IND vs ENG ಟೆಸ್ಟ್ | ಬೆನ್‌ ಡಕೆಟ್‌ ಭರ್ಜರಿ ಶತಕ; ಕುತೂಹಲ ಘಟ್ಟದಲ್ಲಿ ಪಂದ್ಯ

Date:

ಲೀಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ನ ಐದನೇ ಹಾಗೂ ಅಂತಿಮ ದಿನವಾದ ಇಂದು ಟೀಂ ಇಂಡಿಯಾ ಆಂಗ್ಲ ಪಡೆಯನ್ನು ಸೋಲಿಸಲು 6 ವಿಕೆಟ್‌ಗಳನ್ನು ಕಬಳಿಸಬೇಕಿದೆ. ಆಂಗ್ಲರ ಪರ ಬೆನ್‌ ಡಕೆಟ್‌ ಭರ್ಜರಿ ಶತಕ ದಾಖಲಿಸಿ ಉತ್ತಮ ಹೋರಾಟ ನಡೆಸಿದರು.

- Advertisement -

ಭಾರತ ನೀಡಿರುವ 371 ರನ್‌ಗಳ ಗುರಿಯನ್ನು ಬೆನ್ನಟ್ಟಿರುವ ಇಂಗ್ಲೆಂಡ್‌ 2ನೇ ಇನಿಂಗ್ಸ್‌ನಲ್ಲಿ 58 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 269 ರನ್‌ ಪೇರಿಸಿದ್ದು, ದಿನದಾಂತ್ಯದ 37 ಓವರ್‌ಗಳಲ್ಲಿ ಗೆಲುವಿಗಾಗಿ 102 ರನ್‌ಗಳು ಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವಿಕೆಟ್‌ ನಷ್ಟವಿಲ್ಲದೆ 21 ರನ್‌ಗಳೊಂದಿಗೆ ಕೊನೆಯ ದಿನದಾಟವನ್ನು ಪ್ರಾರಂಭಿಸಿದ ಇಂಗ್ಲೆಂಡ್‌ ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ಬೆನ್‌ ಡೆಕೆಟ್‌ ಹಾಗೂ ಜ್ಯಾಕ್‌ ಕ್ರಾಲಿ ಮೊದಲ ವಿಕೆಟ್‌ ಜೊತೆಯಾಟದಲ್ಲಿ ಭರ್ಜರಿ 188 ರನ್‌ ಪೇರಿಸಿದರು.

ಆಕರ್ಷಕ 65 ರನ್‌ಗಳೊಂದಿಗೆ ಅರ್ಧ ಶತಕ ಗಳಿಸಿದ ಕ್ರಾಲಿ ಕನ್ನಡಿಗ ಪ್ರಸಿದ್ಧ ಕೃಷ್ಣ ಬೌಲಿಂಗ್‌ನಲ್ಲಿ ಔಟಾದರು. ಇವರ ಬೆನ್ಬಲ್ಲೇ ಓಲಿ ಪೋಪ್‌(8) ಅವರನ್ನು ಪ್ರಸಿದ್ಧ್‌ ಪೆವಿಲಿಯನ್‌ಗೆ ಕಳಿಸಿದರು.

ಭರ್ಜರಿ ಶತಕ ಗಳಿಸಿದ ಬೆನ್‌ ಡೆಕೆಟ್‌ ಶಾರ್ದೂಲ್‌ ಠಾಕೂರ್‌ ಬೌಲಿಂಗ್‌ನಲ್ಲಿ ಬದಲಿ ಆಟಗಾರ ನಿತೀಶ್‌ ಕುಮಾರ್‌ ರೆಡ್ಡಿ ಹಿಡಿದ ಅತ್ಯುತ್ತಮ ಕ್ಯಾಚ್‌ಗೆ ಔಟಾದರು. 170 ಚೆಂಡುಗಳಲ್ಲಿ ಡೆಕೆಟ್ 21 ಬೌಂಡರಿ ಹಾಗೂ 1 ಭರ್ಜರಿ ಸಿಕ್ಸರ್‌ಗಳೊಂದಿಗೆ 149 ರನ್‌ ಸಿಡಿಸಿದರು.

ಇದನ್ನು ಓದಿದ್ದೀರಾ? ಪ್ಯಾರಿಸ್ ಡೈಮಂಡ್ ಲೀಗ್‌ ಪ್ರಶಸ್ತಿಗೆ ಮುತ್ತಿಕ್ಕಿದ ಜಾವೆಲಿನ್ ತಾರೆ ನೀರಜ್ ಚೋಪ್ರಾ

ಇವರ ನಂತರ 5ನೇ ಕ್ರಮಾಂಕದಲ್ಲಿ ಆಗಮಿಸಿದ ಹ್ಯಾರಿ ಬ್ರೂಕ್‌ ಕೂಡ ಠಾಕೂರ್‌ ಬೌಲಿಂಗ್‌ನಲ್ಲಿ ಶೂನ್ಯ ಗಳಿಸಿ ಪೆವಿಲಿಯನ್‌ಗೆ ತೆರಳಿದರು. ಟೀ ವಿರಾಮದ ವೇಳೆಗೆ ನಾಯಕ ಬೆನ್‌ ಸ್ಟೋಕ್ಸ್‌(14) ಹಾಗೂ ಅನುಭವಿ ಜೋ ರೂಟ್‌ (13) ಆಡುತ್ತಿದ್ದಾರೆ

ಭಾರತದ ಕಳೆಪೆ ಕ್ಷೇತ್ರರಕ್ಷಣೆ

ಆಂಗ್ಲರ ಉತ್ತಮ ಆಟದಲ್ಲಿ ಭಾರತದ ಕಳಪೆ ಫೀಲ್ಡಿಂಗ್ ಕೂಡ ಕಾರಣವಾಗಿದೆ. ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 5 ಕ್ಯಾಚ್​ಗಳನ್ನು ಕೈಚೆಲ್ಲಿದ್ದ ಟೀಂ ಇಂಡಿಯಾ 2ನೇ ಇನಿಂಗ್ಸ್​ನಲ್ಲೂ ಅದೇ ಪ್ರವೃತ್ತಿಯನ್ನು ಮುಂದುವರೆಸಿದೆ. ಅದರಲ್ಲೂ ಮೊದಲ ಇನಿಂಗ್ಸ್​ನಲ್ಲಿ ಪ್ರಮುಖ 3 ಕ್ಯಾಚ್ ಬಿಟ್ಟಿದ್ದ ಜೈಸ್ವಾಲ್ 2ನೇ ಇನಿಂಗ್ಸ್​ನಲ್ಲೂ ಪಂದ್ಯದ ಗತ್ತಿಯನ್ನೇ ಬದಲಿಸಬಹುದಾಗಿದ್ದ ಕ್ಯಾಚ್ ಅನ್ನು ಕೈಚೆಲ್ಲಿದರು.

ಇಂಗ್ಲೆಂಡ್‌ ಆರಂಭಿಕ ಬೆನ್ ಡಕೆಟ್ 97ರನ್ ಬಾರಿಸಿ ಆಡುತ್ತಿದ್ದಾಗ ಮೊಹಮ್ಮದ್ ಸಿರಾಜ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಯತ್ನದಲ್ಲಿ ಬೌಂಡರಿ ಗೆರೆ ಬಳಿ ನಿಂತಿದ್ದ ಜೈಸ್ವಾಲ್​ಗೆ ಕ್ಯಾಚ್ ನೀಡಿದರು. ಆದರೆ ಜೈಸ್ವಾಲ್ ಮತ್ತೊಮ್ಮೆ ಕ್ಯಾಚ್ ತೆಗೆದುಕೊಳ್ಳುವಲ್ಲಿ ವಿಫಲರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...