IND vs SA 2nd test | ಟಾಸ್‌ ಗೆದ್ದ ದಕ್ಷಿಣ ಆಫ್ರಿಕಾ; ಭಾರತದಲ್ಲಿ 300ನೇ ಟೆಸ್ಟ್

Date:

ಟೀಮ್ ಇಂಡಿಯಾದ ನಾಯಕ ಶುಭಮನ್‌ ಗಿಲ್‌ ಗಾಯಕ್ಕೆ ತುತ್ತಾಗಿರುವುದರಿಂದ ರಿಷಭ್ ಪಂತ್ ಎರಡನೇ ಟೆಸ್ಟ್‌ ಪಂದ್ಯದಲ್ಲಿ ತಂಡವನ್ನು ಮುನ್ನಡೆಸುತ್ತಿದ್ದು, ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

- Advertisement -


ಇತ್ತೀಚಿನ ವರದಿಗಳಂತೆ ದಕ್ಷಿಣ ಆಫ್ರಿಕಾ 26.5 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 82 ರನ್‌ ಗಳಿಸಿದೆ. ಐಡೆನ್ ಮಾರ್ಕ್ರಾಮ್ 38 ರನ್‌ ಗಳಿಸಿ ಬುಮ್ರಾ ಬೌಲಿಂಗ್‌ನಲ್ಲಿ ಔಟಾದರು. ರಿಯಾನ್ ರಿಕೆಲ್ಟನ್ 35 ರನ್‌ ಗಳಿಸಿ ಆಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎರಡನೇ ಟೆಸ್ಟ್‌ ಪಂದ್ಯಕ್ಕಾಗಿ ದಕ್ಷಿಣ ಆಫ್ರಿಕಾ ತಂಡ ಒಂದು ಬದಲಾವಣೆಯೊಂದಿಗೆ ಕಣಕ್ಕೆ ಇಳಿದಿದೆ. ಈ ಪಂದ್ಯಕ್ಕಾಗಿ ದಕ್ಷಿಣ ಆಫ್ರಿಕಾ ಕಾರ್ಬಿನ್ ಬಾಷ್ ಅವರಿಗೆ ಕೈ ಬಿಟ್ಟಿದ್ದು, ಇವರ ಬದಲಿಗೆ ಸೆನುರನ್ ಮುತ್ತುಸಾಮಿ ಅವರಿಗೆ ಅವಕಾಶ ನೀಡಲಾಗಿದೆ. ಇನ್ನು ಈ ಪಂದ್ಯ ದಕ್ಷಿಣ ಆಫ್ರಿಕಾದ ಸ್ಟಾರ್ ಆಟಗಾರ ಎಡೆನ್ ಮಾರ್ಕ್ರಾಮ್ ಅವರಿಗೆ ಸ್ಮರಣೀಯ ಪಂದ್ಯವಾಗಿರಲಿದೆ. ಈ ಪಂದ್ಯ ಮಾರ್ಕ್ರಾಮ್ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಜೀವನದ 50ನೇ ಪಂದ್ಯವಾಗಿರಲಿದೆ.

ಗುವಾಹಟಿಯಲ್ಲಿ ಇದೇ ಮೊದಲ ಬಾರಿಗೆ ಟೆಸ್ಟ್‌ ಪಂದ್ಯವನ್ನು ಆಡಲಾಗುತ್ತಿದೆ. ಈ ಟೆಸ್ಟ್‌ ಪಂದ್ಯ ಟೀಮ್ ಇಂಡಿಯಾ ಪಾಲಿಗೆ ಮಹತ್ವದಾಗಿದೆ. ಈ ಪಂದ್ಯದ ಮೂಲಕ ಭಾರತ 300ನೇ ಟೆಸ್ಟ್‌ವನ್ನು ಆಯೋಜಿಸಿದ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ.

ಇದನ್ನು ಓದಿದ್ದೀರಾ? ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್‌ಗೆ ಶುಭ್‌ಮನ್‌ ಗಿಲ್‌ ಅಲಭ್ಯ; ಮುಂಬೈನಲ್ಲಿ ವೈದ್ಯರ ಭೇಟಿ

ಇದಕ್ಕೂ ಮೊದಲು ಈ ಸಾಧನೆಯನ್ನು ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ತಂಡಗಳು ಮಾಡಿದ್ದವು. ಈಗ ಈ ಸಾಧನೆಯನ್ನು ಮಾಡಿದ ವಿಶ್ವದ ಮೂರನೇ ರಾಷ್ಟ್ರ ಎಂಬ ಕೀರ್ತಿ ಭಾರತ ತಂಡದ್ದಾಗಲಿದೆ. ಈ ಸ್ಮರಣೀಯ ಪಂದ್ಯದಲ್ಲಿ ರಿಷಭ್‌ ಪಂತ್ ಪಡೆ ಸೊಗಸಾದ ಪ್ರದರ್ಶನ ನೀಡಿ ಅಬ್ಬರಿಸಲು ಪ್ಲ್ಯಾನ್ ಮಾಡಿಕೊಂಡಿದೆ.

ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಬಿ ಸಾಯಿ ಸುದರ್ಶನ್, ಧ್ರುವ್ ಜುರೇಲ್, ರಿಷಭ್ ಪಂತ್ (ನಾಯಕ, ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ದಕ್ಷಿಣ ಆಫ್ರಿಕಾ: ಐಡೆನ್ ಮಾರ್ಕ್ರಾಮ್, ರಿಯಾನ್ ರಿಕೆಲ್ಟನ್, ವಿಯಾನ್ ಮುಲ್ಡರ್, ಟೋನಿ ಡಿ ಜೋರ್ಜಿ, ತೆಂಬಾ ಬವುಮಾ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಕೈಲ್ ವೆರ್ರೆಯಿನ್ನೆ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಸೆನುರನ್ ಮುತ್ತುಸಾಮಿ, ಸೈಮನ್ ಹಾರ್ಮರ್, ಕೇಶವ್ ಮಹಾರಾಜ್.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುಲೀಪ್ ಟ್ರೋಫಿ ಫೈನಲ್: 13 ವರ್ಷಗಳ ನಂತರ ಚಾಂಪಿಯನ್ ಪಟ್ಟ ಅಲಂಕರಿಸಿದ ಪೂರ್ವ ವಲಯ

ದೇಶೀಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿಗಳಲ್ಲಿ ಒಂದಾದ 'ದುಲೀಪ್ ಟ್ರೋಫಿ 2026'ರ ಫೈನಲ್...

ಮಹಿಳಾ ಟಿ20 ಇತಿಹಾಸದಲ್ಲೇ ಮೊದಲು: ಏಷ್ಯಾಕಪ್‌ನಲ್ಲಿ ಲಂಕಾ, ಪಾಕ್ ಸ್ಪಿನ್ನರ್‌ಗಳ ವಿಕ್ರಮ

ಮಹಿಳಾ ಟಿ20 ಏಷ್ಯಾಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟರ್‌ಗಳಿಗಿಂತ ಸ್ಪಿನ್ ಬೌಲರ್‌ಗಳು ಸಂಪೂರ್ಣ...

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...