IND – ENG 3RD Test: 2ನೇ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್‌ಗೆ ಆರಂಭಿಕ ಆಘಾತ

Date:

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ – ಇಂಗ್ಲೆಂಡ್‌ ನಡುವಿನ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನವಾದ ಇಂದು ಆಂಗ್ಲರ ತಂಡ ತನ್ನ ಎರಡನೇ ಇನಿಂಗ್ಸ್‌ನಲ್ಲಿ ಆರಂಭಿಕ ಆಘಾತ ಅನುಭವಿಸಿದೆ.

- Advertisement -

2 ರನ್‌ಗಳಿಗೆ ನಾಲ್ಕನೇ ದಿನದಾಟ ಆರಂಭಿಸಿದ ಇಂಗ್ಲೆಂಡ್‌ ತಂಡ 22 ರನ್‌ ಆಗುವಷ್ಟರಲ್ಲಿಯೇ ಮೊದಲ ವಿಕೆಟ್ ಕಳೆದುಕೊಂಡಿರು. ಆರಂಭಿಕ ಆಟಗಾರ ಬೆನ್‌ ಡೆಕೆಟ್‌ 12 ರನ್‌ ಗಳಿಸಿದ್ದಾಗ ಮೊಹಮ್ಮದ್ ಸಿರಾಜ್‌ ಬೌಲಿಂಗ್‌ನಲ್ಲಿ ಬುಮ್ರಾಗೆ ಕ್ಯಾಚ್‌ ನೀಡಿ ಪೆವಿಲಿಯನ್‌ಗೆ ತೆರಳಿದರು. 12ನೇ ಓವರ್‌ನಲ್ಲಿ 4 ರನ್‌ ಗಳಿಸಿದ್ದ ಓಲಿ ಪೋಪ್‌ ಸಿರಾಜ್‌ ಅವರ ಎಲ್‌ಬಿ ಬಲೆಗೆ ಬಿದ್ದರು. ಪಾನೀಯ ವಿರಾಮದ ವೇಳೆಗೆ ಆಂಗ್ಲರ ತಂಡ 12 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 42ರನ್‌ ಗಳಿಸಿದೆ. ಆರಂಭಿಕ ಜಾಕ್‌ ಕ್ರಾಲಿ(17) ಹಾಗೂ ಅನುಭವಿ ಜೋರೂಟ್ (0) ಆಟವಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಶನಿವಾರ ಭಾರತ ಮೊದಲ ಇನಿಂಗ್ಸ್‌ನಲ್ಲಿ 3 ವಿಕೆಟ್‌ಗೆ 145 ರನ್‌ಗಳಿಂದ ಆಟ ಮುಂದುವರೆಸಿತು. ನಾಲ್ಕನೇ ವಿಕೆಟ್‌ಗೆ ಕೆಎಲ್ ರಾಹುಲ್ ಹಾಗೂ ರಿಷಭ್ ಪಂತ್ ಜೊಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಮೊದಲಾವಧಿಯ ಕೊನೆಯ ವರೆಗೂ ಎಚ್ಚರಿಕೆಯ ಬ್ಯಾಟ್ ಮಾಡಿತು. ಈ ವೇಳೆ ಈ ಜೊಡಿ 198 ಎಸೆತಗಳನ್ನು ಎದುರಿಸಿ 141 ರನ್‌ಗಳ ಕಾಣಿಕೆ ನೀಡಿತು. ಆದರೆ ರಿಷಭ್‌ ಪಂತ್‌ ಭೋಜನ ವಿರಾಮದ ಕೊನೆಯ ಓವರ್‌ನಲ್ಲಿ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆದರು.

ಇದನ್ನು ಓದಿದ್ದೀರಾ? ಇಂಗ್ಲೆಂಡ್‌ ನೆಲದಲ್ಲಿ ಹೊಸ ದಾಖಲೆ ಬರೆದ ಭಾರತದ ಮಹಿಳಾ ಕ್ರಿಕೆಟ್ ತಂಡ

ರಿಷಭ್ ಪಂತ್‌ 112 ಎಸೆತಗಳಲ್ಲಿ 8 ಬೌಂಡರಿ, 2 ಸಿಕ್ಸರ್ ಸಹಾಯದಿಂದ 72 ರನ್‌ ಬಾರಿಸಿ ಮಿಂಚಿದರು. ಕನ್ನಡಿಗ ಕೆ ಎಲ್ ರಾಹುಲ್‌ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡಿದರು. ಇವರು 177 ಎಸೆತಗಳಲ್ಲಿ 13 ಬೌಂಡರಿ ನೆರವಿನಿಂದ 100 ರನ್‌ ಬಾರಿಸಿ ಔಟ್ ಆದರು. ಆರನೇ ವಿಕೆಟ್‌ಗೆ ರವೀಂದ್ರ ಜಡೇಜಾ ಹಾಗೂ ನಿತೀಶ್‌ ಕುಮಾರ್‌ ರೆಡ್ಡಿ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೊಡಿ ಬಹು ಸಮಯ ಇಂಗ್ಲೆಂಡ್‌ ಬೌಲರ್‌ಗಳನ್ನು ಕಾಡಿತು. ಈ ಜೋಡಿ 165 ಎಸೆತಗಳಲ್ಲಿ 72 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿ ತಂಡಕ್ಕೆ ಆಸರೆಯಾಯಿತು. 30 ರನ್‌ ಬಾರಿಸಿ ಭರವಸೆಯ ಮೂಡಿಸಿದ್ದ ನಿತೀಶ್‌ ಕುಮಾರ್ ರೆಡ್ಡಿ ಇಲ್ಲದ ಹೊಡೆತಕ್ಕೆ ಮುಂದಾಗಿ ಸ್ಟೋಕ್ಸ್‌ಗೆ ವಿಕೆಟ್‌ ಒಪ್ಪಿಸಿದರು.

ಏಳನೇ ವಿಕೆಟ್‌ಗೆ ವಾಷಿಂಗ್ಟನ್‌ ಸುಂದರ್‌ ಹಾಗೂ ರವೀಂದ್ರ ಜಡೇಜಾ ಜೋಡಿ ಸಹ ತಂಡಕ್ಕೆ ಆಧಾರವಾಯಿತು. ಈ ಜೊಡಿ 113 ಎಸೆತಗಳಲ್ಲಿ 50 ರನ್‌ ಸೇರಿಸಿತು. ಈ ವೇಳೆ ಜಡೇಜಾ 8 ಬೌಂಡರಿ, 1 ಸಿಕ್ಸರ್ ಸಹಾಯದಿಂದ 72 ರನ್‌ ಬಾರಿಸಿ ಅಬ್ಬರಿಸಿತು. ವಾಷಿಂಗ್ಟನ್‌ ಸುಂದರ್‌ 23 ರನ್‌ ಬಾರಿಸಿ ತಂಡಕ್ಕೆ ಆಧಾರವಾದರು. ಅಂತಿಮವಾಗಿ ಭಾರತ 387 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಕ್ರಿಸ್‌ ವೋಕ್ಸ್‌ 3, ಜೋಫ್ರಾ ಆರ್ಚರ್‌, ಬೆನ್‌ ಸ್ಟೋಕ್ಸ್‌ ತಲಾ ಎರಡು ವಿಕೆಟ್‌ ಕಬಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಆಕ್ಷನ್-ಥ್ರಿಲ್ಲರ್ ಚಿತ್ರ 'ಜೈಲರ್ 2' ಸಿನಿಮಾವನ್ನು...

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ: ಮೊದಲ ದಿನವೇ 4 ಚಿನ್ನ ಸೇರಿ 11 ಪದಕಗಳ ಸಾಧನೆ!

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತ ಭರ್ಜರಿ...

ವಿಶ್ವಕಪ್ ಸಿದ್ಧತೆಗೆ ಕಿವೀಸ್ ಸರಣಿ ಪರೀಕ್ಷೆ: ಗಿಲ್– ಶ್ರೇಯಸ್ ನಾಯಕತ್ವದಲ್ಲಿ ಟೀಂ ಇಂಡಿಯಾ ಸಜ್ಜು

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ....