ಮಹಿಳೆಯರ ಟೆಸ್ಟ್ ಕ್ರಿಕೆಟ್ | 603 ರನ್ ಕಲೆ ಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

Date:

ಚೆನ್ನೈನ ಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ತಂಡವು 603 ರನ್ ಕಲೆಹಾಕುವ ಮೂಲಕ ವಿಶ್ವದಾಖಲೆ ನಿರ್ಮಿಸಿದೆ.

- Advertisement -

ಮಹಿಳಾ ಟೆಸ್ಟ್ ಕ್ರಿಕೆಟ್‌ನಲ್ಲಿ ಸಾರ್ವಕಾಲಿಕ ಇತಿಹಾಸವನ್ನು ನಿರ್ಮಿಸಿರುವ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾ ಹಿಳೆಯರ ತಂಡವು, ಮೊದಲ ಇನ್ನಿಂಗ್ಸ್‌ನ ಎರಡನೇ ದಿನದಾಟದ ಪಂದ್ಯದಲ್ಲಿ 6 ವಿಕೆಟ್ ಕಳೆದುಕೊಂಡು, 603 ರನ್ ದಾಖಲಿಸಿದ್ದಾಗ ಡಿಕ್ಲೇರ್ ಮಾಡಿಕೊಂಡಿತು. ಆ ಮೂಲಕ ವಿಶ್ವದಾಖಲೆ ಬರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಟೀಮ್ ಇಂಡಿಯಾ ಈ ಸಾಧನೆಯಲ್ಲಿ ಒಂದು ದ್ವಿಶತಕ, ಒಂದು ಶತಕ ಹಾಗೂ ಮೂರು ಮಂದಿ ಬ್ಯಾಟರ್‌ಗಳ ಅರ್ಧಶತಕವು ಒಳಗೊಂಡಿದೆ. ಶಫಾಲಿ ವರ್ಮಾ ದ್ವಿಶತಕ(205 ರನ್) ಬಾರಿಸಿದರೆ, ಸ್ಮೃತಿ ಮಂಧಾನ ಶತಕ (149 ರನ್) ಬಾರಿಸಿದ್ದಾರೆ. ಉಳಿದಂತೆ ಮೂವರ್ ಬ್ಯಾಟರ್‌ಗಳಾದ ಜೆಮಿಮಾ ರೋಡ್ರಿಗಸ್(55 ರನ್), ನಾಯಕಿ ಹರ್ಮನ್ ಪ್ರೀತ್ ಕೌರ್(69 ರನ್) ಹಾಗೂ ರಿಚಾ ಘೋಷ್(86 ರನ್) ಅರ್ಧ ಶತಕ ಬಾರಿಸಿ ಮಿಂಚಿದ್ದಾರೆ.

ಭಾರತ ಮಹಿಳಾ ತಂಡವು ಟೆಸ್ಟ್ ಕ್ರಿಕೆಟ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡದ ಅತ್ಯಧಿಕ ಮೊತ್ತದ ಸಾರ್ವಕಾಲಿಕ ದಾಖಲೆಯನ್ನು ಹಿಂದಿಕ್ಕಿದೆ. ಫೆಬ್ರವರಿ 2024ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪರ್ತ್‌ನಲ್ಲಿ ನಡೆದಿದ್ದ ಟೆಸ್ಟ್‌ ಪಂದ್ಯದಲ್ಲಿ 575/9 ಡಿಕ್ಲೇರ್ ಮಾಡಿ, ಆಸ್ಟ್ರೇಲಿಯಾ ತಂಡ ಈ ದಾಖಲೆಯನ್ನು ಹೊಂದಿತ್ತು. ಭಾರತ ತಂಡವು ವಿಶ್ವದಾಖಲೆಯನ್ನು ನಿರ್ಮಿಸಲು ಆಸ್ಟ್ರೇಲಿಯಾ ಮೊತ್ತವನ್ನು ಮೀರಿಸಿತು ಮತ್ತು ಗಮನಾರ್ಹವಾಗಿ, ಮತ್ತೊಮ್ಮೆ ದಕ್ಷಿಣ ಆಫ್ರಿಕಾ ಎದುರಾಳಿಯಾಗಿದ್ದು ವಿಶೇಷವೆನಿಸಿತು. 90 ವರ್ಷಗಳ ಮಹಿಳಾ ಕ್ರಿಕೆಟ್ ಇತಿಹಾಸದಲ್ಲಿ ಭಾರತ ತಂಡ ದಾಖಲೆ ಸಾಧಿಸಿದೆ.

Highest Total In Womens Test
ಈವರೆಗಿನ ಅತ್ಯಧಿಕ ಮೊತ್ತದ ಸ್ಕೋರ್ ವಿವರ ಹೀಗಿದೆ

ಮೊದಲ ಇನಿಂಗ್ಸ್‌ನ ಉದ್ದಕ್ಕೂ ಮೇಲುಗೈ ಸಾಧಿಸಿದ ಭಾರತ ಮಹಿಳಾ ತಂಡ ದಾಖಲೆಗಳ ಮಹಾಪೂರವನ್ನೇ ಸೃಷ್ಟಿಸಿತು. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ನಂತರ, ಶಫಾಲಿ ವರ್ಮಾ ಅವರ ಭರ್ಜರಿ ದ್ವಿಶತಕ ಮತ್ತು ಸ್ಮೃತಿ ಮಂಧಾನ ಅವರ ಅಮೋಘ ಶತಕದ ನೆರವಿನಿಂದ ಭಾರತ ತಂಡವು ಬೃಹತ್ ಆರಂಭ ಪಡೆದಿತ್ತು.

ಭಾರತೀಯ ಆರಂಭಿಕ ಬ್ಯಾಟರ್‌ಗಳ ಬೃಹತ್ ಶತಕಗಳು ಹರಿಣ ಪಡೆಯನ್ನು ಹಿಮ್ಮೆಟ್ಟಿಸಿದವು. ಈ ಮೂಲಕ ಭಾರತ ತಂಡಕ್ಕೆ ರನ್‌ಗಳು ಸರಾಗವಾಗಿ ಹರಿಯುತ್ತಿದ್ದವು. ಮೊದಲ ವಿಕೆಟ್‌ಗೆ ಆರಂಭಿಕ ಜೋಡಿ 292 ರನ್‌ಗಳ ದಾಖಲೆಯ ಜೊತೆಯಾಟ ನಿರ್ಮಿಸಿದ್ದರು.

ಇದನ್ನು ಓದಿದ್ದೀರಾ? ಮಹಿಳಾ ಟೆಸ್ಟ್ ಕ್ರಿಕೆಟ್ | ಅತ್ಯಂತ ವೇಗದ ದ್ವಿಶತಕ ದಾಖಲಿಸಿದ ಶಫಾಲಿ ವರ್ಮಾ

ಇದು ಮಹಿಳಾ ಟೆಸ್ಟ್‌ ಇತಿಹಾಸದಲ್ಲಿ ಆರಂಭಿಕ ಜೋಡಿಯ ಗರಿಷ್ಠ ಮೊತ್ತವಾಗಿದೆ. ಸ್ಮೃತಿ ಮಂಧಾನ 161 ಎಸೆತಗಳಿಂದ 27 ಬೌಂಡರಿ ಮತ್ತು 1 ಸಿಕ್ಸರ್ ಮೂಲಕ 149 ರನ್‌ ಗಳಿಸಿ ನಿರ್ಗಮಿಸಿದರೆ, ಶಫಾಲಿ ವರ್ಮಾ 197 ಎಸೆತಗಳನ್ನು ಎದುರಿಸಿ 23 ಬೌಂಡರಿ ಹಾಗೂ 8 ಸಿಕ್ಸರ್‌ಗಳ ಸಮೇತ 205 ರನ್‌ಗಳ ಅದ್ಭುತ ದ್ವಿಶತಕ ಬಾರಿಸಿದರು. ಆ ಮೂಲಕ ಮಹಿಳೆಯರ ಟೆಸ್ಟ್‌ ಪಂದ್ಯದಲ್ಲಿ ವೇಗವಾಗಿ ದ್ವಿಶತಕ ದಾಖಲಿಸುವ ಮೂಲಕ ಶಫಾಲಿ ವರ್ಮಾ ದಾಖಲೆ ಬರೆದಿದ್ದಾರೆ.

ಸೌತ್ ಆಫ್ರಿಕಾ 4ಕ್ಕೆ 236

ಟೀಮ್ ಇಂಡಿಯಾದ ಬೃಹತ್ ಗುರಿಯ ಬಳಿಕ ಮೊದಲ ಇನ್ನಿಂಗ್ಸ್ ಆಡಿರುವ ದಕ್ಷಿಣ ಆಫ್ರಿಕಾ ಎರಡನೇ ದಿನದಾಟದ ಮುಕ್ತಾಯಕ್ಕೆ ಸೂನೆ ಲೂಸ್ ಹಾಗೂ ಮರಿಝಾನೆ ಕಪ್ ಅವರ ಅರ್ಧಶತಕದ ನೆರವಿನಿಂದ 4 ವಿಕೆಟ್ ಕಳೆದುಕೊಂಡು 236 ರನ್ ದಾಖಲಿಸಿದೆ. ಸದ್ಯ ಕ್ರೀಸ್‌ನಲ್ಲಿ 69 ರನ್ ಗಳಿಸಿರುವ ಮರಿಝಾನೆ ಕಪ್ ಹಾಗೂ 27 ರನ್ ಗಳಿಸಿರುವ ಕ್ಲರ್ಕ್‌ ಮೂರನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...