ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಇತಿಹಾಸದಲ್ಲಿ ಮೊದಲ ಬಾರಿಗೆ ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ.
ಕಳಪೆ ಪ್ರದರ್ಶನ ನೀಡಿದ ಪರಿಣಾಮ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಆ ಮೂಲಕ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರಾಸೆ ಮೂಡಿಸಿದೆ.
ವಿಶ್ವಕಪ್ ಕ್ವಾಲಿಫೈಯರ್ 2023 ಸೂಪರ್ ಸಿಕ್ಸ್ ಹಂತದ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಏಳು ವಿಕೆಟ್ಗಳಿಂದ ಸೋಲುಂಡ ಬಳಿಕ 2023ರ ವಿಶ್ವಕಪ್ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ.
48 ವರ್ಷಗಳ ಏಕದಿನ ವಿಶ್ವಕಪ್ ಪಂದ್ಯಾವಳಿಯ ಇತಿಹಾಸದಲ್ಲಿ ಅಗ್ರ 10 ತಂಡಗಳಲ್ಲಿ ಕಾಣಿಸಿಕೊಳ್ಳದಿರುವುದು ಇದೇ ಮೊದಲು. 1975 ಮತ್ತು 1979 ರಲ್ಲಿ ವಿಂಡೀಸ್ ತಂಡ ಚಾಂಪಿಯನ್ ಆಗಿತ್ತು.
ಅಕ್ಟೋಬರ್ 5, 2023ರಂದು ಭಾರತದಲ್ಲಿ ಏಕದಿನ ವಿಶ್ವಕಪ್ ಪ್ರಾರಂಭವಾಗಲಿದೆ.