ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಭಾರೀ ಹಣಾಹಣಿ ನಡೆದಿದೆ. ಆಸ್ಟ್ರೇಲಿಯಾ ನೆಲದಲ್ಲಿ ಟೀಮ್ ಇಂಡಿಯಾ ಬೌಲರ್ ಜಸ್ಪ್ರೀತ್ ಬೂಮ್ರಾ ಅಬ್ಬರಿಸಿದ್ದಾರೆ. ಟೆಸ್ಟ್ನ 2ನೇ ಇನ್ನಿಂಗ್ಸ್ನಲ್ಲಿ ಐದು ವಿಕೆಟ್ ಬರೆದು, ಆಸಿಸ್ ಪಡೆಯನ್ನು ನಡುಗಿಸಿದ್ದಾರೆ.
ಅಸ್ಟ್ರೇಲಿಯಾದ ಬ್ರಿಸ್ಬೇನ್ನ ಗಾಬಾದಲ್ಲಿ ಮೂರನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ ಬೂಮ್ರಾ ಬೌಲಿಂಗ್ಗೆ ಆಸ್ಟ್ರೇಲಿಯಾ ಆಟಗಾರರು ತತ್ತರಿಸಿಹೋಗಿದ್ದಾರೆ. ಆಸ್ಪ್ರೇಲಿಯಾ ತಂಡದ ಉಸ್ಮಾನ್ ಖ್ವಾಜಾ, ನೇಥನ್ ಮೆಕ್ಸ್ವೀನಿ, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ ಹಾಗೂ ಮಿಚೆಲ್ ಮಾರ್ಷ್ ಅವರ ವಿಕೆಟ್ಗಳನ್ನು ಕಿತ್ತುಕೊಂಡಿದ್ದಾರೆ.
ಬೂಮ್ರಾ ಅಬ್ಬರದ ನಡುವೆಯೂ ಟ್ರಾವಿಸ್ ಹೆಡ್ ಮತ್ತು ಸ್ಟೀವ್ ಸ್ಮಿತ್ ಶತಕ ಸಿಡಿಸಿದ್ದು, ಆಸ್ಟ್ರೇಲಿಯಾ ತಂಡದ ರನ್ಗಳ ಮೊತ್ತವು 350ರ ಗಡಿ ದಾಟುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಐದು ವಿಕೆಟ್ಗಳನ್ನು ಪಡೆದಿರುವ ಬೂಮ್ರಾ, ತಮ್ಮ ಟೆಸ್ಟ್ ಆಟಗಳಲ್ಲಿ 12 ಬಾರಿ ಐದು ವಿಕೆಟ್ಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.
ಇದೇ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾದ ಪರ್ತನ್ನಲ್ಲಿ ನಡೆದ ಮೊದಲ ಟೆಸ್ಟ್ನಲ್ಲಿ ಬೂಮ್ರಾ ಬರೋಬ್ಬರಿ 8 ವಿಕಟ್ಗಳನ್ನು ಪಡೆದಿದ್ದರು.