6 ದಶಕಗಳ ಕಾಯುವಿಕೆ ಅಂತ್ಯ: ಬಂಗಾಳವನ್ನು ಬಗ್ಗು ಬಡಿದು ರಣಜಿ ಫೈನಲ್ ಪ್ರವೇಶಿಸಿದ ಜಮ್ಮು ಕಾಶ್ಮೀರ

Date:

ಪಶ್ಚಿಮ ಬಂಗಾಳದ ಕಲ್ಯಾಣಿ ನಗರದ ಬಿಸಿಎ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಎರಡು ಬಾರಿಯ ಚಾಂಪಿಯನ್ ಬಂಗಾಳ ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದ ಜಮ್ಮು ಮತ್ತು ಕಾಶ್ಮೀರ ತಂಡವು, ತನ್ನ 67 ವರ್ಷಗಳ ರಣಜಿ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸುವ ಮೂಲಕ ಹೊಸ ಮೈಲಿಗಲ್ಲು ನೆಟ್ಟಿದೆ.

- Advertisement -

ಬಂಗಾಳ ತಂಡದ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರ 8 ವಿಕೆಟ್‌ಗಳ ಅಸಾಧಾರಣ ಸಾಧನೆಯ ನಡುವೆಯೂ, ಜಮ್ಮು-ಕಾಶ್ಮೀರ ಆಟಗಾರರು ತೋರಿದ ಸಂಯಮದ ಆಟ ಅವರಿಗೆ ಈ ಐತಿಹಾಸಿಕ ಗೆಲುವು ತಂದುಕೊಟ್ಟಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಬಂಗಾಳ 328 ರನ್‌ ಗಳಿಸಿದ್ದರೆ, ಜಮ್ಮು-ಕಾಶ್ಮೀರ 302 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಹಿನ್ನಡೆ ಅನುಭವಿಸಿತ್ತು. ಮೊದಲ ಇನಿಂಗ್ಸ್‌ನಲ್ಲಿ ಮೊಹಮ್ಮದ್ ಶಮಿ 8 ವಿಕೆಟ್ ಕಬಳಿಸಿ ಮಿಂಚಿದ್ದರು. ಆದರೆ ಎರಡನೇ ಇನಿಂಗ್ಸ್‌ನಲ್ಲಿ ತಿರುಗೇಟು ನೀಡಿದ ಜಮ್ಮು-ಕಾಶ್ಮೀರ, ವೇಗಿ ಆಕಿಬ್ ನಬಿ ಅವರ (ಪಂದ್ಯದಲ್ಲಿ ಒಟ್ಟು 9 ವಿಕೆಟ್) ನಿಖರ ದಾಳಿಯ ನೆರವಿನಿಂದ ಬಂಗಾಳ ತಂಡವನ್ನು ಕೇವಲ 99 ರನ್‌ಗಳಿಗೆ ಆಲೌಟ್ ಮಾಡಿತು. ಇದರಿಂದ ಜಮ್ಮು-ಕಾಶ್ಮೀರ ತಂಡಕ್ಕೆ ಗೆಲ್ಲಲು ಕೇವಲ 126 ರನ್‌ಗಳ ಸಾಧಾರಣ ಗುರಿ ದೊರೆಯಿತು.

ಇದನ್ನು ಓದಿದ್ದೀರಾ? ಬ್ಯಾಟ್ ಬೀಸಿದ ‘ಫಿನಿಶರ್’ಗೆ ಕ್ಲೀನ್ ಬೌಲ್ಡ್ ಆದ ಸಂಸದೆ

ಈ ಗುರಿಯನ್ನು ಬೆನ್ನಟ್ಟಿದ ಜಮ್ಮು-ಕಾಶ್ಮೀರ 43 ರನ್ ಗಳಿಸುವಷ್ಟರಲ್ಲಿ ಶುಭಂ ಪುಂಡೀರ್ ಹಾಗೂ ನಾಯಕ ಪರಾಸ್ ಡೋಗ್ರಾ ಅವರ ವಿಕೆಟ್ ಕಳೆದುಕೊಂಡು ಅಲ್ಪ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಂತದಲ್ಲಿ ಬಂಗಾಳ ತಂಡವು ಮತ್ತೆ ಪಂದ್ಯದ ಮೇಲೆ ಹಿಡಿತ ಸಾಧಿಸುವ ಲಕ್ಷಣಗಳು ಗೋಚರಿಸಿದ್ದವು. ಆದರೆ ಒತ್ತಡದ ಪರಿಸ್ಥಿತಿಯಲ್ಲಿ ಅದ್ಭುತ ಜೊತೆಯಾಟವಾಡಿದ ವಂಶಜ್ ಶರ್ಮಾ (ಅಜೇಯ 43) ಮತ್ತು ಅಬ್ದುಲ್ ಸಮದ್ (ಅಜೇಯ 30), ಮುರಿಯದ 55 ರನ್‌ಗಳ ಜೊತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಅಂತಿಮವಾಗಿ ತಂಡವು 34.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿ ವಿಜಯಿಯಾಯಿತು.

1959-60ರ ಆವೃತ್ತಿಯಲ್ಲಿ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ್ದ ಜಮ್ಮು ಮತ್ತು ಕಾಶ್ಮೀರ ತಂಡವನ್ನು ಇದುವರೆಗೆ ಪ್ರಬಲ ಪ್ರಶಸ್ತಿ ಆಕಾಂಕ್ಷಿ ಎಂದು ಪರಿಗಣಿಸಿರಲಿಲ್ಲ. 2013-14ರ ಆವೃತ್ತಿಯಲ್ಲಿ ನಾಕೌಟ್ ಹಂತ ಪ್ರವೇಶಿಸಿದ್ದೇ ಅವರ ಈವರೆಗಿನ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಆರು ದಶಕಗಳ ಸುದೀರ್ಘ ಕಾಯುವಿಕೆಯ ನಂತರ ಚೊಚ್ಚಲ ಬಾರಿಗೆ ಫೈನಲ್ ತಲುಪಿರುವುದು ಭಾರತೀಯ ದೇಶೀಯ ಕ್ರಿಕೆಟ್‌ನಲ್ಲಿ ಆ ತಂಡದ ಗಮನಾರ್ಹ ಬೆಳವಣಿಗೆಯನ್ನು ಸಾಬೀತುಪಡಿಸಿದೆ.

ಫೆ. 24 ರಂದು ನಡೆಯುವ ಫೈನಲ್‌ ಪಂದ್ಯದಲ್ಲಿ ಪ್ರಶಸ್ತಿ ಸುತ್ತಿಗಾಗಿ ಕರ್ನಾಟಕ ತಂಡವನ್ನು ಎದುರಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ಕ್ರೀಡಾಭಿಮಾನಿಗಳಿಗೆ ರೋಮಾಂಚನ, ಭಾರತದ ಮುಡಿಗೇರಿದ 13 ಚಿನ್ನದ ಪದಕಗಳು!

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ 13ನೇ ದಿನ ಭಾರತಕ್ಕೆ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...