ಮಹಿಳಾ ಟಿ20 ವಿಶ್ವಕಪ್‌ | ಭಾರತ ತಂಡ ಪ್ರಕಟ: ಕನ್ನಡತಿಗೆ ಸ್ಥಾನ

Date:

ಅಕ್ಟೋಬರ್ 3 ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್​ ಕೀಪರ್​ಗಳಾಗಿ ರಿಚಾ ಘೋಷ್ ಹಾಗೂ ಯಾಸ್ತಿಕಾ ಭಾಟಿಯಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

- Advertisement -

ತಂಡದಲ್ಲಿ ಕರ್ನಾಟಕದ ಯುವ ಆಲ್​ರೌಂಡರ್ ಶ್ರೇಯಾಂಕಾ ಪಾಟೀಲ್ ಸ್ಥಾನ ಪಡೆದಿದ್ದು, ಅದಕ್ಕೂ ಮುನ್ನ ಅವರು ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾಗಿದೆ. ಕಳೆದ ಏಷ್ಯಾಕಪ್ ಟೂರ್ನಿಯ ವೇಳೆ ಶ್ರೇಯಾಂಕಾ ಗಾಯಗೊಂಡಿದ್ದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ಪರ ಯಾವುದೇ ಪಂದ್ಯವಾಡಿಲ್ಲ. ಹೀಗಾಗಿ ಫಿಟ್​ನೆಸ್ ಸಾಬೀತುಪಡಿಸಲು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿರುವ ಯಾಸ್ತಿಕಾ ಭಾಟಿಯಾ ಕೂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಅವರ ಸಹ ಫಿಟ್​ನೆಸ್ ಟೆಸ್ಟ್​ಗೆ ಒಳಗಾಗಬೇಕಿದೆ. ಇನ್ನು ಈ ತಂಡದಲ್ಲಿ ವೇಗಿಗಳಾಗಿ ಪೂಜಾ ವಸ್ತ್ರಾಕರ್ ಹಾಗೂ ರೇಣುಕಾ ಸಿಂಗ್ ಠಾಕೂರ್ ಸ್ಥಾನ ಪಡೆದಿದ್ದು, ಸ್ಪಿನ್ನರ್​ಗಳಾಗಿ ರಾಧಾ ಯಾದವ್ ಮತ್ತು ಆಶಾ ಸೋಭಾನ ಕಾಣಿಸಿಕೊಂಡಿದ್ದಾರೆ.

ತಂಡದಲ್ಲಿ ಆಲ್​ರೌಂಡರ್ ವಿಭಾಗದಲ್ಲಿ ಹಿರಿಯ ಆಲ್​ರೌಂಡರ್ ದೀಪ್ತಿ ಶರ್ಮಾ ಸ್ಥಾನ ಪಡೆದರೆ, ಪ್ರಮುಖ ಬ್ಯಾಟರ್​ಗಳಾಗಿ ಶಫಾಲಿ ವರ್ಮಾ ಹಾಗೂ ಜೆಮಿಮಾ ರೊಡ್ರಿಗಸ್ ಆಯ್ಕೆಯಾಗಿದ್ದಾರೆ.

ಭಾರತ ಮಹಿಳಾ ತಂಡ

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ , ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಸೋಭಾನ, ರಾಧಾ ಯಾದವ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.

ಮೀಸಲು ಆಟಗಾರ್ತಿಯರು: ಉಮಾ ಚೆಟ್ರಿ, ತನುಜಾ ಕನ್ವರ್ ಮತ್ತು ಸೈಮಾ ಠಾಕೂರ್.

ಈ ಸುದ್ದಿ ಓದಿದ್ದೀರಾ? ಕೀನ್ಯಾ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಕನ್ನಡಿಗ ದೊಡ್ಡ ಗಣೇಶ್ ನೇಮಕ

ಅಕ್ಟೋಬರ್‌ 3ರಿಂದ ಟಿ20 ವಿಶ್ವಕಪ್

ಯುನೈಟೆಡ್ ಅರಬ್ ಎಮಿರೇಟ್ಸ್​ (ಯುಎಇ) ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಅಕ್ಟೋಬರ್ 3 ರಿಂದ ಶುರುವಾಗಲಿದೆ. ಭಾರತ ತಂಡವು ಅಕ್ಟೋಬರ್ 4 ರಂದು ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ.

ಭಾರತದ ಟಿ20 ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿ:

ಅಕ್ಟೋಬರ್ 4, ಶುಕ್ರವಾರ: ಭಾರತ vs ನ್ಯೂಜಿಲೆಂಡ್, ದುಬೈ

ಅಕ್ಟೋಬರ್ 6, ಭಾನುವಾರ: ಭಾರತ vs ಪಾಕಿಸ್ತಾನ, ದುಬೈ

ಅಕ್ಟೋಬರ್ 9, ಬುಧವಾರ: ಭಾರತ vs ಶ್ರೀಲಂಕಾ, ದುಬೈ

ಅಕ್ಟೋಬರ್ 13, ಭಾನುವಾರ: ಭಾರತ vs ಆಸ್ಟ್ರೇಲಿಯಾ, ಶಾರ್ಜಾ

ಅಕ್ಟೋಬರ್ 17 ರಂದು ಮೊದಲ ಸೆಮಿಫೈನಲ್ ನಡೆಯಲಿದ್ದು, 18 ರಂದು ಎರಡನೇ ಸೆಮಿಫೈನಲ್ ಜರುಗಲಿದೆ. ಹಾಗೆಯೇ ಅಕ್ಟೋಬರ್ 20 ರಂದು ಫೈನಲ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ಮಹಿಳಾ ಟಿ20 ವಿಶ್ವಕಪ್ ತಂಡಗಳು:

ಗ್ರೂಪ್-ಎ:

ಆಸ್ಟ್ರೇಲಿಯಾ

ಭಾರತ

ನ್ಯೂಜಿಲೆಂಡ್

ಪಾಕಿಸ್ತಾನ್

ಶ್ರೀಲಂಕಾ.

ಗ್ರೂಪ್-ಬಿ:

ದಕ್ಷಿಣ ಆಫ್ರಿಕಾ

ಇಂಗ್ಲೆಂಡ್

ವೆಸ್ಟ್ ಇಂಡೀಸ್

ಬಾಂಗ್ಲಾದೇಶ

ಸ್ಕಾಟ್ಲೆಂಡ್.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...