ಮಳೆಯಿಂದ ಡ್ರಾನಲ್ಲಿ ಅಂತ್ಯವಾದ ಎರಡನೇ ಟೆಸ್ಟ್; ಭಾರತಕ್ಕೆ ಸರಣಿ ಜಯ

Date:

ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಅಂತಿಮ ದಿನ ದಿನವಿಡೀ ಮಳೆ ಸುರಿದ ಕಾರಣ ರೋಹಿತ್‌ ಶರ್ಮಾ ನೇತೃತ್ವದ ಭಾರತದ ತಂಡ 2-0 ಅಂತರದಲ್ಲಿ ಸರಣಿಯನ್ನು ಕ್ಲೀನ್‌ಸ್ವೀಪ್‌ ಮಾಡುವ ಆಸೆ ಕೈಗೂಡಲಿಲ್ಲ.

- Advertisement -

ಐದನೇ ದಿನದ ಆಟದಲ್ಲಿ ಚಹ ವಿರಾಮದವರೆಗೂ ಮಳೆ ನಿಲ್ಲದ ಕಾರಣ ದಿನದಾಟವನ್ನು ರದ್ದುಗೊಳಿಸಲಾಯಿತು. ಈ ಮೂಲಕ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಅಭಿಯಾನದ ಮೊದಲ ಸರಣಿಯಲ್ಲಿ ಶುಭಾರಂಭ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕ್ವೀನ್ಸ್‌ ಪಾರ್ಕ್‌ನ ಓವಲ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ ಗೆಲುವಿಗೆ ಭಾರತ 365 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ವೆಸ್ಟ್ ಇಂಡೀಸ್ ನಾಲ್ಕನೇ ದಿನದಾಟದ ಅಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿತ್ತು. ಐದನೇ ದಿನದಲ್ಲಿ ವಿಂಡೀಸ್‌ ಗೆಲುವಿಗೆ 289 ರನ್‌ಗಳ ಅಗತ್ಯವಿತ್ತು. ಭಾರತ ಜಯಗಳಿಸಲು 8 ವಿಕೆಟ್‌ಗಳನ್ನು ಉರುಳಿಸಬೇಕಿತ್ತು. ಆದರೆ ಮಳೆಯಿಂದ ಇದ್ಯಾವುದು ಫಲಿಸಲಿಲ್ಲ.

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ವಿರಾಟ್‌ ಕೊಹ್ಲಿ ಶತಕದ ನೆರವಿನಿಂದ 438 ರನ್ ಪೇರಿಸಿತ್ತು. ಇದಕ್ಕೆ ಉತ್ತರವಾಗಿ ವೆಸ್ಟ್ ಇಂಡೀಸ್ ಮೊದಲ ಇನಿಂಗ್ಸ್‌ನಲ್ಲಿ 255 ರನ್‌ಗಳಿಗೆ ಆಲೌಟ್‌ ಆದಕಾರಣ ಟೀಂ ಇಂಡಿಯಾ 183 ರನ್‌ಗಳ ಮುನ್ನಡೆ ಪಡೆದಿತ್ತು. ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ ಎರಡು ವಿಕೆಟ್‌ಗೆ 181 ರನ್‌ ಗಳಿಸುವ ಮೂಲಕ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಒಟ್ಟು 364 ರನ್‌ಗಳ ಗುರಿ ಬೆನ್ನಟ್ಟಿದ ಕಾರ್ಲೋಸ್ ಬ್ರಾತ್‌ವೈಟ್ ಪಡೆ ನಾಲ್ಕನೇ ದಿನದ ಅಂತ್ಯಕ್ಕೆ ಎರಡು ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿತ್ತು.

ಈ ಸುದ್ದಿ ಓದಿದ್ದೀರಾ? ವಿಂಡೀಸ್‌ ವಿರುದ್ಧ ದ್ವಿತೀಯ ಟೆಸ್ಟ್‌: ಕೊಹ್ಲಿಗೆ 500ನೇ ಪಂದ್ಯ, ಭಾರತಕ್ಕೆ ನೂರನೇ ಟೆಸ್ಟ್

ಐದು ವಿಕೆಟ್ ಕಬಳಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿಕ್ಕೆ ಭಾಜನರಾದರು. ಇದಕ್ಕೂ ಮೊದಲು ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ಇನ್ನಿಂಗ್ಸ್ ಹಾಗೂ 141 ರನ್‌ಗಳ ಜಯ ಸಾಧಿಸಿತ್ತು. ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ 2023-25 ಅಂಕಪಟ್ಟಿಯಲ್ಲಿ ಭಾರತ 16 ಅಂಕದೊಂದಿಗೆ ಎರಡನೇ ಸ್ಥಾನದಲ್ಲಿದೆ.

ವೆಸ್ಟ್ ಇಂಡೀಸ್ 4 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಪಾಕಿಸ್ತಾನ ಒಂದು ಪಂದ್ಯವಾಡಿ 12 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಆಸ್ಟ್ರೇಲಿಯಾ, ಇಂಗ್ಲೆಂಡ್ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ.

ಭಾರತ ಮತ್ತು ವೆಸ್ಟ್ ಇಂಡೀಸ್ ಮೂರು ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 27ರಿಂದ ಶುರುವಾಗಲಿದೆ. ನಂತರ ಐದು ಪಂದ್ಯಗಳ ಟಿ20 ಸರಣಿ ಆಗಸ್ಟ್ 03 ರಿಂದ ಆರಂಭಗೊಳ್ಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...