ICC Women’s WC Final: ವರ್ಷಗಳ ನಂತರ ಈಡೇರಿದ ಅಭಿಮಾನಿಗಳ ಕನಸು: ಟೀಮ್ ಇಂಡಿಯಾ ಚಾಂಪಿಯನ್

Date:

ಮುಂಬೈನ ಡಿ ವೈ ಪಾಟೀಲ್ ಅಂತಾರಾಷ್ಟ್ರೀಯ ಮೈದಾನದಲ್ಲಿ ಭಾನುವಾರ ನಡೆದ ಐಸಿಸಿ ಏಕದಿನ ಮಹಿಳಾ ಕ್ರಿಕೆಟ್ ಪಂದ್ಯದ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೌತ್ ಆಫ್ರಿಕಾ ತಂಡವನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.

- Advertisement -

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಟೀಮ್ ಇಂಡಿಯಾ, ಶಫಾಲಿ ವರ್ಮಾ ಹಾಗೂ ದೀಪ್ತಿ ಶರ್ಮಾ ಅವರ ಆಕರ್ಷಕ ಅರ್ಧಶತಕದ ನೆರವಿನಿಂದ ನಿಗದಿತ 50 ಓವರುಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ದಾಖಲಿಸುವಲ್ಲಿ ಯಶಸ್ವಿಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲರಾದ ಸೌತ್ ಆಫ್ರಿಕಾ ಮಹಿಳೆಯರ ತಂಡವು ‌246 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಆ ಮೂಲಕ 52 ರನ್‌ಗಳಿಂದ ಸೋಲೊಪ್ಪಿ, ರನ್ನರ್ ಅಪ್ ಆಯಿತು.

ಸೆಮಿಫೈನಲ್ಸ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ರೋಚಕವಾಗಿ ಸೋಲಿಸಿ ಮೂರನೇ ಬಾರಿಗೆ ಫೈನಲ್ ಪ್ರವೇಶಿಸಿದ್ದ ಟೀಮ್ ಇಂಡಿಯಾ, ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ.

ಟೀಮ್ ಇಂಡಿಯಾ ಈ‌‌ ಮೊದಲು 2005 ಹಾಗೂ 2017 ರಲ್ಲಿ ಫೈನಲ್ ಪ್ರವೇಶಿಸಿತ್ತಾದರೂ, ಚಾಂಪಿಯನ್ ಆಗುವಲ್ಲಿ ವಿಫಲವಾಗಿತ್ತು.‌

2005ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಟೀಮ್ ಇಂಡಿಯಾವನ್ನು 98 ರನ್‌ಗಳ ಅಂತರದಿಂದ ಸೋಲಿಸಿದ್ದರೆ, 2017ರಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 9 ರನ್‌ಗಳ ಅಂತರದಿಂದ ವಿರೋಚಿತ ಸೋಲು ಅನುಭವಿಸಿತ್ತು.

2020ರಲ್ಲಿ ಐಸಿಸಿಯ ಟಿ20 ವಿಶ್ವಕಪ್ ಫೈನಲ್ಸ್ ತಲುಪಿದ್ದ ಟೀಮ್ ಇಂಡಿಯಾ ಮಹಿಳೆಯರ ತಂಡವು, ಆಸ್ಟ್ರೇಲಿಯಾ ವಿರುದ್ಧ 85 ರನ್‌ಗಳ ಅಂತರದಿಂದ ಸೋತು, ಚಾಂಪಿಯನ್ ಆಗುವ ಅವಕಾಶವನ್ನು ಕಳೆದುಕೊಂಡಿತ್ತು. ಆ ಮೂಲಕ ಐಸಿಸಿಯ ಆಯೋಜಿಸಿದ್ದ ಏಕದಿನ ವಿಶ್ವಕಪ್ ಪಂದ್ಯದಲ್ಲಿ 2 ಬಾರಿ, ಟಿ20 ವಿಶ್ವ ಕಪ್‌ ಫೈನಲ್ ಸೇರಿದಂತೆ ಒಟ್ಟು ಮೂರು ಬಾರಿ ಫೈನಲ್ ತಲುಪಿದ್ದರೂ, ಚಾಂಪಿಯನ್ ಆಗುವಲ್ಲಿ ವಿಫಲವಾಗಿತ್ತು. ಆದರೆ, ಈ ಬಾರಿ ಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸುವ ಮೂಲಕ ಮೊದಲ ಬಾರಿಗೆ ಐಸಿಸಿ ಟ್ರೋಫಿಯನ್ನು ಮುಡಿಗೇರಿಸುವಲ್ಲಿ ಯಶಸ್ವಿಯಾಗಿದೆ. ಆ ಮೂಲಕ ವರ್ಷಗಳ ಬಳಿಕ ಅಭಿಮಾನಿಗಳ ಕನಸು ಕೊನೆಗೂ ಈಡೇರಿಸುವಲ್ಲಿ ಸಫಲವಾಗಿದೆ.

ಇಂದಿನ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡದ ನಾಯಕಿ ಲೋರಾ ವೋರ್ಲ್‌ವಾರ್ಟ್ ಶತಕ( 101 ರನ್) ಸಿಡಿಸುವ ಮೂಲಕ ಮಿಂಚಿದರಾದರೂ, ತಮ್ಮ ತಂಡವನ್ನು ಚಾಂಪಿಯನ್ ಪಟ್ಟಕ್ಕೆ ಏರಿಸುವಲ್ಲಿ ವಿಫಲರಾದರು.

ಟೀಮ್ ಇಂಡಿಯಾ ಪರವಾಗಿ ಬ್ಯಾಟಿಂಗ್‌ನಲ್ಲಿ ಮಿಂಚಿದ್ದ ಶಫಾಲಿ ವರ್ಮಾ 2 ವಿಕೆಟ್ ಪಡೆದು ಮಿಂಚಿದರೆ, ಆಲ್ ರೌಂಡರ್ ದೀಪ್ತಿ ಶರ್ಮಾ 5 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಡೆಸಲು ದೆಹಲಿ ಪೊಲೀಸರು ಅನುಮತಿ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...