​’ಭೂಮಿ ಖರೀದಿಸಲು ಸಹಾಯ ಮಾಡಿ’: ಉತ್ತರಾಖಂಡ್‌ ಸಿಎಂಗೆ ಮಧ್ಯರಾತ್ರಿ ರಿಷಭ್ ಪಂತ್ ಮನವಿ

Date:

ದೆಹಲಿಯಿಂದ ತಮ್ಮ ಹುಟ್ಟೂರಾದ ಉತ್ತರಾಖಂಡಕ್ಕೆ ವಾಸ್ತವ್ಯ ಬದಲಾಯಿಸಲು ಬಯಸಿರುವ ಟೀಮ್ ಇಂಡಿಯಾದ ತಾರಾ ಕ್ರಿಕೆಟಿಗ ರಿಷಭ್ ಪಂತ್, ಅಲ್ಲಿ ಜಮೀನು ಖರೀದಿಸಲು ಸಹಾಯ ಮಾಡುವಂತೆ ಕೋರಿ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಮಧ್ಯರಾತ್ರಿ ‘ಎಕ್ಸ್’ (X) ಜಾಲತಾಣದಲ್ಲಿ ಮನವಿ ಮಾಡಿದ್ದಾರೆ. ಪಂತ್ ಅವರ ಈ ಮನವಿಗೆ ತಕ್ಷಣವೇ ಸ್ಪಂದಿಸಿರುವ ಮುಖ್ಯಮಂತ್ರಿಗಳು, ನಿಯಮಾನುಸಾರ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -

​ಶನಿವಾರ ಮುಂಜಾನೆ ಸಿಎಂ ಧಾಮಿ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಮಾಡಿರುವ ಪಂತ್, “ಹಲೋ ಸರ್, ಹೇಗಿದ್ದೀರಿ? ದೆಹಲಿಯಿಂದ ಉತ್ತರಾಖಂಡಕ್ಕೆ ವಾಸ್ತವ್ಯ ಬದಲಾಯಿಸಲು ನಾನು ಜಮೀನು ಖರೀದಿಸಲು ಸಾಕಷ್ಟು ಪ್ರಯತ್ನಿಸುತ್ತಿದ್ದೇನೆ. ಆದರೆ ಇಲ್ಲಿ ವಾಸಿಸಲು ಅನುಕೂಲಕರವಾದ ಹಾಗೂ ದೊಡ್ಡದಾದ ಜಾಗ ಸಿಗುತ್ತಿಲ್ಲ. ನನ್ನ ಉತ್ತರಾಖಂಡವನ್ನು ನಾನು ಪ್ರೀತಿಸುತ್ತೇನೆ,” ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಕಾಲೇಜು ಕ್ಯಾಂಪಸ್‌ಗಳಲ್ಲಿ ದಲಿತ ವಿದ್ಯಾರ್ಥಿಗಳೇ ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ?

‘ದಲಿತ ವಿದ್ಯಾರ್ಥಿಗಳೇ ಏಕೆ ಹೀಗೆ ಸಾಯುತ್ತಿದ್ದಾರೆ?’ — ಇದು ಐಐಟಿ ಬಾಂಬೆಯ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ತಾಯಿ ಸೋನಾಲಿ ವಾಕೋಡೆ ಕೇಳಿದ ಪ್ರಶ್ನೆ. ಈ ಪ್ರಶ್ನೆ ಕೇವಲ ಮಗನನ್ನು ಕಳೆದುಕೊಂಡ ತಾಯಿಯ...

​”ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವುದಕ್ಕಾಗಿ ಉಡುಗೊರೆಯಾಗಿ ಜಾಗ ನೀಡಿದರೆ ಸಂತೋಷ. ಆದರೆ, ನಿಮ್ಮ ಅನುಮತಿಯಿದ್ದರೆ ನಾನೇ ಸರ್ಕಾರಿ ದರದಲ್ಲಿ ಜಮೀನು ಖರೀದಿಸಲು ಬಯಸುತ್ತೇನೆ. ನನ್ನ ರಾಜ್ಯದಲ್ಲಿಯೇ ನನ್ನ ಮೊದಲ ಮನೆ ಕಟ್ಟಿಕೊಳ್ಳಲು ದಯವಿಟ್ಟು ಸಹಾಯ ಮಾಡಿ. ಜಾಗದ ಖರೀದಿ ಪ್ರಕ್ರಿಯೆ ಹೇಗೆ ಮಾಡಬೇಕು ಎಂಬುದು ನನಗೆ ನಿಜಕ್ಕೂ ತಿಳಿದಿಲ್ಲ,” ಎಂದು ಅವರು ಮತ್ತೊಂದು ಪೋಸ್ಟ್‌ನಲ್ಲಿ ವಿನಂತಿಸಿದ್ದಾರೆ.

ಪಂತ್ ಅವರ ಪೋಸ್ಟ್ ವೈರಲ್ ಆಗಿ ನೆಟ್ಟಿಗರಿಂದ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾದ ಬೆನ್ನಲ್ಲೇ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಸ್ಪಂದಿಸಿದ್ದಾರೆ. “ಆತ್ಮೀಯ ರಿಷಭ್, ನೀವು ಉತ್ತರಾಖಂಡದ ಹೆಮ್ಮೆ. ನಿಮ್ಮ ಅದ್ಭುತ ಪ್ರದರ್ಶನ ಮತ್ತು ಸಾಧನೆಗಳ ಮೂಲಕ ದೇಶ-ವಿದೇಶಗಳಲ್ಲಿ ದೇವಭೂಮಿಯ ಹೆಸರನ್ನು ಬೆಳಗಿದ್ದೀರಿ. ಮಾತೃಭೂಮಿಯ ಮೇಲಿನ ನಿಮ್ಮ ಪ್ರೀತಿ ಹಾಗೂ ಮತ್ತೆ ಇಲ್ಲಿಗೆ ಮರಳಬೇಕೆಂಬ ನಿಮ್ಮ ಭಾವನೆ ಅತ್ಯಂತ ಶ್ಲಾಘನೀಯ,” ಎಂದು ಸಿಎಂ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

​”ನೀವು ಪ್ರಸ್ತಾಪಿಸಿರುವ ವಿಷಯದ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತಿದೆ. ಅವರು ಶೀಘ್ರದಲ್ಲೇ ನಿಮ್ಮನ್ನು ಸಂಪರ್ಕಿಸಿ, ನಿಯಮಾನುಸಾರ ಸಾಧ್ಯವಿರುವ ಎಲ್ಲ ಸಹಕಾರವನ್ನು ಖಚಿತಪಡಿಸುತ್ತಾರೆ,” ಎಂದು ಅವರು ಭರವಸೆ ನೀಡಿದ್ದಾರೆ.

ಉತ್ತರಾಖಂಡದ ರೂರ್ಕಿಯಲ್ಲಿ ಜನಿಸಿರುವ 28 ವರ್ಷದ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್, 2025-26ನೇ ಆರ್ಥಿಕ ವರ್ಷದಲ್ಲಿ ಉತ್ತರಾಖಂಡದ ಅತಿಹೆಚ್ಚು ವೈಯಕ್ತಿಕ ಆದಾಯ ತೆರಿಗೆ ಪಾವತಿಸಿದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ‘ಹಿಂದೂಸ್ತಾನ್ ಟೈಮ್ಸ್’ ವರದಿಯ ಪ್ರಕಾರ, ಅವರು ಈ ಆರ್ಥಿಕ ವರ್ಷದಲ್ಲಿ ಬರೋಬ್ಬರಿ 23.84 ಕೋಟಿ ರೂ. ಆದಾಯ ತೆರಿಗೆ ಪಾವತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಬೀದರ್‌ |ಬಿಎಸ್‌ಎಸ್‌ಕೆ ಪುನಶ್ಚೇತನಕ್ಕೆ ಸಿಎಂಗೆ ಮನವಿ

ಬೀದರ್ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಹಳ್ಳಿಖೇಡ (ಬಿ) ಸಮೀಪದ ಬೀದರ್ ಸಹಕಾರ...