IND – ENG 3RD TEST | ಟಾಸ್‌ ಗೆದ್ದ ಇಂಗ್ಲೆಂಡ್‌; ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

Date:

ಕ್ರಿಕೆಟ್‌ ಕಾಶಿ ಲಾರ್ಡ್ಸ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡದ ನಾಯಕ ಬಿನ್‌ ಸ್ಟೋಕ್ಸ್‌ ಬ್ಯಾಟಿಂಗ್‌ ಆಯ್ದುಕೊಂಡಿದ್ದಾರೆ. ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಜಯಗಳಿಸಿರುವುದರಿಂದ ಮೂರನೇ ಪಂದ್ಯ ರೋಚಕತೆ ಹುಟ್ಟಿಸಿದೆ. ಈ ಮೈದಾನದಲ್ಲಿ ಟೀಮ್ ಇಂಡಿಯಾ ಮತ್ತೊಂದು ಗೆಲುವು ಸಾಧಿಸಿ, ಸರಣಿಯಲ್ಲಿ ಮುನ್ನಡೆ ಸಾಧಿಸುವ ಯೋಜನೆ ಮಾಡಿಕೊಂಡಿದೆ. ಎರಡನೇ ಪಂದ್ಯದಲ್ಲಿ ಜಯ ದಾಖಲಿಸಿರುವ ಭಾರತ ಆತ್ಮವಿಶ್ವಾಸದಿಂದ ಬೀಗುತ್ತಿದೆ.

- Advertisement -

ಲಾರ್ಡ್ಸ್‌ ಅಂಗಳದಲ್ಲಿ ಈಗಾಗಲೇ ಉಭಯ ತಂಡಗಳು ಒಟ್ಟು 19 ಬಾರಿ ಮುಖಾಮುಖಿ ಆಗಿದ್ದು, ಭಾರತ ಕೇವಲ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 4 ಪಂದ್ಯಗಳಲ್ಲಿ ಸೋಲು ಕಂಡಿದೆ. 12 ಪಂದ್ಯಗಳು ಡ್ರಾ ಆಗಿವೆ. ಕಳೆದ ಕೆಲವು ವರ್ಷಗಳಲ್ಲಿ ಈ ಮೈದಾನದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಮಾಡಲು ಹೆಣಗಾಟ ನಡೆಸಿತ್ತು. ಅಲ್ಲದೆ ಭಾರತದ ಬೌಲಿಂಗ್ ವಿಭಾಗ ಸಹ ಎದುರಾಳಿಗಳ ವಿಕೆಟ್‌ ಪಡೆಯಲು ಸಾಧ್ಯವಾಗಿಲ್ಲ. ಈ ಬಾರಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ಬಲಾಢ್ಯವಾಗಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಭಾರತದ ಯುವಪಡೆ ಸಂಘಟಿತ ಆಟದ ಮೇಲೆ ಹೆಚ್ಚಿನ ವಿಶ್ವಾಸ ಇಟ್ಟಿಕೊಂಡಿದೆ. ಆರಂಭಿಕರಾಗಿ ಕಣಕ್ಕೆ ಇಳಿಯುವ ಯಶಸ್ವಿ ಜೈಸ್ವಾಲ್ ಹಾಗೂ ಕನ್ನಡಿಗ ಕೆ ಎಲ್‌ ರಾಹುಲ್‌ ಎದುರಾಳಿ ತಂಡಕ್ಕೆ ಕಾಟ ನೀಡಬಲ್ಲರು. ಈ ಇಬ್ಬರೂ ಆಟಗಾರರು ನೆಲಕ್ಕೂರಿ ನಿಂತು ಬ್ಯಾಟ್ ಮಾಡಿದಲ್ಲಿ ಬಿಗ್‌ ಸ್ಕೊರ್‌ ಕನಸು ಕಾಣಬಹುದು. ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಕರುಣ್ ನಾಯರ್ ಅವರ ಮೇಲೆ ನಿರೀಕ್ಷೆಗಳು ಹೆಚ್ಚಾಗಿವೆ. ಇದು ಅವರಿಗೆ ಕೊನೆಯ ಅವಕಾಶವೆಂದು ರೀತಿ ತೋರುತ್ತಿದೆ. ಎರಡು ಟೆಸ್ಟ್‌ ಪಂದ್ಯಗಳ ನಾಲ್ಕು ಇನಿಂಗ್ಸ್‌ನಲ್ಲಿ ಕರುಣ್‌ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಲಾರ್ಡ್ಸ್‌ನಲ್ಲಿ ಇವರಿಗೆ ಅವಕಾಶ ಸಿಕ್ಕಲ್ಲಿ ಉತ್ತಮ ಇನಿಂಗ್ಸ್ ಕಟ್ಟುವ ಅವಶ್ಯಕತೆ ಇದೆ.

ಶುಭಮನ್‌ ಮೇಲೆ ಕಣ್ಣು ಲೀಡ್ಸ್‌ ಹಾಗೂ ಬರ್ಮಿಂಗ್‌ ಹ್ಯಾಮ್‌ ಅಂಗಳದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾದ ನಾಯಕ ಶುಭಮನ್‌ ಗಿಲ್ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಇವರು ಕಳೆದ ಪಂದ್ಯದಲ್ಲಿ 269 ರನ್ ಹಾಗೂ 161 ರನ್‌ ಸಿಡಿಸಿ ಅಬ್ಬರಿಸಿದ್ದರು. ಲಾರ್ಡ್ಸ್‌ನಲ್ಲಿ ಪ್ರಿನ್ಸ್ ಹೇಗೆ ಬ್ಯಾಟಿಂಗ್ ನಡೆಸುತ್ತಾರೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಇನ್ನು ಐದನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ರಿಷಭ್‌ ಪಂತ್ ಎದುರಾಳಿ ಬೌಲರ್‌ಗಳಿಗೆ ಕಾಟ ನೀಡಬಲ್ಲ ಬೌಲರ್‌.

ಇದನ್ನು ಓದಿದ್ದೀರಾ? ಲಾರಾ ಮೇಲಿನ ಗೌರವದಿಂದ 400ರ ಗಡಿ ಸಮೀಪಿಸಲಿಲ್ಲ; 367 ರನ್‌ ಸಿಡಿಸಿದ ವಿಯಾನ್ ಮುಲ್ಡರ್ ಮಾತು

ಆಲ್‌ರೌಂಡರ್‌ ರವೀಂದ್ರ ಜಡೇಜಾ, ಎರಡನೇ ಟೆಸ್ಟ್‌ನಲ್ಲಿ ಅಪಾಯದಲ್ಲಿದ್ದ ತಂಡಕ್ಕೆ ನೆರವಾಗಿದ್ದರು. ಹೀಗಾಗಿ ಇವರನ್ನು ತಂಡದಲ್ಲಿ ಉಳಿಸಿಕೊಳ್ಳುವುದು ಬಹುತೇಕ ಖಚಿತ. ನಿತೀಶ್‌ ಕುಮಾರ್‌ ರೆಡ್ಡಿ ಆಡುವ ಬಳಗದಲ್ಲಿ ಸ್ಥಾನ ಪಡೆಯಬಹುದಾಗಿದೆ. ಇನ್ನು ವಾಷಿಂಗ್ಟನ್ ಸುಂದರ್ ಬದಲಿಗೆ ಟೀಮ್ ಇಂಡಿಯಾ ಶಾರ್ದೂಲ್ ಅವರನ್ನು ಕಣಕ್ಕೆ ಇಳಿಸಿದರೂ ಅಚ್ಚರಿಯಿಲ್ಲ.

ಜಸ್ಪ್ರಿತ್ ಬುಮ್ರಾ, ಜೋಫ್ರಾ ಆರ್ಚರ್ ಆಗಮನ

ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಸ್ಟಾರ್‌ ಬೌಲರ್‌ ಜಸ್ಪ್ರಿತ್ ಬುಮ್ರಾ ಆಗಮನವಾಗಿದ್ದು, ಕನ್ನಡಿಗ ಪ್ರಸಿದ್ಧ ಕೃಷ್ಣ ಅವರಿಗೆ ಕೊಕ್ ನೀಡಲಾಗಿದೆ. 2ನೇ ಟೆಸ್ಟ್ ಪಂದ್ಯದಲ್ಲಿ ಮಿಂಚಿದ್ದ ಆಕಾಶ್ ದೀಪ್ ಅವರ ಮೇಲೆ ಈ ಪಂದ್ಯದಲ್ಲೂ ಹೆಚ್ಚಿನ ನಿರೀಕ್ಷೆಗಳಿವೆ. ಮೊಹಮ್ಮದ್‌ ಸಿರಾಜ್‌ ಸಹ ತಂಡದಲ್ಲಿದ್ದಾರೆ.

ಇಂಗ್ಲೆಂಡ್ ತಂಡದಲ್ಲಿ ಹೆಚ್ಚಿನ ಬದಲಾವಣೆಗಳನ್ನು ನಿರೀಕ್ಷಿಸಲಾಗಿಲ್ಲ. ಆದರೆ ಇಂಗ್ಲೆಂಡ್ ತಂಡದ ಬೌಲಿಂಗ್ ವಿಭಾಗವನ್ನು ಬಲಪಡಿಸಲು, ಅನುಭವಿ ಜೋಫ್ರಾ ಆರ್ಚರ್ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಆತಿಥೇಯ ತಂಡದ ಬೌಲಿಂಗ್ ವಿಭಾಗ ಮತ್ತುಷ್ಟು ಬಲಗೊಳ್ಳಲಿದೆ. ಇವರು ತಮ್ಮ ಕರಾರುವಾಕ್ ದಾಳಿಯಿಂದ ಎದುರಾಳಿಗಳನ್ನು ಕಾಡಬಲ್ಲರು. ಇನ್ನು ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಬೆನ್ನೆಲೆಬು ಜೋ ರೂಟ್ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿರಲಿದೆ.

ಪಂದ್ಯ ಆರಂಭ: ಮಧ್ಯಾಹ್ನ 3.30

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...