ICC Women’s World Cup Semi Final: ದಾಖಲೆಯ ಮೊತ್ತ ಬೆನ್ನಟ್ಟಿದ ಭಾರತ ಫೈನಲ್‌ಗೆ

Date:

ನವಿ ಮುಂಬೈನಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಟೀಮ್ ಇಂಡಿಯಾ ಮಹಿಳೆಯರ ತಂಡ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಫೈನಲ್‌ಗೆ ಪ್ರವೇಶ ಪಡೆದಿದೆ.

- Advertisement -

ಆಸ್ಟ್ರೇಲಿಯಾ ನೀಡಿದ್ದ ಸವಾಲಿನ ಮೊತ್ತವನ್ನು ಬೆನ್ನಟ್ಟುವಲ್ಲಿ ಯಶಸ್ವಿಯಾದ ಹರ್ಮನ್ ಪ್ರೀತ್ ಕೌರ್ ಪಡೆ ಅತ್ಯುತ್ತಮ ಪ್ರದರ್ಶನ ನೀಡಿ ಮೂರನೇ ಬಾರಿ ಫೈನಲ್‌ಗೆ ಪ್ರವೇಶಿಸಿತು. ಭಾನುವಾರ(ನ.2) ನಡೆಯಲಿರುವ ಫೈನಲ್‌ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಭಾರತ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ದಾಖಲೆಯ ರನ್‌ ಬಿನ್ನಟ್ಟಿ ಅಬ್ಬರಿಸಿದೆ. ಭಾರತದ ಪರ ಭರವಸೆಯ ಆಟಗಾರ್ತಿ ಜೆಮಿಮಾ ರೋಡ್ರಿಗಸ್‌ ಸ್ಪೋಟಕ ಬ್ಯಾಟಿಂಗ್‌ ಮಾಡಿ ಗೆಲುವಿನಲ್ಲಿ ಮಿಂಚಿದರು. ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದ ಜೆಮಿಮಾ ದಾಖಲೆಯ ಮೊತ್ತವನ್ನು ಚೇಸ್‌ ಮಾಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದರು.

ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ದಾಖಲೆಯ ರನ್‌ ಬೆನ್ನಟ್ಟಿದೆ. ಈ ಮೊದಲು 2025ರಲ್ಲಿ ಆಸ್ಟ್ರೇಲಿಯಾ ಇದೇ ವಿಶ್ವಕಪ್‌ನ ಲೀಗ್‌ ಹಂತದ ಪಂದ್ಯದಲ್ಲಿ 331 ರನ್‌ ಬೆನ್ನಟ್ಟಿತ್ತು. ಈ ದಾಖಲೆಯನ್ನು ಭಾರತ ಈಗ ಅಳಿಸಿ ಹಾಕಿ, ಹೊಸ ಇತಿಹಾಸ ನಿರ್ಮಿಸಿದೆ.

ಇದನ್ನು ಓದಿದ್ದೀರಾ? ರೋಹಿತ್ ಶರ್ಮಾ ಇತಿಹಾಸ ನಿರ್ಮಾಣ; 38ರ ವಯಸ್ಸಿನ ವಿಶ್ವದ ನಂ.1 ಬ್ಯಾಟ್ಸ್‌ಮನ್

ಮಹತ್ವದ ಪಂದ್ಯದಲ್ಲಿ ಶೆಫಾಲಿ ವರ್ಮಾ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡುವಲ್ಲಿ ವಿಫಲರಾದರು. ಸ್ಮೃತಿ ಮಂಧಾನ ಸಹ 24 ರನ್‌ಗಳಿಗೆ ಔಟ್ ಆದರು. ಮೂರನೇ ವಿಕೆಟ್‌ಗೆ ಹರ್ಮನ್ ಪ್ರೀತ್ ಕೌರ್ ಹಾಗೂ ಜೆಮಿಮಾ ರೊಡ್ರಿಗಾಸ್‌ ಜೋಡಿ 176 ಎಸೆತಗಳಲ್ಲಿ 167 ರನ್‌ ಸಿಡಿಸಿ ತಂಡಕ್ಕೆ ಆಧಾರವಾಯಿತು. ಹರ್ಮನ್ ಪ್ರಿತ್ 10 ಬೌಂಡರಿ, 2 ಸಿಕ್ಸರ್ ಸಹಾಯದಿಂದ 89 ರನ್ ಬಾರಿಸಿ ಔಟ್ ಆದರು. ಮಧ್ಯಮ ಕ್ರಮಾಂಕದಲ್ಲಿ ದೀಪ್ತಿ ಶರ್ಮಾ 24, ರಿಚಾ ಘೋಷ್ 26, ಅಮನ್‌ಜೋತ್‌ ಕೌರ್‌ ಅಜೇಯ 15 ರನ್‌ ಬಾರಿಸಿದರು.

ಜೆಮಿಮಾ ಶತಕ
25 ವರ್ಷದ ಜೆಮಿಮಾ ರೋಡ್ರಿಗಸ್‌ ತಮ್ಮ ವೃತ್ತಿ ಜೀವನದ ಸ್ಮರಣೀಯ ಇನಿಂಗ್ಸ್ ಕಟ್ಟಿದರು. ಇವರು 134 ಎಸೆತಗಳಲ್ಲಿ 14 ಬೌಂಡರಿ ನೆರವಿನಿಂದ ಅಜೇಯ 127 ರನ್‌ ಪೇರಿಸಿದರು. ಅಂತಿಮವಾಗಿ ಭಾರತ 48.3 ಓವರ್‌ಗಳಲ್ಲಿ 5 ವಿಕೆಟ್‌ಗೆ 341 ರನ್‌ ಬಾರಿಸಿ ಫೈನಲ್‌ಗೆ ಅರ್ಹತೆ ಪಡೆಯಿತು.

ಆಸ್ಟ್ರೇಲಿಯಾ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಸತತ 15 ಪಂದ್ಯಗಳನ್ನು ಗೆದ್ದ ದಾಖಲೆಗೆ ತಡೆ ಬಿದ್ದಿತು. 2017ರಲ್ಲಿ ಭಾರತವೇ ಆಸ್ಟ್ರೇಲಿಯಾವನ್ನು ಸೆಮಿಫೈನಲ್‌ ಪಂದ್ಯದಲ್ಲಿ ಮಣಿಸಿ, ಫೈನಲ್‌ಗೆ ಪ್ರವೇಶ ಪಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...