ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆಯಲಿದೆ.
ಇಂದು ಆರಂಭವಾಗುವ ಎರಡನೇ ಟೆಸ್ಟ್‌ಗೆ ಮಳೆಯ ಭೀತಿ ಇದೆ. ಹವಾಮಾನ ವರದಿಯ ಪ್ರಕಾರ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆಯಾಗುವ ಸಾಧ್ಯತೆ ಶೇಕಡಾ 92ರಷ್ಟಿದೆ. ಮಳೆಯಿಂದಾಗಿ ಒಂದು ಗಂಟೆ ಟಾಸ್ ಕೂಡ ವಿಳಂಬವಾಗಿದ್ದು, ಟಾಸ್ ಗೆದ್ದಿರುವ ಭಾರತ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಡಲಾಗಿದೆ. ಏಕೆಂದರೆ ಈ ಇಬ್ಬರೂ ಆಟಗಾರರು ಚೆನ್ನೈ ಟೆಸ್ಟ್‌ನಲ್ಲಿ ದಯನೀಯವಾಗಿ ವಿಫಲರಾಗಿದ್ದರು.
ಈ ಸುದ್ದಿ ಓದಿದ್ದೀರಾ? ಪ್ಯಾರಾಲಿಂಪಿಕ್ಸ್: ದಾಖಲೆಯ 29 ಪದಕಗಳನ್ನು ಗೆದ್ದ ಭಾರತ
ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು 280 ರನ್ ಗಳಿಂದ ಸೋಲಿಸಿತು. ಅದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತವು ಮೊದಲ ಬಾರಿಗೆ ಸೋಲಿಗಿಂತ ಹೆಚ್ಚು ಗೆಲುವು ದಾಖಲಿಸಿತು. ಸೆಪ್ಟೆಂಬರ್ 27ರಿಂದ ಕಾನ್ಪುರದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಗೆಲುವಿನೊಂದಿಗೆ ಭಾರತವು ಕ್ಲೀನ್ ಸ್ವೀಪ್ ಮಾಡಲು ಎದುರು ನೋಡುತ್ತಿದೆ.
ನಿವೃತ್ತಿ ಖಚಿತಪಡಿಸಿದ ಬಾಂಗ್ಲಾ ಆಲ್‌ರೌಂಡರ್
ಬಾಂಗ್ಲಾದೇಶ ಕ್ರಿಕೆಟ್ ತಂಡದ ಹಿರಿಯ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಈಗಾಗಲೇ ಟಿ20 ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಕಾನ್ಪುರದಲ್ಲಿ ನಡೆಯಲಿರುವ ಭಾರತ ವಿರುದ್ಧ ದಎರಡನೇ ಟೆಸ್ಟ್ ಪಂದ್ಯದ ಮೂಲಕ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ವಿದಾಯ ಹೇಳುವ ಸುಳಿವು ನೀಡಿದ್ದಾರೆ.
“ಮೀರ್‌ಪುರದಲ್ಲಿ ನನ್ನ ಕೊನೆಯ ಟೆಸ್ಟ್ ಆಡುವ ಬಯಕೆಯನ್ನು ನಾನು ವ್ಯಕ್ತಪಡಿಸಿದ್ದೇನೆ. ಅದು ಸಾಧ್ಯವಾಗದಿದ್ದರೆ, ಭಾರತ ವಿರುದ್ಧದ ಎರಡನೇ ಟೆಸ್ಟ್ ನನ್ನ ಕೊನೆಯ ಟೆಸ್ಟ್ ಆಗಿರುತ್ತದೆ. ಬಾಂಗ್ಲಾದೇಶ ಕ್ರಿಕೆಟ್ ನನಗೆ ತುಂಬಾ ನೀಡಿದೆ. ನಾನು ಸುದೀರ್ಘ ಸ್ವರೂಪದಲ್ಲಿ ನನ್ನ ಕೊನೆಯ ಪಂದ್ಯವನ್ನು ಆಡಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ
ಪಂದ್ಯವಾಡುವ ಉಭಯ ತಂಡಗಳು
ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ ಮತ್ತು ಯಶ್ ದಯಾಳ್.
ಬಾಂಗ್ಲಾದೇಶ ತಂಡ:
ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಜಾಕಿರ್ ಹಸನ್, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಾದ್ಮನ್ ಇಸ್ಲಾಂ, ಶಕೀಬ್ ಅಲ್ ಹಸನ್, ಮೆಹದಿ ಹಸನ್ ಮಿರಾಜ್, ಝಾಕರ್ ಅಲಿ ಅನಿಕ್, ತಸ್ಕಿನ್ ಅಹ್ಮದ್, ಲಿಟನ್ ದಾಸ್, ಹಸನ್ ಮಹಮೂದ್, ತೈಜುಲ್ ಇಸ್ಲಾಂ, ಮಹ್ಮುದುಲ್ ಹಸನ್ ಜಾಯ್, ನಹಿದ್ ರಾಣಾ, ಖಾಲಿದ್ ಅಹ್ಮದ್.
