ಕುಸ್ತಿಪಟುಗಳ ಪ್ರತಿಭಟನೆ | ಬ್ರಿಜ್ ಭೂಷಣ್ ಬೆಂಬಲಿಸಿ ಅಯೋಧ್ಯೆಯಲ್ಲಿ ರ‍್ಯಾಲಿ ನಡೆಸಲಿರುವ ಸಂತರು

Date:

  • ಜೂನ್ 5ರಂದು ಅಯೋಧ್ಯೆಯ ರಾಮ್‌ಕಥಾ ಪಾರ್ಕ್‌ನಲ್ಲಿ ನಡೆಯುವ ರ‍್ಯಾಲಿ
  • ಪೋಕ್ಸೊ ಕಾಯ್ದೆಯ ವಿರುದ್ಧವೂ ಪ್ರತಿಭಟನೆ ನಡೆಸುವುದಾಗಿ ತಿಳಿಸಿರುವ ಸಂತರು

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಭಾರತದ ಕುಸ್ತಿ ಫೆಡರೇಶನ್‌ ಮುಖ್ಯಸ್ಥ ಬ್ರಿಜ್‌ ಭೂಷಣ್ ಶರಣ್ ಸಿಂಗ್ ಅವರನ್ನು ಬೆಂಬಲಿಸಲು ಅಯೋಧ್ಯೆಯ ಸಂತರ ಗುಂಪು ಮುಂದಿನ ವಾರ (ಜೂನ್ 5) ರ‍್ಯಾಲಿ ಆಯೋಜಿಸಲು ಘೋಷಿಸಿದೆ.

“ಜೂನ್ 5ರಂದು ಅಯೋಧ್ಯೆಯ ರಾಮ್‌ಕಥಾ ಪಾರ್ಕ್‌ನಲ್ಲಿ ರ‍್ಯಾಲಿ ನಡೆಸಲಾಗುವುದು. ಅಯೋಧ್ಯೆಯ ಸಂತರು ಹಾಗೂ ದೇಶದ ಇತರ ಧಾರ್ಮಿಕ ಸ್ಥಳಗಳಿಂದ ಬಂದವರು ಬ್ರಿಜ್‌ಭೂಷನ್‌ ಶರಣ್ ಸಿಂಗ್ ಪರವಾಗಿ ರ‍್ಯಾಲಿಯಲ್ಲಿ ಪಾಲ್ಗೊಳ್ಳುತ್ತಾರೆ” ಎಂದು ಸಂತ ಮಹಂತ್ ಸತ್ಯೇಂದ್ರ ದಾಸ್ ಹೇಳಿದ್ದಾರೆ.

“ಪೋಕ್ಸೊ ಕಾಯ್ದೆಯಲ್ಲಿ ಹಲವು ಲೋಪದೋಷಗಳು ಮತ್ತು ದೋಷಪೂರಿತ ಷರತ್ತುಗಳಿರುವುದರಿಂದ ನಾವು ಕೂಡ ಅದನ್ನು ವಿರೋಧಿಸುತ್ತೇವೆ. ದೇಶದ ಹಿರಿಯ ಸಂತರು ಮತ್ತು ದಾರ್ಶನಿಕರು ನೀಡಿದ ಕರೆಯ ಮೇರೆಗೆ ಈ ರ‍್ಯಾಲಿಯನ್ನು ಆಯೋಜಿಸಲಾಗಿದೆ” ಎಂದು ಮಹಂತ್ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಹಿಂಡನ್‌ಬರ್ಗ್ ಅದಾನಿ ವರದಿ ಉಲ್ಲೇಖಿಸಿದ್ದ ಎರಡು ವಿದೇಶಿ ಕಂಪನಿಗಳ ಮೇಲೆ ಐಟಿ ತನಿಖೆ 

ಅನೇಕ ಲೋಪ ದೋಷಗಳು ಮತ್ತು ದೋಷಪೂರಿತ ಷರತ್ತುಗಳನ್ನು ಹೊಂದಿರುವ ಪೋಕ್ಸೊ ಕಾಯ್ದೆಯ ವಿರುದ್ಧವೂ ಪ್ರತಿಭಟನೆ ನಡೆಸುವುದಾಗಿ ಸಂತರು ಹೇಳಿದ್ದಾರೆ.

“ಹರಿದ್ವಾರ, ಕಾಶಿ, ಮಥುರಾ ಹಾಗೂ ದೇಶದ ಇತರ ಪುಣ್ಯ ಕ್ಷೇತ್ರಗಳು ಸೇರಿದಂತೆ ವಿವಿಧ ಸ್ಥಳಗಳಿಂದ ಸಂತರು ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ’’ ಎಂದು ಬ್ರಿಜ್‌ಭೂಷಣ್ ಸಿಂಗ್ ಅವರ ಆಪ್ತ ಸಹಾಯಕ ಸುಭಾಷ್‌ ಸಿಂಗ್‌ ತಿಳಿಸಿದ್ದಾರೆ.

ಸಾಕ್ಷಿ ಮಲಿಕ್, ವಿನೇಶ್‌ ಪೋಗಾಟ್ ಹಾಗೂ ಬಜರಂಗ್ ಪುನಿಯಾ ಸೇರಿದಂತೆ ದೇಶದ ಅಗ್ರ ಕುಸ್ತಿಪಟುಗಳು, ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ, ಬಿಜೆಪಿ ಸಂಸದ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಸಿಂಗ್‌ನನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ‘400 ಪಾರ್’ ಸಿನಿಮಾ ಮತದಾನದ ಮೊದಲ ದಿನವೇ ಫ್ಲಾಪ್: ತೇಜಸ್ವಿ ಯಾದವ್ ವ್ಯಂಗ್ಯ

"ಲೋಕಸಭೆ ಚುನಾವಣೆಯ ಮೊದಲ ಹಂತದ ಬಗ್ಗೆ ಮಾತನಾಡಿದ ರಾಷ್ಟ್ರೀಯ ಜನತಾ ದಳ...

ಲೋಕಸಭೆ ಚುನಾವಣೆ| ಬಿಜೆಪಿ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್‌ ಪುನರುಜ್ಜೀವನ; ನಿರ್ಮಲಾ ಸೀತಾರಾಮನ್

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಧ್ಯಸ್ಥಗಾರರೊಂದಿಗೆ ಸರಿಯಾದ ಸಮಾಲೋಚನೆಯ ನಂತರ...

ಛತ್ತೀಸ್‌ಗಢ| ಬಸ್ತಾರ್‌ ಮತಗಟ್ಟೆ ಬಳಿ ಸ್ಫೋಟ: ಸಿಆರ್‌ಪಿಎಫ್ ಯೋಧ ಸಾವು

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಮತಗಟ್ಟೆಯೊಂದರ ಬಳಿ ಶುಕ್ರವಾರ ನಡೆದ ಐಇಡಿ ಸ್ಫೋಟದಲ್ಲಿ...

ಐಪಿಎಲ್ | ಕೆ ಎಲ್ ರಾಹುಲ್-ಡಿ ಕಾಕ್ ಶತಕದ ಜೊತೆಯಾಟ: ಚೆನ್ನೈ ವಿರುದ್ಧ ಲಕ್ನೋಗೆ ಭರ್ಜರಿ ಗೆಲುವು

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ...