IND vs NZ | 3-1 ಅಂತರದಲ್ಲಿ ಏಕದಿನ ಸರಣಿ ಗೆದ್ದ ಭಾರತ; ಕೊನೆಯ ಪಂದ್ಯದಲ್ಲಿ 22 ರನ್‌ಗಳ ರೋಚಕ ಜಯ!

Date:

ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯನ್ನು ಭಾರತ ತಂಡ 3–1 ಅಂತರದಲ್ಲಿ ಗೆದ್ದುಕೊಂಡಿದೆ. ಭಾನುವಾರ (ನ. 15) ನಡೆದ ಐದನೇ (ಅಂತಿಮ) ಏಕದಿನ ಪಂದ್ಯದಲ್ಲಿ 22 ರನ್‌ಗಳ ರೋಚಕ ಜಯ ಸಾಧಿಸಿದ ಭಾರತ, ಏಳು ವರ್ಷಗಳ ಬಳಿಕ ನ್ಯೂಜಿಲೆಂಡ್ ನೆಲದಲ್ಲಿ ಏಕದಿನ ಸರಣಿ ಗೆದ್ದ ಸಾಧನೆ ಮಾಡಿದೆ.

- Advertisement -

ಮೌಂಟ್ ಮೌಂಗನುಯಿಯ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ನ್ಯೂಜಿಲೆಂಡ್ ಬೌಲರ್‌ಗಳ ಶಿಸ್ತಿನ ದಾಳಿಗೆ ತತ್ತರಿಸಿ 42.1 ಓವರ್‌ಗಳಲ್ಲಿ 209 ರನ್‌ಗಳಿಗೆ ಆಲೌಟ್ ಆಯಿತು. ಆದರೆ, ಕಡಿಮೆ ಮೊತ್ತವನ್ನು ಸಮರ್ಥವಾಗಿ ರಕ್ಷಿಸಿಕೊಂಡ ಭಾರತೀಯ ಬೌಲರ್‌ಗಳು, ನ್ಯೂಜಿಲೆಂಡ್ ತಂಡವನ್ನು 48.1 ಓವರ್‌ಗಳಲ್ಲಿ 187 ರನ್‌ಗಳಿಗೆ ಆಲೌಟ್ ಮಾಡಿ 22 ರನ್‌ಗಳ ಅಂತರದಲ್ಲಿ ಗೆಲುವು ತಂದುಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

25ರ ಹರೆಯದಲ್ಲೇ ಬ್ರಿಟಿಷ್ ಸಾಮ್ರಾಜ್ಯಕ್ಕೆ ಸಿಂಹಸ್ವಪ್ನವಾದ ಆದಿವಾಸಿ ಕ್ರಾಂತಿಕಾರಿ...

ಕೇವಲ 25 ವರ್ಷಗಳ ಬದುಕಿನಲ್ಲಿ ಬ್ರಿಟಿಷ್ ಸಾಮ್ರಾಜ್ಯಶಾಹಿ ಆಡಳಿತಕ್ಕೆ ಸವಾಲು ಹಾಕಿ, ಸಾವಿರಾರು ಆದಿವಾಸಿಗಳನ್ನು ಸಂಘಟಿಸಿ, ಭೂಮಿಯ ಹಕ್ಕು ಮತ್ತು ಸ್ವಯಂ ಆಡಳಿತಕ್ಕಾಗಿ ಬೃಹತ್ ಚಳವಳಿಯನ್ನು ಕಟ್ಟಿದ ಬಿರ್ಸಾ ಮುಂಡಾ ಅವರು ಕೇವಲ...

ಪಂದ್ಯದಲ್ಲಿ ಟಾಸ್‌ ಸೋತು, ಮೊದಲಿಗೆ ಬ್ಯಾಟಿಂಗ್‌ ಮಾಡಿದ ಟೀಮ್‌ ಇಂಡಿಯಾ, ಆರಂಭದಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿತು. ಆರಂಭಿಕ ಆಟಗಾರ ರೋಹಿತ್ ಶರ್ಮಾ 7 ರನ್‌ಗಳಿಗೆ ಔಟಾದರೆ, ವಿರಾಟ್ ಕೊಹ್ಲಿ ಕೇವಲ 5 ರನ್ ಗಳಿಸಿದರು. ರುತುರಾಜ್ ಗಾಯಕ್ವಾಡ್ 18 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಇದರಿಂದ ಭಾರತ 34 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಈ ಹಂತದಲ್ಲಿ ನಾಯಕ ಶ್ರೇಯಸ್ ಅಯ್ಯರ್ ಮತ್ತು ಅಕ್ಷರ್ ಪಟೇಲ್ 52 ರನ್‌ಗಳ ಜೊತೆಯಾಟವಾಡಿ ತಂಡಕ್ಕೆ ಆಸರೆಯಾದರು. ಅಕ್ಷರ್ ಪಟೇಲ್ 55 ಎಸೆತಗಳಲ್ಲಿ 46 ರನ್ ಗಳಿಸಿದರೆ, ಇಶಾನ್ ಕಿಶನ್ 58 ಎಸೆತಗಳಲ್ಲಿ 46 ರನ್ ಬಾರಿಸಿದರು. ನಮನ್ ಧೀರ್ 22 ರನ್ ಗಳಿಸಿದರು.

ನ್ಯೂಜಿಲೆಂಡ್ ಪರ ಮಿಚೆಲ್ ಸ್ಯಾಂಟ್ನರ್ ಮತ್ತು ಜೇಕಬ್ ಡಫಿ ತಲಾ ಮೂರು ವಿಕೆಟ್ ಪಡೆದರೆ, ಮ್ಯಾಥ್ಯೂ ಫಿಶರ್ ಎರಡು ವಿಕೆಟ್ ಕಬಳಿಸಿದರು.

210 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ಆರಂಭದಲ್ಲಿ ಉತ್ತಮ ಸ್ಥಿತಿಯಲ್ಲಿತ್ತು. ತಂಡದ ಮೊತ್ತ 64 ರನ್‌ ಇದ್ದಾಗ ಒಂದು ವಿಕೆಟ್ ಕಳೆದುಕೊಂಡಿದ್ದ ನ್ಯೂಜಿಲೆಂಡ್‌ ತಂಡವು ಭಾರತದ ಬೌಲರ್‌ಗಳ ಸಂಘಟಿತ ದಾಳಿಯಿಂದ ಮತ್ತೆ ಸುಧಾರಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಒಂದಾದ ಮೇಲೊಂದರಂತೆ ವಿಕೆಟ್ ಕಳೆದುಕೊಂಡಿತು.

ಈಲೇಖನ ಓದಿದ್ದೀರಾ?: ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ ಹಿನ್ನೆಲೆಯೇನು? ಪ್ರಸ್ತುತ ಮಹತ್ವವೇನು?

ಡೀನ್ ಫಾಕ್ಸ್‌ಕ್ರಾಫ್ಟ್ 31 ರನ್ ಗಳಿಸಿದರೆ, ಮೈಕೆಲ್ ಬ್ರೇಸ್‌ವೆಲ್ 19 ರನ್ ಗಳಿಸಿದರು. ಆದರೆ, ಇವರ ಹೋರಾಟ ನ್ಯೂಜಿಲೆಂಡ್ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಕಾಗಲಿಲ್ಲ. ಅರ್ಷದೀಪ್ ಸಿಂಗ್ 30 ರನ್ ನೀಡಿ ಮೂರು ವಿಕೆಟ್ ಕಬಳಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಸರಣಿಯ ಮೊದಲ ಎರಡು ಪಂದ್ಯಗಳನ್ನು ಭಾರತ ಗೆದ್ದರೆ, ಮೂರನೇ ಪಂದ್ಯ ಮಳೆಯಿಂದ ರದ್ದಾಗಿತ್ತು. ನಾಲ್ಕನೇ ಪಂದ್ಯದಲ್ಲಿ ನ್ಯೂಜಿಲೆಂಡ್ 244 ರನ್‌ಗಳ ಭರ್ಜರಿ ಜಯ ಸಾಧಿಸಿತ್ತು. ಆದರೆ, ಅಂತಿಮ ಪಂದ್ಯದಲ್ಲಿ ಪುಟಿದೆದ್ದ ಭಾರತ, 22 ರನ್‌ಗಳ ಗೆಲುವಿನೊಂದಿಗೆ ಸರಣಿಯನ್ನು ತನ್ನದಾಗಿಸಿಕೊಂಡಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್‌ನಲ್ಲಿ 5,000ಕ್ಕೂ ಹೆಚ್ಚು ಕೃಷಿ ತ್ಯಾಜ್ಯ ಸುಡುವ ಪ್ರಕರಣ ದಾಖಲು: 1 ಕೋಟಿ ರೂ. ದಂಡ ವಿಧಿಸಿದ ಸರ್ಕಾರ

ದೆಹಲಿ ಮತ್ತು ಉತ್ತರ ಭಾರತದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದ ನಡುವೆಯೇ, ಪಂಜಾಬ್‌ನಲ್ಲಿ ಕೃಷಿ...

50% ಸಮಾನ ಹೆಚ್ಚಳ ಷರತ್ತು; ಕೇಂದ್ರದ ಕ್ಷೇತ್ರ ಮರುವಿಂಗಡಣೆ ಮಸೂದೆಗೆ ಸುಪ್ರಿಯಾ ಸುಳೆ ಬೆಂಬಲ

ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ಎಲ್ಲ ರಾಜ್ಯಗಳಲ್ಲೂ ಯಾವುದೇ ತಾರತಮ್ಯವಿಲ್ಲದೆ '50%ರಷ್ಟು ಸಮಾನ’ವಾಗಿ...

ಭಾರತದ ಪ್ರಜಾಪ್ರಭುತ್ವವು 2014ರಲ್ಲಿಯೇ ನಾಶವಾಗಿದೆ: ರಾಹುಲ್ ಗಾಂಧಿ

ಭಾರತದ ಪ್ರಜಾಪ್ರಭುತ್ವವು ಸಾರ್ವಜನಿಕರ ಆಸ್ತಿಯಾಗಿದೆ. ಆದರೆ, ಅದು 2014ರಲ್ಲಿಯೇ ನಾಶವಾಗಿದೆ ಎಂದು...

ವಿಜ್ಞಾನ ಜಗತ್ತಿನ ಅಮೂಲ್ಯ ವಿಜ್ಞಾನಿ- ಪ್ರೊ. ಅಮೂಲ್ಯ ಕುಮಾರ್ ರೆಡ್ಡಿ

ಭಾರತೀಯ ವಿಜ್ಞಾನದ ಆಸಕ್ತರಿಗೆ ಪರಿಚಯ ಇರಲೇಬೇಕಾದ ಹಾಗೂ ವಿಜ್ಞಾನವನ್ನು ಪ್ರಯೋಗಾಲಯದಿಂದ ಆಚೆ...