ಐಪಿಎಲ್ 2025: ಪ್ಲೇ ಆಫ್‌ನಲ್ಲಿ ಯಾರ್ಯಾರು ಆಡುವುದಿಲ್ಲ: ಆಟಗಾರರ ಪಟ್ಟಿ ಇಲ್ಲಿದೆ

Date:

ಭಾರತ- ಪಾಕ್‌ ಸಂಘರ್ಷದಿಂದಾಗಿ ಐಪಿಎಲ್‌ ಪಂದ್ಯಗಳು ಒಂದು ವಾರ ಮುಂದಡಲ್ಪಟ್ಟದ್ದರಿಂದ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಿದೆ. ಇನ್ನು ಐಪಿಎಲ್‌ ಲೀಗ್‌ ಹಂತದ 13 ಹಾಗೂ ಪ್ಲೇ ಆಫ್‌ ಹಂತದ ನಾಲ್ಕು ಪಂದ್ಯಗಳು ಬಾಕಿ ಇವೆ. ಐಪಿಎಲ್‌ ಫೈನಲ್‌ ಪಂದ್ಯ ಜೂನ್‌ 3 ರಂದು ನಡೆಯಲಿದೆ. ಇದರ ಬಳಿಕ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ನಡೆಯಲಿದೆ. ಪ್ರಶಸ್ತಿ ಸುತ್ತಿನಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ. ಹೀಗಾಗಿ ದಕ್ಷಿಣ ಆಫ್ರಿಕಾದ ಆಟಗಾರರು ಪ್ಲೇ ಆಫ್‌ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

- Advertisement -

ಐಪಿಎಲ್‌ ಲೀಗ್‌ ಹಂತದ ಪಂದ್ಯಗಳು ಮುಗಿದ ಬಳಿಕ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಸಂಸ್ಥೆ ಆಟಗಾರರಿಗೆ ತವರಿಗೆ ಕರೆದಿದೆ. ಆಟಗಾರರು ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ಗೆ ತಯಾರಿ ನಡೆಸಲಿದ್ದಾರೆ. ಐಪಿಎಲ್‌ನಲ್ಲಿ ಭಾಗವಹಿಸುವ ಆಟಗಾರರಿಗೆ ಮೇ 27 ರಂದು ತವರಿಗೆ ಆಗಮಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸದ ಆಟಗಾರರು ಐಪಿಎಲ್‌ನಲ್ಲಿ ಮುಂದುವರೆಯಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದಕ್ಷಿಣ ಆಫ್ರಿಕಾದ ಒಟ್ಟು 20 ಆಟಗಾರರು ಈ ಬಾರಿಯ ಐಪಿಎಲ್‌ನಲ್ಲಿ ಆಡುತ್ತಿದ್ದಾರೆ. ಈ 20 ಆಟಗಾರರಲ್ಲಿ ಒಟ್ಟು 8 ಆಟಗಾರರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ ಭಾಗವಹಿಸಲಿದ್ದಾರೆ.

ಇದನ್ನು ಓದಿದ್ದೀರಾ? ಒಂದೇ ಓವರ್‌ನಲ್ಲಿ 6 ಸಿಕ್ಸ್‌; ಇಂಗ್ಲೆಂಡ್‌ನಲ್ಲಿ ಭಾರತೀಯ ಮೂಲದ ಆಟಗಾರನ ಸಾಧನೆ

ಇದರಲ್ಲಿ ಆರ್‌ಸಿಬಿ ತಂಡದ ಲುಂಗಿ ಎನ್‌ಗಿಡಿ, ಗುಜರಾತ್‌ ಟೂಟಾನ್ಸ್‌ನ ಕಗಿಸೋ ರಬಾಡ, ಎಲ್‌ಎಸ್‌ಜಿ ತಂಡದ ಐಡೆನ್ ಮಾರ್ಕ್ರಾಮ್‌, ಪಂಜಾಬ್‌ನ ಮಾರ್ಕೊ ಜಾನ್ಸೆನ್‌, ಡೆಲ್ಲಿ ತಂಡದ ಟ್ರಿಸ್ಟನ್ ಸ್ಟಬ್ಸ್, ಎಸ್‌ಆರ್‌ಎಚ್‌ ತಂಡದ ವಿಯಾನ್ ಮುಲ್ಡರ್, ಮುಂಬೈ ತಂಡದ ರಯಾನ್‌ ರಿಕಲ್ಟನ್‌ ಫೈನಲ್‌ಗೆ ಆಯ್ಕೆಯಾದ ಆಟಗಾರರು.

ಆಸ್ಟ್ರೇಲಿಯಾ ಕ್ರಿಕೆಟ್‌ ಮಂಡಳಿ ನಿರ್ಧಾರವನ್ನು ಆಟಗಾರರ ಮೇಲೆ ಬಿಟ್ಟಿದೆ. ಹೀಗಾಗಿ ಆಸೀಸ್ ಆಟಗಾರರು ಪ್ಲೇಆಫ್‌ನಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ.

ಆರ್‌ಸಿಬಿ ತಂಡದ ಜೋಶ್‌ ಹ್ಯಾಜಲ್‌ವುಡ್‌, ಡೆಲ್ಲಿ ತಂಡದ ಮಿಚೆಲ್ ಸ್ಟಾರ್ಕ್, ಪಂಜಾಬ್‌ ಜೋಶ್ ಇಂಗ್ಲಿಷ್ ಇವರು ಆಸ್ಟ್ರೇಲಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂರು ತಂಡಗಳು ಪ್ಲೇ ಆಫ್‌ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ. ಈ ವೇಳೆ ಈ ಆಟಗಾರರು ಪ್ಲೇ ಆಫ್‌ ಪಂದ್ಯಗಳನ್ನು ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಖಚಿತತೆ ಇಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...