ICC Women’s World Cup: ನ್ಯೂಜಿಲೆಂಡ್‌ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ

Date:

ಭರವಸೆಯ ಆರಂಭಿಕ ಆಟಗಾರ್ತಿಯರಾದ ಪ್ರತಿಕಾ ರಾವಲ್‌ (122) ಹಾಗೂ ಸ್ಮೃತಿ ಮಂಧನಾ (109) ಇವರ ಭರ್ಜರಿ ಜೊತೆಯಾಟದ ನೆರವಿನಿಂದ ಟೀಮ್ ಇಂಡಿಯಾ ಮಹಿಳಾ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ 53 ರನ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ, ಸೆಮಿಫೈನಲ್‌ಗೆ ಪ್ರವೇಶ ಪಡೆದಿದೆ.

- Advertisement -

ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತದ ಸ್ಟಾರ್ ಓಪನರ್‌ಗಳು ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಪ್ರತಿಕಾ ರಾವಲ್ ಹಾಗೂ ಸ್ಮೃತಿ ಜೋಡಿ ಮೊದಲ ವಿಕೆಟ್‌ಗೆ ಭರ್ಜರಿ ಜೊತೆಯಾಟ ನೀಡಿದರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ನ್ಯೂಜಿಲೆಂಡ್ ಬೌಲರ್‌ಗಳು ವಿಫಲರಾದರು. ಈ ಜೋಡಿ ಆರಂಭದಲ್ಲಿ ತಾಳ್ಮೆಯಿಂದ ಬ್ಯಾಟಿಂಗ್ ಮಾಡಿದ ಬಳಿಕ ಬಿರುಸಿನ ಬ್ಯಾಟಿಂಗ್‌ಗೆ ಮುಂದಾಯಿತು. ಉಭಯ ಆಟಗಾರ್ತಿಯರು ತಮ್ಮ ಉತ್ತಮ ಆಟವನ್ನು ಆಡಿ ಎದುರಾಳಿ ಬೌಲರ್‌ಗಳನ್ನು ಕಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಮೊದಲ ವಿಕೆಟ್‌ಗೆ ಪ್ರತಿಕಾ ರಾವಲ್‌ ಹಾಗೂ ಸ್ಮೃತಿ ಜೋಡಿ 33.2 ಓವರ್‌ಗಳಲ್ಲಿ 212 ರನ್‌ಗಳ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಸ್ಮೃತಿ ಮಂಧಾನ 10 ಬೌಂಡರಿ, 4 ಸಿಕ್ಸರ್ ಸಹಾಯದಿಂದ 109 ರನ್‌ ಬಾರಿಸಿ ಔಟ್ ಆದರು. ಪ್ರತಿಕಾ ಶತಕ 2ನೇ ವಿಕೆಟ್‌ಗೆ ಪ್ರತಿಕಾ ರಾವಲ್ ಹಾಗೂ ಜೇಮಿಮಾ ರೋಡ್ರಿಗಸ್ ಜೋಡಿ ಸಹ ಅರ್ಧಶತಕ ಜೊತೆಯಾಟ ನೀಡಿದರು. ಈ ವೇಳೆ ಪ್ರತಿಕಾ ರಾವಲ್ ಜೋಡಿ 134 ಎಸೆತಗಳಲ್ಲಿ 13 ಬೌಂಡರಿ, 2 ಸಿಕ್ಸರ್ ಸಹಾಯದಿಂದ 122 ರನ್‌ ಸಿಡಿಸಿದರು. ಇನ್ನು ಜೆಮಿಮಾ ಅಜೇಯ 76 ರನ್‌ ಸಿಡಿಸಿದರು. ಈ ವೇಳೆ 11 ಬೌಂಡರಿ ಬಾರಿಸಿದರು. ಅಂತಿಮವಾಗಿ ಭಾರತ 49 ಓವರ್‌ಗಳಲ್ಲಿ 3 ವಿಕೆಟ್‌ಗೆ 340 ರನ್‌ ಕಲೆ ಹಾಕಿತು.

ಇದನ್ನು ಓದಿದ್ದೀರಾ? ಸ್ಮೃತಿ ಮಂಧಾನ ಶತಕದ ದಾಖಲೆ: ಟಿ20 ಚಾಂಪಿಯನ್ನರನ್ನು ಮಣಿಸಿದ ಭಾರತದ ವನಿತೆಯರು

ಆರಂಭಿಕ ಸೂಜಿ ಬೇಟ್ಸ್‌ (1) ರನ್‌ ಕಲೆ ಹಾಕುವಲ್ಲಿ ವಿಫಲರಾದರು. ಜಾರ್ಜಿಯಾ ಪ್ಲಿಮ್ಮರ್ (30) ಬಿಗ್‌ ಇನಿಂಗ್ಸ್‌ ಕಟ್ಟಲೇ ಇಲ್ಲ. ನಾಯಕಿ ಸೋಫಿಯಾ ಡಿವೈನ್‌ (6) ಸಹ ನಿರಾಸೆ ಅನುಭವಿಸಿದರು. 59 ರನ್‌ಗಳಿಗೆ ಮೂರು ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಅಮೆಲಿಯಾ ಕೆರ್ ಹಾಗೂ ಬ್ರೂಕ್ ಹ್ಯಾಲಿಡೇ ಜೋಡಿ 56 ಎಸೆತಗಳಲ್ಲಿ 56 ರನ್‌ ಸೇರಿಸಿತು. ಅಮೆಲಿಯಾ ಕೆರ್ 4 ಬೌಂಡರಿ ನೆರವಿನಿಂದ 45 ರನ್ ಬಾರಿಸಿ ಆರ್ಭಟಿಸಿದರು.

ಬ್ರೂಕ್ ಹ್ಯಾಲಿಡೇ 84 ಎಸೆತಗಳಲ್ಲಿ 9 ಬೌಂಡರಿ, 1 ಸಿಕ್ಸರ್ ನೆರವಿನಿಂದ 81 ರನ್‌ ಸಿಡಿಸಿದರು. ಇಸಾಬೆಲ್ಲಾ ಗೇಜ್ 51 ಎಸೆತಗಳಲ್ಲಿ 10 ಬೌಂಡರಿ ನೆರವಿನಿಂದ ಅಜೇಯ 65 ರನ್‌ ಸಿಡಿಸಿ ಸೋಲಿನಲ್ಲಿ ಮಿಂಚಿದರು. ಅಂತಿಮವಾಗಿ ನ್ಯೂಜಿಲೆಂಡ್‌ ಡೆಕ್‌ವರ್ತ್ ಲೂಯಿಸ್ ನಿಯಮದಂತೆ ನ್ಯೂಜಿಲೆಂಡ್ ಗೆಲುವಿಗೆ 325 ರನ್‌ ಗುರಿ ನೀಡಲಾಗಿತ್ತು. ಆದರೆ ಕಿವೀಸ್‌ 44 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 271 ರನ್‌ ಸಿಡಿಸಿ ಸೋಲು ಕಂಡಿತು. ಭಾರತದ ಪರ ಕ್ರಾಂತಿ ಗೌಡ್‌, ರೆಣುಕಾ ಸಿಂಗ್‌ ತಲಾ 2 ವಿಕೆಟ್‌ ಕಬಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...