IND vs AUS 2nd ODI | ಟಾಸ್‌ ಗೆದ್ದ ಆಸೀಸ್, ಮೊದಲ ಗೆಲುವಿನ ತವಕದಲ್ಲಿ ಭಾರತ

Date:

ಅಡಿಲೇಡ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಇಂದು ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್‌ ಗೆದ್ದ ಆಸೀಸ್‌ ತಂಡದ ನಾಯಕ ಮಿಚೆಲ್ ಮಾರ್ಶ್ ಭಾರತಕ್ಕೆ ಬ್ಯಾಟಿಂಗ್‌ ಆಹ್ವಾನಿಸಿದ್ದಾರೆ.

- Advertisement -

ಮೊದಲ ಏಕದಿನದಲ್ಲಿ ಸೋತಿರುವ ಕಾರಣ ಭಾರತ 0-1 ರಿಂದ ಸರಣಿ ಹಿನ್ನಡೆಯಲ್ಲಿದ್ದು, ಈ ಪಂದ್ಯ ಗೆದ್ದು ಸರಣಿ ಸಮತೋಲನಗೊಳಿಸುವ ನಿರೀಕ್ಷೆಯಲ್ಲಿ ಟೀಂ ಇಂಡಿಯಾ ಸಜ್ಜಾಗಿದೆ. ಪರ್ಥ್‌ನಲ್ಲಿ ಮೊದಲ ಪಂದ್ಯದಲ್ಲಿ ಭಾರತ 131 ರನ್‌ಗಳನ್ನು ಗಳಿಸಿದ್ದರೂ ಮಳೆಯಿಂದಾಗಿ ಡಕ್‌ವರ್ಥ್ ಲೂಯಿಸ್‌ ವಿಧಾನದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿತ್ತು. ಈಗ ಅಡಿಲೇಡ್‌ನಲ್ಲಿ ಚೆನ್ನಾಗಿ ನುರಿದು ಪಿಚ್ ಬ್ಯಾಟಿಂಗ್‌ಗೆ ಅನುಕೂಲಕರವಾಗಿದ್ದು, ಭಾರತ ಉತ್ತಮ ರನ್‌ ರನ್‌ಗಳಿಸುವ ತವಕದಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಭಾರತದ ತಂಡದಲ್ಲಿ ಈ ಪಂದ್ಯಕ್ಕೆ ಯಾವುದೇ ಬದಲಾವಣೆಗಳಿಲ್ಲ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್ ಅವರು ಉತ್ತಮ ಆಟ ಆಟವಾಡುವ ಸಂಭವವಿದೆ.

ಆಸ್ಟ್ರೇಲಿಯಾದಲ್ಲಿ ಜೋಶ್ ಫಿಲಿಪ್ ಬದಲಿಗೆ ಅಲೆಕ್ಸ್ ಕ್ಯಾರಿ ವಿಕೆಟ್ ಕೀಪರ್ ಆಗಿ ಸೇರಿಕೊಂಡಿದ್ದಾರೆ ಹಾಗೂ ನೆಥನ್ ಎಲಿಸ್ ಬದಲಿಗೆ ಜೇವಿಯರ್ ಬಾರ್ಟ್ಲೆಟ್ ತಂಡಕ್ಕೆ ಅವಕಾಶ ಪಡೆದಿದ್ದಾರೆ. ಆಡಮ್ ಜಾಂಪಾ ಕೂಡ ಮ್ಯಾಥ್ಯೂ ಕುಹ್ನೆಮನ್ ಬದಲಿಗೆ ಮರುಪ್ರವೇಶ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ |ಕಾರ್ಮಿಕರ ಹೊಟ್ಟೆ ಮೇಲೆ ಮತ್ತೆ ಮೋದಿ ಹೊಡೆತ – ಕಡುಕಠಿಣ ಪಿಎಫ್ ಹಿಂಪಡೆತ

ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಭಾರತ ಸರಣಿಯನ್ನು ಸಮನಾಗಿಸಿಕೊಳ್ಳಲಿದೆ. ಆಸ್ಟ್ರೇಲಿಯಾ ಕೂಡ ತವರಿನ ಪಿಚ್‌ನಲ್ಲಿ ಸರಣಿಯ ಜಯವನ್ನು ಖಚಿತಪಡಿಸಿಕೊಳ್ಳಲು ಬಯಸುತ್ತಿದೆ.

ಪಂದ್ಯವಾಡುವ ಉಭಯ ತಂಡಗಳು:

ಭಾರತ: ಶುಭ್‌ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆ ಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ: ಮಿಚೆಲ್ ಮಾರ್ಶ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕಾಂನೊಲಿ, ಮಿಚೆಲ್ ಓವೆನ್, ಜೇವಿಯರ್ ಬಾರ್ಟ್ಲೆಟ್, ಮಿಚೆಲ್ ಸ್ಟಾರ್ಕ್, ಆಡಮ್ ಜಾಂಪಾ, ಜೋಷ್ ಹೇಜಲ್‌ವುಡ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...