IND vs SA 1st TEST | ಸೆಹ್ವಾಗ್ ದಾಖಲೆ ಸರಿಗಟ್ಟಿದ ಪಂತ್‌; ಭಾರತದ 4 ವಿಕೆಟ್ ಪತನ

Date:

ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್‌ನ ಎರಡನೇ ದಿನವಾದ ಇಂದು ಭಾರತ ಮೊದಲ ಇನಿಂಗ್ಸ್‌ನಲ್ಲಿ ಭೋಜನ ವಿರಾಮದ ವೇಳೆಗೆ 45 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 138 ರನ್‌ ಗಳಿಸಿದ್ದು, ಇನಿಂಗ್ಸ್‌ ಮುನ್ನಡೆಗೆ 21 ರನ್‌ ಬೇಕಾಗಿದೆ.

- Advertisement -

ಈ ಟೆಸ್ಟ್‌ನಲ್ಲಿ ಸ್ಪೋಟಕ ಆಟಗಾರ ರಿಷಭ್ ಪಂತ್ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತೀಯರ ಪರವಾಗಿ ಅತೀ ಹೆಚ್ಚು ಸಿಕ್ಸರ್‌ಗಳ ದಾಖಲೆಗಳನ್ನು ಹೊಂದಿದ್ದ ಟೀಂ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಸರಿಗಟ್ಟಿದ್ದರೆ. ಸೆಹ್ವಾಗ್ 91 ಸಿಕ್ಸರ್ ದಾಖಲೆಯನ್ನು ಹೊಂದಿದ್ದರು. ಪಂತ್ 2 ಸಿಕ್ಸರ್‌ ಬಾರಿಸುವ ಮೂಲಕ 92 ಸಿಕ್ಸರ್‌ನೊಂದಿಗೆ ದಾಖಲೆಯನ್ನು ತಮ್ಮದಾಗಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಾಬರ್ ಅಜಂ

ಟೀಂ ಇಂಡಿಯಾ 4 ವಿಕೆಟ್‌ ಕಳೆದುಕೊಂಡಿದ್ದು, ಜಡೇಜಾ (11) ಮತ್ತು ವಿಕೆಟ್‌ಕೀಪರ್ ಧ್ರುವ್ ಜುರೆಲ್ (5) ಕ್ರೀಸ್‌ನಲ್ಲಿ ಉಳಿದುಕೊಂಡಿದ್ದಾರೆ. ಕೆ ಎಲ್‌ ರಾಹುಲ್‌ (39),ವಾಷಿಂಗ್ಟನ್‌ ಸುಂದರ್ (29),ರಿಷಬ್‌ ಪಂತ್‌ (27) ರನ್‌ ಗಳಿಸಿ ಔಟಾದರು. ನಾಲ್ಕು ರನ್‌ ಗಳಿಸಿದ್ದ ನಾಯಕ ಶುಭಮನ್ ಗಿಲ್ ಗಾಯಗೊಂಡು ನಿವೃತ್ತಿ ಹೊಂದಿದರು.

ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್‌ನಲ್ಲಿ ಜಸ್ಪ್ರೀತ್ ಬೂಮ್ರಾ (5/27) ಮತ್ತು ಮೊಹಮ್ಮದ್ ಸಿರಾಜ್ (2/47) ಅವರ ಮಾರಕ ಬೌಲಿಂಗ್ ದಾಳಿಯಿಂದ 55 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್ ಆಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...