IND vs SA 2nd Test | ಮೊದಲ ದಿನ ದಕ್ಷಿಣ ಆಫ್ರಿಕಾ 247/6; ಕುಲ್‌ದೀಪ್‌ಗೆ 3 ವಿಕೆಟ್

Date:

ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್‌ನ ಮೊದಲ ದಿನದಲ್ಲಿ ಸಮಾಧಾನಕರ ಬ್ಯಾಟಿಂಗ್ ಪ್ರದರ್ಶಿಸಿತು. 81.5 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 247 ರನ್‌ಗಳು ಪೇರಿಸಿ ದಿನದ ಆಟವನ್ನು ಮುಗಿಸಿತು. ಆರಂಭದಲ್ಲಿ ಉತ್ತಮ ಆಟವಾಡಿದರೂ, ನಂತರದಲ್ಲಿ ಭಾರತೀಯ ಸ್ಪಿನ್ನರ್‌ಗಳು ಹರಿಣಗಳ ಬ್ಯಾಟರ್‌ಗಳಿಗೆ ಒತ್ತಡ ನೀಡಿದರು.

- Advertisement -

ಗುವಾಹಟಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡುವುದಾಗಿ ತೀರ್ಮಾನಿಸಿತು. ಪಿಚ್ ಬ್ಯಾಟಿಂಗ್‌ಗೆ ಸಹಾಯವಾಗುವುದನ್ನು ಗಮನಿಸಿದ ಅವರು, ಮೊದಲ ದಿನ ಹೆಚ್ಚು ರನ್‌ಗಳನ್ನು ಸೇರಿಸುವ ಉದ್ದೇಶದಿಂದ ಇನಿಂಗ್ಸ್ ಆರಂಭಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಮಾರ್ಕ್ರಮ್ 38 ರನ್ ಗಳಿಸಿ ಉತ್ತಮ ಆರಂಭ ನೀಡಿದರು. ನಂತರ ರಿಕ್ಕೆಲ್ಟನ್ 35 ಮತ್ತು ನಾಯಕ ತೆಂಬು ಬವುಮಾ 41 ರನ್ ಬಾರಿಸಿದರೆ, ಟ್ರಿಸ್ಟನ್ ಸ್ಟಬ್ಸ್ 49 ರನ್‌ ಗಳಿಸಿ ಕುಲ್‌ದೀಪ್‌ ಯಾದವ್‌ಗೆ ವಿಕೆಟ್‌ ನೀಡಿದರು. ಡಿ ಝೋರ್ಝಿ 28 ರನ್‌ ಗಳಿಸಿ ಔಟಾದರೆ, ದಿನದಾಂತ್ಯಕ್ಕೆ ಮುತ್ತುಸ್ವಾಮಿ 25 ರನ್‌ನೊಂದಿಗೆ ಕ್ರೀಸ್‌ನಲ್ಲಿ ಉಳಿದಿದ್ದಾರೆ.

ಇದನ್ನು ಓದಿದ್ದೀರಾ? U19 ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ: ತಂಡಗಳು 16, ಭಾರತಕ್ಕೆ ಮೂರು ಎದುರಾಳಿಗಳು

ಭಾರತದ ಬೌಲಿಂಗ್‌ನಲ್ಲಿ ಸ್ಪಿನ್ನರ್‌ಗಳು ಹೆಚ್ಚು ಪರಿಣಾಮಕಾರಿಯಾಗಿದ್ದರು. ಕುಲದೀಪ್ ಯಾದವ್ 3 ವಿಕೆಟ್‌ಗಳನ್ನು ಪಡೆದು ದಕ್ಷಿಣ ಆಫ್ರಿಕಾದ ಮಧ್ಯ ಕ್ರಮಾಂಕಕ್ಕೆ ಪೆಟ್ಟು ನಿಡಿದರು. ಬುಮ್ರಾ, ಸಿರಾಜ್ ಮತ್ತು ಜಡೇಜಾ ತಲಾ ಒಂದು ವಿಕೆಟ್‌ ಪಡೆದು ದಕ್ಷಿಣ ಆಫ್ರಿಕಾ ತಂಡದ ರನ್‌ ವೇಗವನ್ನು ನಿಯಂತ್ರಣದಲ್ಲಿಟ್ಟರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿನ್ ಐತಿಹಾಸಿಕ ದಾಖಲೆ ಮುರಿದ ಜಿಂಬಾಬ್ವೆಯ ಬ್ರೆಂಡನ್ ಟೇಲರ್

ಜಿಂಬಾಬ್ವೆ ರಾಷ್ಟ್ರೀಯ ಕ್ರಿಕೆಟ್ ತಂಡದ ಅತ್ಯಂತ ಹಿರಿಯ ವಿಕೆಟ್ ಕೀಪರ್ ಹಾಗೂ...

​’ಇಮ್ರಾನ್ ಜೈಲಿನಲ್ಲೇ ಕೊನೆಯುಸಿರೆಳೆಯಬಹುದು’: ಆಸ್ಟ್ರೇಲಿಯಾದ 7 ಮಾಜಿ ನಾಯಕರ ತೀವ್ರ ಆತಂಕ

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್...

ವಿಶ್ವ ಚಾಂಪಿಯನ್ ಶಿಪ್ ಟ್ರಯಲ್ಸ್ ಸ್ಪರ್ಧೆಗೆ ವಿನೇಶ್ ಪೋಗಟ್’ಗೆ ದೆಹಲಿ ಹೈಕೋರ್ಟ್ ನಕಾರ

ದೆಹಲಿಯಲ್ಲಿ ನಡೆಯಲಿರುವ ಮುಂಬರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನ ಆಯ್ಕೆ ಟ್ರಯಲ್ಸ್‌ನಲ್ಲಿ (Trials)...

ದುಲೀಪ್ ಟ್ರೋಫಿ ಫೈನಲ್: 13 ವರ್ಷಗಳ ನಂತರ ಚಾಂಪಿಯನ್ ಪಟ್ಟ ಅಲಂಕರಿಸಿದ ಪೂರ್ವ ವಲಯ

ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾದ 'ದುಲೀಪ್ ಟ್ರೋಫಿ 2026'ರ ಫೈನಲ್...