ಆಸ್ಟ್ರೇಲಿಯ ವೇಗದ ಬೌಲರ್‌ಗಳ ದಾಳಿಗೆ ಸಿಲುಕಿದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 296 ರನ್‌ಗಳಿಗೆ ಆಲೌಟ್ ಆಗಿ 173 ರನ್‌ಗಳ ಹಿನ್ನಡೆ ಅನುಭವಿಸಿದೆ.
ಇಂಗ್ಲೆಂಡ್‌ನ ಓವಲ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್ ಟೂರ್ನಿಯ ಫೈನಲ್ ಪಂದ್ಯದ ಮೂರನೇ ದಿನದಾಟದಲ್ಲಿ ಭಾರತ ತಂಡವು 69.4 ಓವರ್‌ಗಳಲ್ಲಿ 296 ರನ್‌ಗಳಿಗೆ ತನ್ನ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.
138 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ಮೂರನೇ ದಿನದಾಟ ಆರಂಭಿಸಿದ ಭಾರತ ತಂಡಕ್ಕೆ ಅನುಭವಿ ಆಟಗಾರ ಅಜಿಂಕ್ಯ ರಹಾನೆ ಹಾಗೂ ಆಲ್‌ರೌಂಡರ್ ಶಾರ್ದುಲ್ ಠಾಕೂರ್ ಅವರ ಅರ್ಥ ಶತಕದ ನೆರವಿನಿಂದ ಗೌರವಾನ್ವಿತ ಮೊತ್ತ ಗಳಿಸಿತು.
ಎರಡನೇ ದಿನದಾಟದಲ್ಲಿ ರವೀಂದ್ರ ಜಡೇಜಾ (48) ಜೊತೆಗೂಡಿ 5ನೇ ವಿಕೆಟ್‌ಗೆ 100 ಎಸೆತಗಳಲ್ಲಿ 71 ರನ್‌ಗಳ ಜೊತೆಯಾಟವಾಡಿದ ಅಜಿಂಕ್ಯ ರಹಾನೆ, ಮೂರನೇ ದಿನದಂದು 7ನೇ ವಿಕೆಟ್‌ಗೆ ಆಲ್‌ರೌಂಡರ್ ಶಾರ್ದುಲ್ ಠಾಕೂರ್ ಜೊತೆಗೂಡಿ 109 ರನ್‌ಗಳ ಜೊತೆಯಾಟವಾಡಿದರು. ಈ ಮೂಲಕ ಭಾರತ ತಂಡದ ಮೊತ್ತವನ್ನು 250ರ ಗಡಿ ದಾಟುವಂತೆ ಮಾಡಿದರು. ಇವರಿಬ್ಬರ ಜೊತೆಯಾಟವು ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಫೈನಲ್ ಇತಿಹಾಸದಲ್ಲಿ ಭಾರತದ ಪರ ಮೂಡಿಬಂದ ಮೊದಲ ಶತಕದ ಜೊತೆಯಾಟವಾಗಿ ದಾಖಲೆ ಪುಟ ಸೇರಿದೆ.
62ನೇ ಓವರ್‌ನ ಕೊನೆಯ ಎಸೆತದಲ್ಲಿ ರಹಾನೆ 89 ರನ್ ಗಳಿಸಿದ್ದಾಗ ಆಸಿಸ್ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್‌ನಲ್ಲಿ ಬಿರುಸಿನ ಹೊಡತಕ್ಕೆ ಪ್ರಯತ್ನಿಸಿ ಗ್ರೀನ್‌ಗೆ ಕ್ಯಾಚ್ ನೀಡಿದರು. ಅವರ 129 ಚೆಂಡುಗಳ ಮನೋಮೋಹಕ ಆಟದಲ್ಲಿ 11 ಆಕರ್ಷಕ ಬೌಂಡರಿ ಹಾಗೂ ಒಂದು ಭರ್ಜರಿ ಸಿಕ್ಸರ್ ಒಳಗೊಂಡಿದ್ದವು.
ಈ ಸುದ್ದಿ ಓದಿದ್ದೀರಾ? ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ | 469 ರನ್‌ಗಳಿಗೆ ಆಸ್ಟ್ರೇಲಿಯಾ ಆಲೌಟ್
ಇವರ ನಂತರ ಬಂದ ಬೌಲರ್ ಉಮೇಶ್ ಯಾದವ್(5) ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ಮೊಹಮ್ಮದ್ ಶಮಿ ಕೂಡ 13 ರನ್ ಗಳಿಸಿ ಪೆವಿಇಯನ್‌ಗೆ ತೆರಳಿದರು. ಅರ್ಧ ಶತಕ ಪೂರೈಸಿದ ಶಾರ್ದುಲ್ ಠಾಕೂರ್ (51) ಗ್ರೀನ್ ಬೌಲಿಂಗ್‌ನಲ್ಲಿ ಔಟಾಗುವುದರೊಂದಿಗೆ ಭಾರತದ ಇನ್ನಿಂಗ್ಸ್ ಮುಕ್ತಾಯವಾಯಿತು. 109 ಎಸೆತಗಳನ್ನು ಎದುರಿಸಿದ ಶಾರ್ಧೂಲ್ 6 ಬೌಂಡರಿಗಳನ್ನು ಸಿಡಿಸಿದರು.
ಆಸ್ಟ್ರೇಲಿಯಾ ಪರ ಪ್ಯಾಟ್ ಕಮಿನ್ಸ್ 83/3, ಮಿಚಲ್ ಸ್ಟಾರ್ಕ್ 71/2, ಸ್ಕಾಟ್ ಬೊಲಾಂಡ್ 59/2 ಹಾಗೂ ಕ್ಯಾಮರಾನ್ ಗ್ರೀನ್ 44/2 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್ ಎನಿಸಿದರು.
5 ಸಾವಿರ ಟೆಸ್ಟ್ ರನ್ ಪೂರೈಸಿದ ರಹಾನೆ
ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಭಾರತ ಟೆಸ್ಟ್ ತಂಡಕ್ಕೆ ವಾಪಸ್ ಮಾಡಿರುವ ಅನುಭವಿ ಆಟಗಾರ ಅಜಿಂಕ್ಯ ರಹಾನೆ, ದಿಟ್ಟ ಬ್ಯಾಟಿಂಗ್ ನಡೆಸಿ ಟೆಸ್ಟ್ ವೃತ್ತಿ ಜೀವನವನ್ನು ಸ್ಮರಣೀಯವನ್ನಾಗಿಸಿಕೊಂಡಿದ್ದಾರೆ. ತಮ್ಮ ವೃತ್ತಿಬದುಕಿನ 83ನೇ ಟೆಸ್ಟ್ ಪಂದ್ಯದಲ್ಲಿ 5 ಸಾವಿರ ರನ್‌ಗಳ ಗಡಿ ದಾಟಿದ ಸಾಧನೆಯನ್ನು ಪೂರೈಸಿದರು.
ಆಸ್ಟ್ರೇಲಿಯಾಕ್ಕೆ ಆರಂಭಿಕ ಆಘಾತ
ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾಕ್ಕೆ ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಆರಂಭಿಕ ಆಘಾತ ನೀಡಿದರು. ನಾಲ್ಕನೇ ಓವರ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್‌ರನ್ನು(1) ಔಟ್ ಮಾಡಿ ಪೆವಿಲಿಯನ್‌ಗೆ ಕಳಿಸಿದರು. ಉಸ್ಮಾನ್ ಖವಾಜ(7) ಹಾಗೂ ಮಾರ್ನಸ್ ಲಾಬುಶೇನ್ (3) ಆಟವಾಡುತ್ತಿದ್ದಾರೆ. ಆಸ್ಟ್ರೇಲಿಯ 9 ಓವರ್‌ಗಳಲ್ಲಿ ಒಂದು ವಿಕೆಟ್ ನಷ್ಟಕ್ಕೆ 19 ರನ್ ಗಳಿಸಿದೆ.