ಷಿಣ ಆಫ್ರಿಕಾ ಬೆನ್ನಟ್ಟುವ ಸಂದರ್ಭದಲ್ಲಿ ಹಾರ್ದಿಕ್‌ ಪಾಂಡ್ಯ ಉತ್ತಮವಾಗಿ ಆಟವಾಡುತ್ತಿದ್ದ ಹೆನ್ರಿಚ್‌ ಕ್ಲಾಸೆನ್‌ ಹಾಗೂ ಡೇವಿಡ್‌ ಮಿಲ್ಲರ್‌ ಅವರ ವಿಕೆಟ್‌ಗಳನ್ನು ಕಬಳಿಸುವ ಮೂಲಕ ಗೆಲುವಿನ ಪ್ರಮುಖ ಕಾರಣಕರ್ತರಾಗಿದ್ದರು.

ಟಿ20 ವಿಶ್ವಕಪ್‌ ಟೂರ್ನಿಯಲ್ಲಿ 8 ಪಂದ್ಯಗಳ 6 ಇನಿಂಗ್ಸ್‌ಗಳನ್ನು ಆಡಿರುವ ಹಾರ್ದಿಕ್‌ ಪಾಂಡ್ಯ ಬ್ಯಾಟಿಂಗ್‌ ವಿಭಾಗದಲ್ಲಿ 151.57 ಸ್ಟ್ರೈಕ್‌ ರೇಟ್‌ನಲ್ಲಿ ಒಂದು ಅರ್ಧ ಶತಕದೊಂದಿಗೆ 144 ರನ್‌ ಬಾರಿಸಿದ್ದರು. ಅದೇ 8 ಪಂದ್ಯಗಳಲ್ಲಿ 11 ವಿಕೆಟ್‌ಗಳನ್ನು ಕಬಳಿಸಿದ್ದರು. ಅವರ ಅತ್ಯುತ್ತಮ ಬೌಲಿಂಗ್‌ 3/20 ಆಗಿತ್ತು.

ಫೈನಲ್‌ನಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಟೀಂ ಇಂಡಿಯಾದ ವೇಗದ ಬೌಲರ್‌ ಜಸ್‌ಪ್ರೀತ್‌ ಬುಮ್ರಾ ಐಸಿಸಿ ಶ್ರೇಣಿಯಲ್ಲಿ 12ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಈ ಟೂರ್ನಮೆಂಟ್‌ನಲ್ಲಿ ಬುಮ್ರಾ 15 ವಿಕೆಟ್‌ಗಳನ್ನು ಕಬಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...