IND – ENG 2ND TEST | ಗೆಲುವಿಗಾಗಿ ಟೀಂ ಇಂಡಿಯಾದಿಂದ ಹಲವು ತಂತ್ರ

Date:

Advertisements

ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಇಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುನ್ನಡೆ ಸಾಧಿಸಲು ಇಂಗ್ಲೆಂಡ್ ತವಕದಲ್ಲಿದ್ದರೆ, ಸರಣಿ ಸಮಬಲಗೊಳಿಸಲು ಟೀಂ ಇಂಡಿಯಾ ಹಲವು ಕಾರ್ಯತಂತ್ರ ರೂಪಿಸುತ್ತಿದೆ.

ಮೊದಲ ಪಂದ್ಯದಲ್ಲಿ ಇಂಗ್ಲೆಂಡ್‌ನ ಬಾಝ್ ಬಾಲ್ ಶೈಲಿಯ ಆಟಕ್ಕೆ ಕಡಿವಾಣ ಹಾಕುವಲ್ಲಿ ವಿಫಲವಾಗಿದ್ದ ಭಾರತ ತಂಡ ಇದೀಗ ಬೌಲಿಂಗ್ ವಿಭಾಗದಲ್ಲಿ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿದೆ. ತಂಡದಲ್ಲಿ ಇಬ್ಬರು ಸ್ಪಿನ್ನರ್‌ಗಳಿಗೆ ಅವಕಾಶ ನೀಡಲು ಟೀಮ್ ಇಂಡಿಯಾ ನಿರ್ಧರಿಸಿದೆ. ರವೀಂದ್ರ ಜಡೇಜಾ ಜೊತೆಗೆ ವಾಷಿಂಗ್ಟನ್ ಸುಂದರ್ ಅಥವಾ ಕುಲ್ದೀಪ್ ಯಾದವ್ ಆಡುತ್ತಾರಾ ಎಂದು ನೋಡಬೇಕಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಕುಲ್ದೀಪ್ ಯಾದವ್ ಅವರನ್ನು ಆಡಿಸದ ಕಾರಣ ಟೀಮ್ ಇಂಡಿಯಾಗೆ ದುಬಾರಿಯಾಯಿತು. ನಾಲ್ಕನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ 371 ರನ್‌ಗಳ ಗುರಿ ಬೆನ್ನಟ್ಟಿ ಗೆಲುವು ಸಾಧಿಸಿತು.

Advertisements

ಲೀಡ್ಸ್‌ನಲ್ಲಿ ಶಾರ್ದುಲ್ ಠಾಕೂರ್ ಬೌಲಿಂಗ್ ಆಲ್ ರೌಂಡರ್ ಆಗಿ ಆಡಿದ್ದರೂ ಉತ್ತಮ ಪ್ರದರ್ಶನ ನೀಡಲಿಲ್ಲ. ಆದ್ದರಿಂದ ನಿತೀಶ್ ರೆಡ್ಡಿ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಪ್ರಮುಖ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಆಡುವುದು ಇನ್ನೂ ಖಚಿತವಾಗಿಲ್ಲ. ಅವರು ಆಡದಿದ್ದರೆ ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಮತ್ತು ಪ್ರಸಿದ್ಧ್ ಕೃಷ್ಣ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಯಿದೆ. ಭಾರತ ತಂಡವು ಬ್ಯಾಟಿಂಗ್‌ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಕಡಿಮೆ.

ಇನ್ನು ಬರ್ಮಿಂಗ್‌ಹ್ಯಾಮ್‌ನ ವಾತಾವರಣವು ತೇವಾಂಶದಿಂದ ಕೂಡಿರುವುದರಿಂದ ಭಾರತ ತಂಡವು ಹೇಗೆ ಆಡುತ್ತದೆ ಎಂಬುದರ ಮೇಲೆ ಪಂದ್ಯದ ಫಲಿತಾಂಶ ನಿರ್ಧಾರವಾಗುತ್ತದೆ. ಭಾರತ ಆಡಿರುವ 8 ಟೆಸ್ಟ್‌ಗಳಲ್ಲಿ 7 ಇಂಗ್ಲೆಂಡ್‌ ಗೆದ್ದಿದ್ದು, ಒಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.

ಹೆಡಿಂಗ್ಲೆಯಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳು ಉತ್ತಮವಾಗಿ ಆಡಿದರು. ಆದರೆ ಬರ್ಮಿಂಗ್‌ಹ್ಯಾಮ್‌ನಲ್ಲಿ ಇನ್ನಷ್ಟು ಉತ್ತಮ ಪ್ರದರ್ಶನ ನೀಡಬೇಕಿದೆ. ಫೀಲ್ಡಿಂಗ್‌ನಲ್ಲಿ ಸುಧಾರಣೆ ಮಾಡಿಕೊಳ್ಳುವುದು ಮುಖ್ಯ. ಯಶಸ್ವಿ ಜೈಸ್ವಾಲ್ ಪಳಗೊಂಡು ಹಲವರು ಮೊದಲ ಟೆಸ್ಟ್‌ನಲ್ಲಿ ಹಲವು ಕ್ಯಾಚ್‌ಗಳನ್ನು ಕೈಬಿಟ್ಟರು. ಹೀಗಾಗಿ ಅವರ ಫೀಲ್ಡಿಂಗ್ ಸ್ಥಾನ ಬದಲಾಗುವ ಸಾಧ್ಯತೆ ಇದೆ.

ಇದನ್ನು ಓದಿದ್ದೀರಾ? US Open Badminton: ಕರ್ನಾಟಕದ ಆಯೂಷ್‌ ಶೆಟ್ಟಿ ಚಾಂಪಿಯನ್‌;ಮಹಿಳೆಯರ ವಿಭಾಗದಲ್ಲಿ ತನ್ವಿ ಶರ್ಮಾ ರನ್ನರ್‌ ಅಪ್‌

ಕೆ.ಎಲ್. ರಾಹುಲ್, ಶುಬ್ಮನ್ ಗಿಲ್, ಯಶಸ್ವಿ ಜೈಸ್ವಾಲ್ ಮತ್ತು ವಿಕೆಟ್ ಕೀಪರ್ ರಿಷಬ್ ಪಂತ್ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಲಿದ್ದಾರೆ. ಸಾಯಿ ಸುದರ್ಶನ್ ಮತ್ತು ಕರುಣ್ ನಾಯರ್ ಅವರಿಗೆ ಮತ್ತೊಂದು ಅವಕಾಶ ಸಿಗುವ ಸಂಭವವಿದೆ.

ಬೆನ್ ಸ್ಟೋಕ್ಸ್ ನಾಯಕತ್ವದ ಇಂಗ್ಲೆಂಡ್ ತಂಡವು “ಬಾಝ್ ಬಾಲ್” ಮಾದರಿಯನ್ನು ಅನುಸರಿಸುತ್ತಿದೆ. ಕೌಟುಂಬಿಕ ಕಾರಣಗಳಿಂದಾಗಿ ಜೋಫ್ರಾ ಆರ್ಚರ್ ಆಡುತ್ತಿಲ್ಲ. ಹೀಗಾಗಿ ಹಿಂದಿನ ಪಂದ್ಯದಲ್ಲಿ ಆಡಿದ ಆಟಗಾರರೇ ಈ ಪಂದ್ಯದಲ್ಲಿಯೂ ಆಡಲಿದ್ದಾರೆ.

ಮಳೆ ಸಾಧ್ಯತೆ
ಸ್ಥಳೀಯ ಹವಾಮಾನ ವರದಿಯ ಪ್ರಕಾರ ಮೊದಲ ದಿನ ಪಂದ್ಯ ಪ್ರಾರಂಭಕ್ಕೂ ಮುನ್ನ ಅಂದರೆ ಜುಲೈ 2ರಂದು ಮಳೆಯಾಗುವ ಸಾಧ್ಯತೆಯಿದೆ. ಬಳಿಕ ಜುಲೈ 3 ಮತ್ತು 4ರಂದು ನಿರಾತಂಕವಾಗಿ ಆಟ ಆಡಬಹುದು. ಯಾವುದೇ ಮಳೆ ಆತಂಕವಿಲ್ಲ. ಅದೇ ಪಂದ್ಯದ ನಾಲ್ಕನೇ ದಿನವಾದ ಜುಲೈ5ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇಧೆ. ಕೊನೇ ದಿನವಾದ 6ರಂದು ದಿನವಿಡೀ ಮಳೆ ಆಗಲಿದೆ ಎಂದು ವರದಿ ತಿಳಿಸಿದೆ. ಪ್ರತಿದಿನವೂ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪಂದ್ಯ ಆರಂಭ: ಮಧ್ಯಾಹ್ನ 3.30

ಸ್ಥಳ: ಎಜ್‌ಬಾಸ್ಟನ್‌, ಬರ್ಮಿಂಗ್‌ಹ್ಯಾಮ್‌

ನೇರ ಪ್ರಸಾರ: ಸೋನಿ ನೆಟ್‌ವರ್ಕ್ ಚಾನಲ್ ಮತ್ತು ಜಿಯೋ ಹಾಟ್ ಸ್ಟಾರ್ ಆ್ಯಪ್

ಎಜ್‌ಬಾಸ್ಟನ್‌ನಲ್ಲಿ ಭಾರತ ಸಾಧನೆ (1967-2022)

8 ಮುಖಾಮುಖಿ

7 ಭಾರತ ಸೋಲು

1 ಡ್ರಾ

137 ಮುಖಾಮುಖಿ

52 ಇಂಗ್ಲೆಂಡ್‌ ಗೆಲುವು

35 ಭಾರತ ಜಯ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X