‘ನಾನೇನು ಟೀಮ್‌ ಇಂಡಿಯಾದ ಕೋಚ್‌ ಅಲ್ಲ’ ಬೌಲರ್‌ಗಳ ಬಗ್ಗೆ ಮಿಚೆಲ್ ಸ್ಟಾರ್ಕ್ ಪ್ರತಿಕ್ರಿಯೆ!

Date:

Advertisements

ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳ ನಡುವೆ ನಡೆದ ಪಿಂಕ್​ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬೌಲರ್‌ ಮಿಚೆಲ್ ಸ್ಟಾರ್ಕ್ ಬೌಲಿಂಗ್ ಪರಾಕ್ರಮ ತೋರಿದ್ದಾರೆ. ತಮ್ಮ ಮೊದಲ ಎಸೆತದಲ್ಲಿಯೇ ವಿಕೆಟ್‌ ಕಿತ್ತುಕೊಂಡಿದ್ದಾರೆ. ಮಾತ್ರವಲ್ಲದೆ, ಕೇವಲ 48 ರನ್‌ಗಳನ್ನು ಕೊಟ್ಟು 6 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ನಡೆದ ಟೆಸ್ಟ್‌ ಕ್ರಿಕೆಟ್‌ನ ಮೊದಲ ಇನ್ನಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್ ಬೌಲಿಂಗ್‌ಗೆ ಟೀಮ್‌ ಇಂಡಿಯಾ ಕಂಗಾಲಾಗಿಹೋಗಿದೆ. ಕೇವಲ 180 ರನ್‌ಗಳಿಗೆ ಆಲ್‌ಔಟ್‌ ಆಗಿದೆ. ಆದಾಗ್ಯೂ, ಎರಡನೇ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಎಚ್ಚರಿಕೆಯಿಂದ ಆಟವಾಡುವ ಅಗತ್ಯವಿದೆ ಎಂದು ಸ್ಟಾರ್ಕ್ ಎಚ್ಚರಿಸಿದ್ದಾರೆ.

ಇನ್ನು, ಟೀಮ್‌ ಇಂಡಿಯಾದ ಬೌಲರ್‌ ಜಸ್ಪ್ರೀತ್ ಬುಮ್ರಾ ಮತ್ತು ಇತರ ಬೌಲರ್‌ಗಳು ತಮ್ಮ ಟ್ರ್ಯಾಕ್‌ನಲ್ಲಿ ಎಡವಿದ್ದಾರ ಎಂಬ ಪ್ರಶ್ನೆಗೆ ಉತ್ತರಿಸಿರುವ ಸ್ಟಾರ್ಕ್‌, ‘ನಾನು ಅವರ ಬೌಲಿಂಗ್ ಕೋಚ್ ಅಲ್ಲ’ ಎಂದಿದ್ದಾರೆ.

ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 180ಕ್ಕೆ ಆಲೌಟ್ ಆಗಿದೆ. ನಿತೀಶ್ ರೆಡ್ಡಿ 42 ರನ್ ಗಳಿಸಿದರೆ, ಯಶಸ್ವಿ ಜೈಸ್ವಾಲ್ ಮೊದಲ ಬಾಲ್‌ಗೆ ಔಟ್‌ ಆಗುವ ಮೂಲಕ ಶೂನ್ಯ ಸಾಧನೆ ಮಾಡಿದ್ದಾರೆ. ಕೆಎಲ್ ರಾಹುಲ್ 37, ಶುಭ್ಮನ್ ಗಿಲ್ 31, ಕೊಹ್ಲಿ 7, ಪಂತ್ 21, ರೋಹಿತ್ 3, ಅಶ್ವಿನ್ 22, ಹರ್ಷಿತ್ 0, ಬುಮ್ರಾ 0, ಸಿರಾಜ್ 4 ರನ್ ಗಳಿಸಿದರು. ಮೊದಲ ದಿನದ ಅಂತ್ಯಕ್ಕೆ ಆಸ್ಟ್ರೇಲಿಯಾ ತಂಡ 1 ವಿಕೆಟ್ ನಷ್ಟಕ್ಕೆ 86 ರನ್​ಗಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ಶೀತಲ್ ದೇವಿಗೆ ಐತಿಹಾಸಿಕ ಚಿನ್ನ; ವಿಶ್ವ ಪ್ಯಾರಾ ಆರ್ಚರಿಯಲ್ಲಿ ಭಾರತದ ಹೆಮ್ಮೆ

ದಕ್ಷಿಣ ಕೊರಿಯಾದ ಗ್ವಾಂಗ್ಜುನಲ್ಲಿ ನಡೆದ ವಿಶ್ವ ಪ್ಯಾರಾ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ...

Asia CUP2025 | ‘ಸೂಪರ್ ಓವರ್’ ಪಂದ್ಯದಲ್ಲಿ ಲಂಕಾ ಮಣಿಸಿ, ಫೈನಲ್‌ಗೆ ಭಾರತ ಲಗ್ಗೆ

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಏಷ್ಯಾ ಕಪ್‌ ಕ್ರಿಕೆಟ್‌...

Download Eedina App Android / iOS

X