ಐಸಿಸಿ ಟ್ರೋಫಿ | 11 ರನ್‌ಗೆ ಔಟ್‌ ಆದರೂ ಹೊಸ ದಾಖಲೆ ಬರೆದ ಕೊಹ್ಲಿ

Date:

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಪಂದ್ಯಾವಳಿಗಳು ನಡೆಯುತ್ತಿದ್ದು, ಭಾರತ ಮತ್ತು ನ್ಯೂಝಿಲೆಂಡ್ ಕ್ರಿಕೆಟ್‌ ತಂಡಗಳ ನಡುವೆ ದುಬೈನಲ್ಲಿ ಭಾನುವಾರ ಪಂದ್ಯ ನಡೆಯುತ್ತಿದೆ. ಪಂದ್ಯದಲ್ಲಿ ಭಾರತದ ತಂಡ ಮೊದಲು ಬ್ಯಾಟಿಂಗ್‌ ಮಾಡಿದ್ದು, 3ನೇ ಕ್ರಮಾಂಕದಲ್ಲಿ ಸ್ಕ್ರೀಜ್‌ಗೆ ಇಳಿದ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ಕೇವಲ 11 ರನ್‌ಗಳಿಗೆ ಕ್ಯಾಚಿತ್ತು ಕ್ರೀಡಾಂಗಣದಿಂದ ಹೊರ ನಡೆದಿದ್ದಾರೆ. ಆದಾಗ್ಯೂ, ಮತ್ತೊಂದು ದಾಖಲೆಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

- Advertisement -

ವಿಶ್ವ ಕ್ರಿಕೆಟ್‌ ಪಂದ್ಯಾವಳಿಗಳಲ್ಲಿ 300 ಪಂದ್ಯಗಳನ್ನು ಆಡುವ ಮೂಲಕ ಹೊಸ ದಾಖಲೆಗೆ ಸೇರ್ಪಡೆಯಾಗಿದೆ. ಪ್ರಸ್ತುತ ನಡೆಯುತ್ತಿರುವ ನ್ಯೂಜಿಲೆಂಡ್‌ ವಿರುದ್ಧದ ಪಂದ್ಯವು ಕೊಹ್ಲಿ ಅವರ 300ನೇ ಪಂದ್ಯವಾಗಿದೆ. ಜಗತ್ತಿನ ನಾನಾ ಕ್ರಿಕೆಟ್‌ ತಂಡಗಳ ಪೈಕಿ ಈವರೆಗೆ ಕೇವಲ 20 ಮಂದಿ ಮಾತ್ರವೇ 300ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿಸಿದ್ದಾರೆ. ಇದೀಗ, 300 ಪಂದ್ಯಗಳಲ್ಲಿ ಆಡಿದ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ 21ನೆಯವರು ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮಾತ್ರವಲ್ಲದೆ, ಭಾರತ ತಂಡದಲ್ಲಿ 300ಕ್ಕೂ ಅಧಿಕ ಏಕದಿನ ಪಂದ್ಯಗಳನ್ನು ಆಡಿದ ಆಟಗಾರರಲ್ಲಿ ಕೊಹ್ಲಿ 7ನೇ ಆಟಗಾರನಾಗಿದ್ದಾರೆ. ಇದೂವರೆಗೆ, ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ, ರಾಹುಲ್ ದ್ರಾವಿಡ್, ಮೊಹಮ್ಮದ್ ಅಝರುದ್ದೀನ್, ಸೌರವ್ ಗಂಗೂಲಿ ಹಾಗೂ ಯುವರಾಜ್ ಸಿಂಗ್ ಮಾತ್ರವೇ ಭಾರತ ತಂಡದಲ್ಲಿ 300ಕ್ಕೂ ಹೆಚ್ಚು ಪಂದ್ಯಗಳನ್ನು ಆಡಿದ್ದರು.

300 ವಿಶ್ವ ಏಕದಿನ ಪಂದ್ಯಗಳಲ್ಲಿ ಆಡಿರುವ ಕೊಹ್ಲಿ 14,085 ರನ್‌ಗಳನ್ನು ಗಳಿಸಿದ್ದಾರೆ. ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್ ಗಳಿಸಿದವರಲ್ಲಿ ವಿಶ್ವದ 3ನೇ ಬ್ಯಾಟರ್ ಕೂಡ ಕೊಹ್ಲಿ ಆಗಿದ್ದಾರೆ. ಅಲ್ಲದೆ, ಈ ಪಂದ್ಯಗಳಲ್ಲಿ ಒಟ್ಟು 158 ಕ್ಯಾಚ್‌ಗಳನ್ನೂ ಕೊಹ್ಲಿ ಹಿಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...