IND – SA ODI | 20 ಪಂದ್ಯಗಳ ನಂತರ ಟಾಸ್‌ ಗೆದ್ದ ಭಾರತ; ಉಭಯ ತಂಡಗಳಲ್ಲಿ ಬದಲಾವಣೆ

Date:

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಟೀಂ ಇಂಡಿಯಾದ ನಾಯದ ಕೆ ಎಲ್‌ ರಾಹುಲ್‌ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.ಇನ್ನೊಂದು ಗಮನಿಸಬೇಕಾದ ಸಂಗತಿ ಏನಂದರೆ ಸತತ 20 ಪಂದ್ಯದ ನಂತರ ಭಾರತ ಟಾಸ್‌ ಗೆದ್ದಿದೆ.

- Advertisement -

ಸರಣಿ ಈಗಾಗಲೇ 1-1 ಸಮಬಲ ಸಾಧಿಸಿದ್ದು, ಸರಣಿ ಗೆಲ್ಲಲು ಉಭಯ ತಂಡಗಳಿಗೂ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ದಕ್ಷಿಣ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕೆ ದಕ್ಷಿಣ ಆಫ್ರಿಕಾ ತಂಡದ ಇಬ್ಬರು ಆಟಗಾರರು ಅಲಭ್ಯರಾಗಿದ್ದಾರೆ.

ರಾಯ್​ಪುರದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಗಾಯಗೊಂಡಿದ್ದ ನಾಂಡ್ರೆ ಬರ್ಗರ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹಾಗೆಯೇ ಬ್ಯಾಟಿಂಗ್ ವೇಳೆ ಕಾಲು ನೋವಿಗೆ ತುತ್ತಾಗಿದ್ದ ಎಡಗೈ ದಾಂಡಿಗ ಟೋನಿ ಡಿ ಝೋರ್ಝಿ ಸಹ ಈ ಮ್ಯಾಚ್​ಗೆ ಅಲಭ್ಯರಾಗಿದ್ದಾರೆ.

ಇದನ್ನು ಓದಿದ್ದೀರಾ? “ನಾನು ಕೋಚ್ ಆಗಿದ್ದರೆ ಸೋಲಿನ ಹೊಣೆ ಮೊದಲು ಹೊರುತ್ತಿದ್ದೆ”: ಗಂಭೀರ್ ವಿರುದ್ಧ ರವಿ ಶಾಸ್ತ್ರಿ ವಾಗ್ದಾಳಿ

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ವಾಷಿಂಗ್ಟನ್ ಸುಂದರ್ ಸ್ಥಾನದಲ್ಲಿ ಇಂದಿನ ಪಂದ್ಯದಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯಲಿದ್ದಾರೆ.

ನಿರ್ಣಾಯಕ ಪಂದ್ಯ:

ಸರಣಿಯಲ್ಲಿ ಈ ಪಂದ್ಯ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ, ದ್ವಿತೀಯ ಮ್ಯಾಚ್​ನಲ್ಲಿ ದಕ್ಷಿಣ ಆಫ್ರಿಕಾ ತಂಡ ಜಯ ಸಾಧಿಸಿದೆ. ಅದರಂತೆ ಈ ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ.

ಭಾರತ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ದಕ್ಷಿಣ ಆಫ್ರಿಕಾ:  ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕೆಲ್ಟನ್, ಐಡೆನ್ ಮಾರ್ಕ್ರಾಮ್ , ಮ್ಯಾಥ್ಯೂ ಬ್ರೀಟ್ಝ್​​ಕೆ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್,  ಲುಂಗಿ ಎನ್​ಗಿಡಿ, ಕೇಶವ್ ಮಹಾರಾಜ್, ಒಟ್ನೀಲ್ ಬಾರ್ಟ್‌ಮ್ಯಾನ್.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾವಲ್ಪಿಂಡಿಯಲ್ಲಿ ದಾಖಲೆಗಳ ಸುರಿಮಳೆ: ಇಂಗ್ಲೆಂಡ್ ವಿರುದ್ಧ ಶ್ರೀಲಂಕಾಗೆ ಐತಿಹಾಸಿಕ ಜಯ

ಪಾಕಿಸ್ತಾನದ ರಾವಲ್ಪಿಂಡಿ ಕ್ರೀಡಾಂಗಣದಲ್ಲಿ 2026ರ ಅಕ್ಟೋಬರ್ 22ರಂದು ನಡೆದ ಏಕದಿನ ತ್ರಿಕೋನ...

ಏಷ್ಯನ್ ಪ್ಯಾರಾ ಗೇಮ್ಸ್: ಸಂದೀಪ್, ಹನಿಗೆ ವಿಶ್ವ ದಾಖಲೆಯ ಚಿನ್ನ; ಭಾರತಕ್ಕೆ 100ನೇ ಪದಕದ ಸಂಭ್ರಮ

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪ್ಯಾರಾ ಅಥ್ಲೀಟ್‌ಗಳು...

ದಾಖಲೆಯ ರನ್ ಬೆನ್ನತ್ತಿದ ಭಾರತಕ್ಕೆ ಜಯ: ನ್ಯೂಜಿಲೆಂಡ್ ವಿರುದ್ಧ ಮಿಂಚಿದ ಸಂಜು ಸ್ಯಾಮ್ಸನ್

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ...

ಪ್ಯಾರಾ ಏಷ್ಯನ್ ಗೇಮ್ಸ್ 2026: ಒಂದೇ ದಿನ ಎರಡು ಚಿನ್ನದ ಪದಕ ಗೆದ್ದು ಬೀಗಿದ ಶೀತಲ್ ದೇವಿ

ಏಷ್ಯನ್ ಪ್ಯಾರಾ ಗೇಮ್ಸ್ 2026 ರಲ್ಲಿ ಭಾರತದ ಹೆಮ್ಮೆಯ ಪ್ಯಾರಾ ಆರ್ಚರಿ...