ಚಾಂಪಿಯನ್ಸ್‌ ಟ್ರೋಫಿಯಲ್ಲಿ ಇಂದು ಭಾರತ – ಪಾಕ್‌ ಪಂದ್ಯ: ಐಸಿಸಿ ಟೂರ್ನಿಯಲ್ಲಿ ಯಾರ ಕೈ ಮೇಲು, ದಾಖಲೆಗಳು ಏನು ಹೇಳುತ್ತವೆ?

Date:

ಭಾರತ ಮತ್ತು ಪಾಕಿಸ್ತಾನ ಪಂದ್ಯವೆಂದರೆ ಎರಡೂ ದೇಶಗಳ ಕ್ರಿಕೆಟ್‌ ಅಭಿಮಾನಿಗಳಿಗೆ ರಸದೌತಣ. ತಂಡಗಳು ಹಾಗೂ ಪಂದ್ಯದಲ್ಲಿ ಬಲಿಷ್ಠರ್ಯಾರು. ದುರ್ಬಲರ್ಯಾರು ಎಂಬ ಪ್ರಶ್ನೆ ಉದ್ಭವಿಸುವುದಿಲ್ಲ. ಕ್ರೀಡಾ ಪ್ರೇಮಿಗಳಂತೆ ಎರಡೂ ತಂಡಗಳ ಆಟಗಾರರು ಕೂಡ ಉತ್ಸಾಹದಲ್ಲಿರುತ್ತಾರೆ. ಐಸಿಸಿ ಟ್ರೋಫಿಗಳಲ್ಲಿ ಹುಮ್ಮಸ್ಸಿಗೆ ಬರವೇ ಇರುವುದಿಲ್ಲ. ಇಂದು ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ.

- Advertisement -

ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್​ಗೇರುವುದು ಬಹುತೇಕ ಖಚಿತವಾಗಲಿದೆ. ಪಾಕಿಸ್ತಾನ ತಂಡ ಸೋತರೆ ಟೂರ್ನಿಯಿಂದಲೇ ಹೊರಬೀಳಲಿದೆ. 29 ವರ್ಷಗಳ ಬಳಿಕ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ವಹಿಸಿರುವ ಪಾಕಿಸ್ತಾನ ತಂಡಕ್ಕೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಐಸಿಸಿ ಏಕದಿನ ವಿಶ್ವಕಪ್‌ನ ವಿಚಾರಕ್ಕೆ ಬಂದಾಗ ಎರಡು ತಂಡಗಳಲ್ಲಿ ಭಾರತದ್ದೇ ಪಾರಮ್ಯ. ಈವರೆಗೆ ನಡೆದಿರುವ 8 ಪಂದ್ಯಗಳಲ್ಲಿ ಏಂಟರಲ್ಲೂ ಭಾರತವೇ ವಿಜಯಶಾಲಿಯಾಗಿದೆ. ಒಂದು ಬಾರಿಯೂ ಪಾಕ್‌ಗೆ ಗೆಲುವಿನ ನಗು ಬೀರಲು ಸಾಧ್ಯವಾಗಿಲ್ಲ.

ಆದರೆ ಮಿನಿ ವಿಶ್ವಕಪ್‌ ಖ್ಯಾತಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್‌ ಮೇಲುಗೈ ಸಾಧಿಸಿದೆ. ಇಲ್ಲಿಯವರೆಗೂ ಭಾರತ ಮತ್ತು ಪಾಕಿಸ್ತಾನ ತಂಡಗಳು 5 ಬಾರಿ ಮುಖಾಮುಖಿಯಾಗಿವೆ. ಅದರಲ್ಲಿ ಭಾರತ ತಂಡ 2 ಬಾರಿ ಗೆದ್ದಿದ್ದರೆ, 3 ಬಾರಿ ಪಾಕಿಸ್ತಾನದ್ದೇ ಜಯಗಳಿಸಿದೆ. ಅದರಲ್ಲೂ ಒಂದು ಬಾರಿ ಫೈನಲ್‌ನಲ್ಲೇ ಭಾರತವನ್ನು ಪಾಕ್‌ ತಂಡ ಸೋಲಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.

ಒಟ್ಟಾರೆ ಇಲ್ಲಿಯವರೆಗೂ ಎರಡೂ ತಂಡಗಳು ಆಡಿರುವ 135 ಪಂದ್ಯಗಳಲ್ಲಿ ಟೀಮ್ ಇಂಡಿಯಾ ಕೇವಲ 57 ಪಂದ್ಯಗಳಲ್ಲಿ ಮಾತ್ರ ಗೆದ್ದರೆ, ಪಾಕಿಸ್ತಾನ 73 ಪಂದ್ಯಗಳಲ್ಲಿ ಭಾರತಕ್ಕೆ ಸೋಲಿನ ರುಚಿ ತೋರಿಸಿದೆ. ಇನ್ನು ಐದು ಪಂದ್ಯಗಳು ಫಲಿತಾಂಶ ರಹಿತವಾಗಿತ್ತು.

ಈ ಸುದ್ದಿ ಓದಿದ್ದೀರಾ? ಐಸಿಸಿ ಚಾಂಪಿಯನ್ಸ್ ಟ್ರೋಫಿ | 8 ತಂಡಗಳು, 15 ಪಂದ್ಯಗಳು: ವಿವರ ಇಲ್ಲಿದೆ ನೋಡಿ

ಇನ್ನು ಭಾರತ ಮತ್ತು ಪಾಕಿಸ್ತಾನ ನಡುವಣ ಕೊನೆಯ ಐದು ಏಕದಿನ ಪಂದ್ಯಗಳ ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡರೆ ಟೀಮ್ ಇಂಡಿಯಾವೇ ಬಲಿಷ್ಠ. ಏಕೆಂದರೆ 2018 ರಿಂದ ಭಾರತದ ವಿರುದ್ಧ ಪಾಕಿಸ್ತಾನ ತಂಡವು ಒಂದೇ ಒಂದು ಏಕದಿನ ಪಂದ್ಯ ಗೆದ್ದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡವೇ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ.

ಪಂದ್ಯವಾಡುವ ಉಭಯ ತಂಡಗಳು:
ಭಾರತ:
ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ನಾಯಕ), ಬಾಬರ್ ಆಜಂ, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹಿನ್ ಶಾ ಅಫ್ರಿದಿ, ಇಮಾಮ್ ಉಲ್ ಹಕ್.

ಪಂದ್ಯ ಆರಂಭವಾಗುವ ಸಮಯ: ಮಧ್ಯಾಹ್ನ 2.30

ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್​ ಆ್ಯಪ್​ ಹಾಗೂ ವೈಬ್​ಸೈಟ್​ಗಳಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...