4ನೇ ಟೆಸ್ಟ್ | ಅಶ್ವಿನ್, ಕುಲ್ದೀಪ್ ದಾಳಿಗೆ ಆಂಗ್ಲರು 145 ಕ್ಕೆ ಆಲೌಟ್; ಭಾರತದ ಜಯಕ್ಕೆ ಬೇಕಿದೆ 152 ರನ್

Date:

ಆರ್‌ ಅಶ್ವಿನ್ ಹಾಗೂ ಕುಲ್‌ದೀಪ್ ಯಾದವ್ ಅವರ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ಪ್ರವಾಸಿ ಇಂಗ್ಲೆಂಡ್ ತಂಡ ತನ್ನ ಎರಡನೇ ಇನಿಂಗ್ಸ್‌ನಲ್ಲಿ 145 ರನ್‌ಗಳಿಗೆ ಆಲೌಟ್‌ ಆಗಿ ಭಾರತಕ್ಕೆ 192 ರನ್‌ ಗುರಿ ನೀಡಿತು. ಗೆಲುವಿಗಾಗಿ ಎರಡನೇ ಇನಿಂಗ್ಸ್ ಆರಂಭಿಸಿರುವ ಟಿಂ ಇಂಡಿಯಾ ವಿಕೆಟ್ ನಷ್ಟವಿಲ್ಲದೆ 40 ರನ್‌ ಗಳಿಸಿದೆ.

ರಾಂಚಿಯ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನವಾದ ಇಂದು ಭಾರತ ತನ್ನ ಮೊದಲ ಇನಿಂಗ್ಸ್‌ನಲ್ಲಿ ಧ್ರವ ಜೆರೆಲ್ ಅವರ 90 ರನ್‌ಗಳ ನೆರವಿನಿಂದ 307 ರನ್‌ಗಳಿಗೆ ಆಲೌಟ್ ಆಯಿತು.

ಇದಕ್ಕೆ ಉತ್ತರವಾಗಿ ಎರಡನೇ ಇನಿಂಗ್ಸ್‌ ಆರಂಭಿಸಿದ ಇಂಗ್ಲೆಂಡ್ ತಂಡ ಆರ್‌ ಅಶ್ವಿನ್ ಹಾಗೂ ಕುಲ್‌ದೀಪ್ ಅವರ ಸ್ಪಿನ್ ದಾಳಿಗೆ ಸಿಲುಕಿ 53.2 ಓವರ್‌ಗಳಲ್ಲಿ 145 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಆಂಗ್ಲರ ಪರ ಜಾಕ್‌ ಕ್ರಾಲಿ (60) ಹಾಗೂ ಜಾನಿ ಬೈರ್‌ಸ್ಟೋ (30) ಹೊರತುಪಡಿಸಿದರೆ ಉಳಿದ ಆಟಗಾರರು 20ರ ಗಡಿ ದಾಟಲಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

ಆರ್‌ ಅಶ್ವಿನ್ 24/5, ಕುಲ್‌ದೀಪ್ ಯಾದವ್ 22/4 ಹಾಗೂ ರವೀಂದ್ರ ಜಡೇಜಾ 56/1 ವಿಕೆಟ್ ಪಡೆದು ಇಂಗ್ಲೆಂಡ್ ತಂಡದ ಪತನಕ್ಕೆ ಕಾರಣರಾದರು.

ಅಶ್ವಿನ್ ಮಗದೊಂದು ದಾಖಲೆ

ಐದು ವಿಕೆಟ್ ಪಡೆದ ಆರ್‌ ಅಶ್ವಿನ್ ಅನಿಲ್‌ ಕುಂಬ್ಳೆ ಅವರ ದಾಖಲೆ ಸರಿಗಟ್ಟಿದ್ದಾರೆ.  ಅತಿ ಹೆಚ್ಚು ಬಾರಿ 5 ವಿಕೆಟ್ ಪಡೆದವರಲ್ಲಿ ಕುಂಬ್ಳೆ ಮೊದಲ ಸ್ಥಾನದಲ್ಲಿದ್ದಾರೆ. ಈಗ ಅವರ ಸ್ಥಾನಕ್ಕೆ ಅಶ್ವಿನ್ ಕೂಡ ಸೇರ್ಪಡೆಯಾಗಿದ್ದಾರೆ. ಕುಂಬ್ಳೆ 132 ಟೆಸ್ಟ್‌ಗಳಲ್ಲಿ 35 ಬಾರಿ 5 ವಿಕೆಟ್ ಪಡೆದಿದ್ದರೆ, ಆರ್ ಅಶ್ವಿನ್ 99 ಟೆಸ್ಟ್‌ಗಳಲ್ಲಿ 35 ಬಾರಿ 5 ವಿಕೆಟ್ ಪಡೆದಿದ್ದಾರೆ.

ಮೊದಲ ಮೂರು ಸ್ಥಾನಗಳಲ್ಲಿ ಶ್ರೀಲಂಕಾದ ಮುತ್ತಯ್ಯ ಮುರುಳೀಥರನ್ (67 ಬಾರಿ), ಆಸೀಸ್‌ನ ಶೇನ್‌ ವಾರ್ನ್ (37 ಬಾರಿ), ನ್ಯೂಜಿಲೆಂಡ್‌ನ ರಿಚರ್ಡ್‌ ಹ್ಯಾಂಡ್ಲಿ (36) ಇದ್ದಾರೆ. ನಾಲ್ಕು ಮತ್ತು ಐದನೇ ಸ್ಥಾನದಲ್ಲಿ ಅಶ್ವಿನ್‌ ಹಾಗೂ ಕುಂಬ್ಳೆ ಇದ್ದಾರೆ.

ಎರಡನೇ ಇನಿಂಗ್ಸ್‌ ಆರಂಭಿಸಿರುವ ಭಾರತ 8 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 40 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮಾ (24) ಹಾಗೂ ಯಶಸ್ವಿ ಜೈಸ್ವಾಲ್ (16) ಅಜೇಯರಾಗಿ ಆಡುತ್ತಿದ್ದಾರೆ. ಭಾರತದ ಗೆಲುವಿಗೆ ಎರಡು ದಿನಗಳ ಆಟ ಬಾಕಿಯಿದ್ದು, 152 ರನ್‌ಗಳ ಅಗತ್ಯವಿದೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ  ಹೊಸ ಮೈಲಿಗಲ್ಲು ಸಾಧಿಸಿದ ನಾಯಕ ರೋಹಿತ್ ಶರ್ಮಾ 4 ಸಾವಿರ ರನ್‌ ಗಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ಹೆಟ್ಮಾಯರ್ ಸ್ಫೋಟಕ ಬ್ಯಾಟಿಂಗ್: ರೋಚಕ ಹಣಾಹಣಿಯಲ್ಲಿ ಪಂಜಾಬ್‌ಗೆ ಸೋಲುಣಿಸಿದ ರಾಜಸ್ಥಾನ

ಚಂಡೀಗಢದ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು...

ಐಪಿಎಲ್ 2024 | ತಲಾ 5 ಬಾರಿ ಕಪ್‌ ಗೆದ್ದಿರುವ ಮುಂಬೈ – ಚನ್ನೈ ನಡುವೆ ಹಣಾಹಣಿ; ಎಲ್ಲರ ಚಿತ್ತ ವಾಂಖೆಡೆಯತ್ತ!

ಐಪಿಎಲ್‌ನ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ (ಸಿಎಸ್‌ಕೆ) ಮತ್ತು ಮುಂಬೈ...

ಐಪಿಎಲ್ | ಕೆ ಎಲ್ ರಾಹುಲ್ ನೇತೃತ್ವದ ಲಕ್ನೋಗೆ ಸೋಲುಣಿಸಿದ ಡೆಲ್ಲಿ ಕ್ಯಾಪಿಟಲ್ಸ್‌

ಲಕ್ನೋ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಶುಕ್ರವಾರ ನಡೆದ ಐಪಿಎಲ್‌ನ 26ನೇ...

ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಮೇರಿ ಕೋಮ್ ರಾಜೀನಾಮೆ

ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಒಲಿಂಪಿಕ್ ಪದಕ ವಿಜೇತೆ...