ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಇನಿಂಗ್ಸ್ ಮುನ್ನಡೆ: ರಾಹುಲ್, ಜಡೇಜಾ ಅರ್ಧ ಶತಕ

Date:

ಕೆ ಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಅವರ ಆಟದ ನೆರವಿನೊಂದಿಗೆ ಭಾರತ ತಂಡ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಟೀ ವಿರಾಮದ ವೇಳೆಗೆ 87 ಓವರ್‌ಗಳಲ್ಲಿ6 ವಿಕೆಟ್ ನಷ್ಟಕ್ಕೆ 356 ರನ್‌ ಗಳಿಸಿ 110 ರನ್‌ಗಳ ಇನಿಂಗ್ಸ್ ಮುನ್ನಡೆಯಲ್ಲಿದೆ.

- Advertisement -

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ 119/1 ರನ್‌ನೊಂದಿಗೆ ಎರಡನೇ ದಿನದಾಟ ಶುರು ಮಾಡಿದ ಟೀಂ ಇಂಡಿಯಾ 23.4 ಓವರ್‌ಗಳಲ್ಲಿ ತಂಡದ ಮೊತ್ತ 123 ರನ್‌ ಗಳಿಸಿದ್ದಾಗ ಯಶಸ್ವಿ ಜೈಸ್ವಾಲ್ ಔಟಾದರು. 74 ಚೆಂಡುಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್‌ಗಳೊಂದಿಗೆ 80 ರನ್ ಗಳಿಸಿ ಜೋರೂಟ್ ಬೌಲಿಂಗ್‌ನಲ್ಲಿ ಪೆವಿಲಿಯನ್‌ಗೆ ತೆರಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇಳಿಸಿದ ಶಕ್ತಿಗಳೇ ಕರ್ಪೂರಿಯವರನ್ನು ಅಟ್ಟಕ್ಕೇರಿಸುತ್ತಿರುವ ಅಣಕ

ಮತ್ತೊಬ್ಬ ಉದಯೋನ್ಮುಖ ಆಟಗಾರ ಶುಭಮನ್‌ ಗಿಲ್ ಹೆಚ್ಚು ಹೊತ್ತು ನಿಲ್ಲದೆ 23 ರನ್‌ಗಳಿಗೆ ನಿರ್ಗಮಿಸಿದರು. ಕೆ ಎಲ್‌ ರಾಹುಲ್ ಹಾಗೂ ಶ್ರೇಯಸ್‌ ಅಯ್ಯರ್ ಅವರ ಜೋಡಿ 4ನೇ ವಿಕೆಟ್ ಜೊತೆಯಾಟದಲ್ಲಿ 64 ರನ್ ಪೇರಿಸಿದರು. 35 ರನ್‌ ಗಳಿಸಿದ ಅಯ್ಯರ್ ಔಟಾದರು.

ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರಿಗೂ ಒಂದಷ್ಟು ಹೊತ್ತು ಜೊತೆಯಾಟ ನೀಡಿದ ಕೆ ಎಲ್‌ ರಾಹುಲ್ 86 ರನ್‌ ಗಳಿಸಿದ್ದಾಗ ಹಾರ್ಟಲೇ ಬೌಲಿಂಗ್‌ನಲ್ಲಿ ರಿಹಾನ್‌ ಅಹಮದ್‌ಗೆ ಕ್ಯಾಚಿತ್ತು 14 ರನ್‌ಗಳಿಂದ ಶತಕ ವಂಚಿತರಾದರು. ರಾಹುಲ್ ಇನಿಂಗ್ಸ್‌ನಲ್ಲಿ 8 ಬೌಂಡರಿ 2 ಸಿಕ್ಸರ್‌ಗಳಿದ್ದವು.

ರಾಹುಲ್ ನಂತರ ಕ್ರೀಸ್ ಗಿಳಿದ ವಿಕೆಟ್ ಕೀಪರ್ ಶ್ರೀಕರ್ ಭರತ್, ಕೊಂಚ ನಿಧಾನಗತಿಯಲ್ಲಿ ಆಟ ಆರಂಭಿಸಿದರೂ, ನಂತರ ಜಡೇಜಾ ಜೊತೆಯಾಟದಲ್ಲಿ ಬಿರುಸಿನ ಹೊಡೆತಗಳ ಫಲವಾಗಿ 35 ರನ್ ಪೇರಿಸಿದರು. ರೂಟ್ ಬೌಲಿಂಗ್ ನಲ್ಲಿ ಎಲ್ಬಿಯಾಗಿ ಔಟ್ ಆದರು.

ಅರ್ಧ ಶತಕ ಗಳಿಸಿರುವ ರವೀಂದ್ರ ಜಡೇಜಾ(60) ಜೊತೆಗೆ ಮತ್ತೊಬ್ಬ ಸ್ಪಿನ್ ಬೌಲರ್ ರವಿಚಂದ್ರನ್ ಅಶ್ವಿನ್ ಜೊತೆಯಾಟದೊಂದಿಗೆ ಆಟವಾಡುತ್ತಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...