IND – SA Test | ಭಾರತಕ್ಕೆ 408 ರನ್‌ಗಳ ಹೀನಾಯ ಸೋಲು; ದಕ್ಷಿಣ ಆಫ್ರಿಕಾಕ್ಕೆ 2-0 ಸರಣಿ ಗೆಲುವು

Date:

ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ 408 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ದಕ್ಷಿಣ ಆಫ್ರಿಕಾ ಐತಿಹಾಸಿಕ 2-0 ಸರಣಿ ಗೆಲುವನ್ನು ದಾಖಲಿಸಿದೆ. ಈ ಸೋಲಿನೊಂದಿಗೆ ತವರಿನಲ್ಲಿ ಭಾರತದ ಹೀನಾಯ ಪ್ರದರ್ಶನವಾಗಿದೆ.

- Advertisement -

ಅಸ್ಸಾಂನ ಗುವಾಹಟಿಯಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನೀಡಿದ 549 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಎರಡನೇ ಇನಿಂಗ್ಸ್‌ನಲ್ಲಿ 140 ರನ್‌ಗಳಿಗೆ ಆಲೌಟ್‌ ಆಯಿತು. ದಕ್ಷಿಣ ಆಫ್ರಿಕಾದ ಸ್ಪಿನ್ನರ್ ಸೈಮನ್ ಹಾರ್ಮರ್ 6/37 ವಿಕೆಟ್‌ ಪಡೆದು ಜಯದ ರೂವಾರಿಯಾದರು.ಅಲ್ಲದೆ, ಕೇಶವ್ ಮಹಾರಾಜ್ 2, ಮುತ್ತು ಸ್ವಾಮಿ, ಜಾನ್ಸೆನ್‌ ತಲಾ ಒಂದೊಂದು ವಿಕೆಟ್ ಕಿತ್ತರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೊದಲ ಇನಿಂಗ್ಸ್‌ನಲ್ಲಿ 489 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು, ಆದರೆ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ ಕೇವಲ 201 ರನ್‌ಗಳಿಗೆ ಆಲೌಟ್ ಆಯಿತು. ದಕ್ಷಿಣ ಆಫ್ರಿಕಾ ಎರಡನೇ ಇನಿಂಗ್ಸ್‌ನಲ್ಲಿ 260/5 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡು ಭಾರತಕ್ಕೆ 549 ರನ್‌ಗಳ ಗುರಿ ನೀಡಿತು. ಆದರೆ ಭಾರತ ಎರಡನೇ ಇನಿಂಗ್ಸ್‌ನಲ್ಲಿ ಕೇವಲ 140 ರನ್‌ಗಳಿಗೆ ಆಲೌಟ್ ಆಗಿ ಪಂದ್ಯವನ್ನು ಕಳೆದುಕೊಂಡಿತು.

ಇದನ್ನು ಓದಿದ್ದೀರಾ? ದೀಪಿಕಾ ಟಿ ಸಿ | ಅಂಧತ್ವದ ಗೆರೆಗಳನ್ನು ಮೀರಿ ಕ್ರಿಕೆಟ್‌ನಲ್ಲಿ ಬೆಳಗುತ್ತಿರುವ ನಕ್ಷತ್ರ

ಭಾರತದ ಪರ ಏಕಾಂಗಿ ಹೋರಾಟ ನಡೆಸಿದ ಬ್ಯಾಟರ್‌ಗಳಲ್ಲಿ ರವೀಂದ್ರ ಜಡೇಜಾ (54 ರನ್) ಬಿಟ್ಟರೆ ಉಳಿದವರು ಹೆಚ್ಚು ರನ್ ಗಳಿಸಲು ವಿಫಲರಾದರು.

ದಕ್ಷಿಣ ಆಫ್ರಿಕಾದ ಮೊದಲ ಇನಿಂಗ್ಸ್‌ನಲ್ಲಿ ಸೆನುರಾನ್ ಮುತ್ತುಸ್ವಾಮಿ 109 ರನ್ ಮತ್ತು ಮಾರ್ಕೋ ಜಾನ್ಸೆನ್ 93 ರನ್ ಗಳಿಸಿ ತಂಡಕ್ಕೆ ಬಲವಾದ ಅಡಿಪಾಯ ಹಾಕಿದರು. ಭಾರತದ ಮೊದಲ ಇನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ 58 ಮತ್ತು ವಾಷಿಂಗ್ಟನ್ ಸುಂದರ್ 48 ರನ್ ಗಳಿಸಿದರೂ, ಮಾರ್ಕೋ ಜಾನ್ಸೆನ್ 6 ವಿಕೆಟ್ ಕಬಳಿಸಿ ಭಾರತವನ್ನು ಸಂಕಷ್ಟಕ್ಕೆ ದೂಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...