ಫ್ರೆಂಚ್ ಓಪನ್ | 3ನೇ ಬಾರಿ ಪ್ರಶಸ್ತಿ ಗೆದ್ದು ದಾಖಲೆ ಬರೆದ ಇಗಾ ಸ್ವಿಯಾಟೆಕ್

Date:

ಫ್ರೆಂಚ್ ಓಪನ್ ಟೆನಿಸ್ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ವಿಶ್ವ ನಂ.1 ಆಟಗಾರ್ತಿ ಇಗಾ ಸ್ವಿಯಾಟೆಕ್ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

- Advertisement -

ರೋಲಂಡ್‌ ಗ್ಯಾರೋಸ್‌ನ ಫಿಲಿ‍ಪ್‌ ಚಾಟ್ರಿಯರ್‌ ಕೋರ್ಟ್‌ನಲ್ಲಿ ಶನಿವಾರ ನಡೆದ‌ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸ್ವಿಯಾಟೆಕ್, ಚೆಕ್‌ ಗಣರಾಜ್ಯದ ಶ್ರೇಯಾಂಕ ರಹಿತ ಆಟಗಾರ್ತಿ ಕರೋಲಿನಾ ಮುಚೋವಾರನ್ನು 6-2, 5-7, 6-4 ಸೆಟ್‌ಗಳ ಅಂತರದಲ್ಲಿ ಮಣಿಸಿದರು. ಆ ಮೂಲಕ ರೋಲಂಡ್‌ ಗ್ಯಾರೋಸ್‌ನಲ್ಲಿ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದು ದಾಖಲೆ ನಿರ್ಮಿಸಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ವೃತ್ತಿ ಜೀವನದಲ್ಲಿ ಮೂರನೇ ಬಾರಿಗೆ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದ ಇಗಾ ಸ್ವಿಯಾಟೆಕ್, 2007ರ ಬಳಿಕ ಈ ಟೂರ್ನಿಯಲ್ಲಿ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದ ಮೊದಲ ಮೊದಲ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಪೋಲೆಂಡ್‌ನ 22 ವರ್ಷದ ಇಗಾ ಸ್ವಿಯಾಟೆಕ್, ತನ್ನ ಮೊದಲ ನಾಲ್ಕು ಗ್ರ್ಯಾಂಡ್ ಸ್ಲಾಮ್ ಫೈನಲ್‌ಗಳನ್ನು ಗೆದ್ದ ಮೂರನೇ ಮಹಿಳಾ ಆಟಗಾರ್ತಿಯಾಗಿದ್ದಾರೆ. ಇದಕ್ಕೂ ಮೊದಲು ಪ್ಯಾರಿಸ್‌ನಲ್ಲಿ (2020, 2022) ಮತ್ತು ಕಳೆದ ವರ್ಷ ಯುಎಸ್ ಓಪನ್ ಗೆದ್ದಿದ್ದರು.

ಮೋನಿಕಾ ಸೆಲೆಸ್ ಮತ್ತು ನವೋಮಿ ಒಸಾಕಾ ಮಾತ್ರ ಈ ಸಾಧನೆ ಮಾಡಿದ ಇತರ ಆಟಗಾರ್ತಿಯರಾಗಿದ್ದಾರೆ. 1990ರ ದಶಕದ ಆರಂಭದಲ್ಲಿ ಮೋನಿಕಾ ಸೆಲೆಸ್ (1990, 1991, 2002) ನಂತರ, ಇಗಾ ಸ್ವಿಯಾಟೆಕ್ ಫ್ರೆಂಚ್ ಓಪನ್ ಪ್ರಶಸ್ತಿಗಳನ್ನು ಉಳಿಸಿಕೊಂಡ ಅತ್ಯಂತ ಕಿರಿಯ ಮಹಿಳಾ ಆಟಗಾರ್ತಿ ಎನಿಸಿದ್ದಾರೆ.

ಸೆರೆನಾ ವಿಲಿಯಮ್ಸ್ (1999 ಯುಎಸ್ ಓಪನ್, 2002 ಫ್ರೆಂಚ್ ಓಪನ್, 2002 ವಿಂಬಲ್ಡನ್, 2002 ಯುಎಸ್ ಓಪನ್) ನಂತರ ನಾಲ್ಕನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ದಾಖಲೆಗಳನ್ನು ಇಗಾ ಸ್ವಿಯಾಟೆಕ್ ಗಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...