ಏಕದಿನ ವಿಶ್ವಕಪ್‌ 2023 | ಆಗಸ್ಟ್‌ 29 ʻಡೆಡ್‌ಲೈನ್‌ʼ ನಿಗದಿಪಡಿಸಿದ ಐಸಿಸಿ

Date:

ಐಸಿಸಿ ಏಕದಿನ ವಿಶ್ವಕಪ್‌ 2023 ಟೂರ್ನಿಯು ಅಕ್ಟೋಬರ್‌-ನವೆಂಬರ್‌ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿದೆ.

- Advertisement -

ಹಾಲಿ ಚಾಂಪಿಯನ್‌ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ನ್ಯೂಜಿಲೆಂಡ್, ಹಾಗೂ ಆತಿಥೇಯ ಭಾರತ ಸೇರಿದಂತೆ ಒಟ್ಟು 7 ತಂಡಗಳು ಈಗಾಗಲೇ ಟೂರ್ನಿಗೆ ಅರ್ಹತೆ ಪಡೆದಿವೆ. ಉಳಿದ 3 ಸ್ಥಾನಗಳಿಗಾಗಿ 15 ತಂಡಗಳ ನಡುವೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

 ಈ ನಡುವೆ ಮಹತ್ವದ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳುವ ತಂಡಗಳಿಗೆ, ತಮ್ಮ ಆಟಗಾರರ ಪಟ್ಟಿಯನ್ನು ಸಲ್ಲಿಸಲು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಗಸ್ಟ್ 29ರ ಗಡುವನ್ನು ನಿಗದಿಪಡಿಸಿದೆ.

ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯು ಅಕ್ಟೋಬರ್ 5ರಿಂದ ಪ್ರಾರಂಭವಾಗಲಿದೆ. ಹೀಗಾಗಿ ತಂಡವನ್ನು ಅಂತಿಮಗೊಳಿಸಲು 2 ತಿಂಗಳುಗಳ ಅವಧಿ ಬಾಕಿಯಿದೆ. ಆದರೆ ಐಸಿಸಿಗೆ ಸಲ್ಲಿಸಲಾಗುವ ಪಟ್ಟಿಯಲ್ಲಿ, ಪಂದ್ಯಾವಳಿ ಪ್ರಾರಂಭವಾಗುವ ಒಂದು ವಾರ ಮುಂಚಿತವಾಗಿ ಬದಲಾವಣೆ ಮಾಡಿಕೊಳ್ಳಲು, ಅವಕಾಶವಿರುತ್ತದೆ. ಇದಾದ ಬಳಿಕ ಆಟಗಾರರ ಬದಲಾವಣೆಗೆ  ಐಸಿಸಿ ತಾಂತ್ರಿಕ ಸಮಿತಿಯ ಒಪ್ಪಿಗೆ ಪಡೆಯುವ ಅಗತ್ಯವಿದೆ.

ಈ ಸುದ್ದಿ ಓದಿದ್ದೀರಾ?: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ, ಟೆಸ್ಟ್‌ ಸರಣಿಗೆ ಭಾರತ ತಂಡ ಪ್ರಕಟ; ಐಪಿಎಲ್‌ ಸ್ಟಾರ್‌ ಆಟಗಾರರಿಗೆ ಸ್ಥಾನ

ಬಿಸಿಸಿಐಗೆ ತಲೆನೋವು!

ಐಸಿಸಿ ವಿಧಿಸಿರುವ ʻಡೆಡ್‌ಲೈನ್‌ʼ ಬಿಸಿಸಿಐ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ. ಫೆಬ್ರವರಿಯಲ್ಲಿ ಚೇತನ್‌ ಶರ್ಮಾ ರಾಜೀನಾಮೆ ನೀಡಿದ ಬಳಿಕ ಹಿರಿಯರ ಆಯ್ಕೆ ಸಮಿತಿಯು ʻಅಧ್ಯಕ್ಷʼರಿಲ್ಲದೆ ಕಾರ್ಯ ನಿರ್ವಹಿಸುತ್ತಿದೆ. ವಿಶ್ವಕಪ್‌ಗೂ ಮುನ್ನ ಭಾರತ ತಂಡ ವೆಸ್ಟ್‌ ಇಂಡೀಸ್‌, ಏಷ್ಯಾ ಕಪ್‌ ಮತ್ತು ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನಾಡಲಿದೆ.

ಚೇತನ್ ಶರ್ಮಾ ರಾಜೀನಾಮೆ ನೀಡಿ ಅದಾಗಲೇ ಐದು ತಿಂಗಳು ಕಳೆದಿದೆ. ಸುಬ್ರೋತೊ ಬ್ಯಾನರ್ಜಿ, ಸಲೀಲ್ ಅಂಕೋಲಾ, ಶ್ರೀಧರನ್ ಶರತ್ ಸದ್ಯಸರಾಗಿರುವ ಆಯ್ಕೆ ಸಮಿತಿಯಲ್ಲಿ ಶಿವಸುಂದರ್ ದಾಸ್ ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಿಸಿಸಿಐ ಹಿರಿಯರ ಆಯ್ಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಲು, ಕನಿಷ್ಠ 24 ಟೆಸ್ಟ್‌ ಪಂದ್ಯಗಳನ್ನಾಡಿದ ಅನುಭವ ಹೊಂದಿರಬೇಕು ಎಂಬ ನಿಯಮವಿದೆ. ಆದರೆ ಸದ್ಯ ಸಮಿತಿಯಲ್ಲಿರುವವರು ಈ ಅರ್ಹತೆಯನ್ನು ಹೊಂದಿಲ್ಲ. ಹೀಗಾಗಿ ನೂತನ ಅಧ್ಯಕ್ಷರ ನೇಮಕವಾಗಬೇಕಿದೆ. ಆದರೆ ಅನುಭವಿ, ಖ್ಯಾತ ಮಾಜಿ ಆಟಗಾರರು ಯಾರೂ ಸಹ ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಲು ಉತ್ಸಾಹ ತೋರುತ್ತಿಲ್ಲ. ಇದು ಬಿಸಿಸಿಐಗೆ ಸಂಕಷ್ಟ ತಂದಿಟ್ಟಿದೆ.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...