ಆಸ್ಟ್ರೇಲಿಯಾ ನೆಲದಲ್ಲಿ ಭಾರತೀಯ ವನಿತೆಯರ ಐತಿಹಾಸಿಕ ಸಾಧನೆ: 10 ವರ್ಷಗಳ ಬಳಿಕ ಟಿ20 ಸರಣಿ ಕೈವಶ

Date:

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು ಆಸ್ಟ್ರೇಲಿಯಾ ಪ್ರವಾಸದಲ್ಲಿ ಅದ್ಭುತ ಸಾಧನೆ ಮಾಡಿದ್ದು, ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯನ್ನು 2-1 ಅಂತರದಿಂದ ಮುಡಿಗೇರಿಸಿಕೊಂಡಿದೆ.

- Advertisement -

​ಸರಣಿ ನಿರ್ಣಾಯಕ ಮೂರನೇ ಪಂದ್ಯದಲ್ಲಿ ಉಪನಾಯಕಿ ಸ್ಮೃತಿ ಮಂಧಾನ ಅವರ ಸ್ಫೋಟಕ ಬ್ಯಾಟಿಂಗ್ ಹಾಗೂ ಕನ್ನಡತಿ ಶ್ರೇಯಾಂಕ ಪಾಟೀಲ್ ಅವರ ಸ್ಪಿನ್ ಮೋಡಿಯ ನೆರವಿನಿಂದ ಭಾರತ 17 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 176 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿದರೆ, ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 159 ರನ್‌ಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗಿಳಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಯಿತು. ಸ್ಪೋಟಕ ಆಟಗಾರ್ತಿ ಶಫಾಲಿ ವರ್ಮಾ ಮೂರನೇ ಓವರ್‌ನಲ್ಲೇ ವಿಕೆಟ್ ಒಪ್ಪಿಸಿದರು. ಆದರೆ ಆ ಬಳಿಕ ಜೊತೆಯಾದ ಉಪನಾಯಕಿ ಸ್ಮೃತಿ ಮಂಧಾನ ಹಾಗೂ ಜೆಮಿಮಾ ರೊಡ್ರಿಗಸ್ ಆಸ್ಟ್ರೇಲಿಯಾ ಬೌಲರ್‌ಗಳನ್ನು ದಿಟ್ಟವಾಗಿ ಎದುರಿಸಿದರು.

ಸ್ಮೃತಿ ಮಂಧಾನ ಕೇವಲ 55 ಎಸೆತಗಳಲ್ಲಿ 82 ರನ್ ಸಿಡಿಸುವ ಮೂಲಕ ಕಾಂಗರೂ ನೆಲದಲ್ಲಿ ತಮ್ಮ ಶ್ರೇಷ್ಠ ಇನಿಂಗ್ಸ್ ಆಡಿದರು. ಜೆಮಿಮಾ (ಅರ್ಧಶತಕ) ಜೊತೆಗೂಡಿ ಮಂಧಾನ 121 ರನ್‌ಗಳ ಅತ್ಯಮೂಲ್ಯ ಪಾಲುದಾರಿಕೆ ನಿರ್ಮಿಸಿದರು. ​ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಅನ್ನಾಬೆಲ್ ಸದರ್ಲ್ಯಾಂಡ್ 2 ವಿಕೆಟ್ ಪಡೆದು ಮಿಂಚಿದರು.

ಇದನ್ನು ಓದಿದ್ದೀರಾ? ರಣಜಿ ಟ್ರೋಫಿ: ಡ್ರಾದಲ್ಲಿ ಅಂತ್ಯಗೊಂಡ ಸೆಮಿಫೈನಲ್; ಇನಿಂಗ್ಸ್ ಮುನ್ನಡೆಯೊಂದಿಗೆ ಫೈನಲ್‌ಗೆ ಕರ್ನಾಟಕ
​
ಶ್ರೇಯಾಂಕ-ಚರಣಿ ಬೌಲಿಂಗ್ ಕಮಾಲ್
​177 ರನ್‌ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಕ್ಕೆ ಜಾರ್ಜಿಯಾ ವಾಲ್ ಮೊದಲ ಓವರ್‌ನಲ್ಲೇ 18 ರನ್ ಸಿಡಿಸಿ ಬಿರುಸಿನ ಆರಂಭ ಒದಗಿಸಿದರು. ಆದರೆ ಎರಡನೇ ಓವರ್‌ನಲ್ಲಿ ದಾಳಿಗಿಳಿದ ಕನ್ನಡಿಗ ಶ್ರೇಯಾಂಕ ಪಾಟೀಲ್ ಜಾರ್ಜಿಯಾ ಅವರನ್ನು ಪೆವಿಲಿಯನ್‌ಗೆ ಅಟ್ಟುವ ಮೂಲಕ ಆಸ್ಟ್ರೇಲಿಯಾಕ್ಕೆ ಆಘಾತ ನೀಡಿದರು.

​ಬೆನ್ನು ಬೆನ್ನಿಗೆ ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ ಕೇವಲ 32 ರನ್‌ಗಳಿಗೆ 3 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ​ಉಪನಾಯಕಿ ಆಶ್ಲೀ ಗಾರ್ಡ್ನರ್ ಏಕಾಂಗಿಯಾಗಿ ಹೋರಾಡಿ ಅರ್ಧಶತಕ ಗಳಿಸಿದರಾದರೂ, ಅವರಿಗೆ ಇತರ ಬ್ಯಾಟರ್‌ಗಳಿಂದ ಸೂಕ್ತ ಬೆಂಬಲ ಸಿಗಲಿಲ್ಲ. ಭಾರತದ ಪರ ಶ್ರೇಯಾಂಕ ಪಾಟೀಲ್ (3/22) ಮತ್ತು ಶ್ರೀ ಚರಣಿ (3/32) ತಲಾ ಮೂರು ವಿಕೆಟ್ ಪಡೆದು ಮಿಂಚಿದರೆ, ಅರುಂಧತಿ ರೆಡ್ಡಿ 2 ವಿಕೆಟ್ ಕಬಳಿಸಿದರು.

​ಐತಿಹಾಸಿಕ ದಾಖಲೆಗಳು
​10 ವರ್ಷಗಳ ಕಾಯುವಿಕೆಗೆ ಅಂತ್ಯ: ಭಾರತ ತಂಡವು 2016ರ ಬಳಿಕ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾವನ್ನು ಅದರದ್ದೇ ನೆಲದಲ್ಲಿ ಟಿ20 ಸರಣಿಯಲ್ಲಿ ಮಣಿಸಿ ಇತಿಹಾಸ ಬರೆದಿದೆ. 2017ರ ನಂತರ ಆಸ್ಟ್ರೇಲಿಯಾ ಮಹಿಳಾ ತಂಡವು ತನ್ನ ತವರಿನಲ್ಲಿ ಯಾವುದೇ ಮಾದರಿಯ ಸರಣಿಯನ್ನು ಸೋತಿದ್ದು ಇದೇ ಮೊದಲು. ​
ಅಂಕಪಟ್ಟಿಯಲ್ಲಿ ಮುನ್ನಡೆ: ಈ ಪ್ರವಾಸವು ಬಹು-ಸ್ವರೂಪದ ಸರಣಿಯಾಗಿದ್ದು (ಟಿ20, ಏಕದಿನ ಮತ್ತು ಟೆಸ್ಟ್ ಒಳಗೊಂಡಂತೆ), ಸದ್ಯ ಭಾರತ 4-2 ಅಂಕಗಳ ಮುನ್ನಡೆ ಕಾಯ್ದುಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...