T20 World Cup 2026: ಭಾರತ ತಂಡದ ವೇಳಾಪಟ್ಟಿ ಪ್ರಕಟ

Date:

ಬಹುನಿರೀಕ್ಷಿತ ಟಿ20 ವಿಶ್ವಕಪ್ 2026ರ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 4 ಗ್ರೂಪ್​​ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಕಾಣಿಸಿಕೊಂಡಿದೆ.

- Advertisement -

ಪಾಕಿಸ್ತಾನ ಅಲ್ಲದೆ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಯುಎಸ್​ಎ, ನಮೀಬಿಯಾ ಮತ್ತು ನೆದರ್​ಲೆಂಡ್ಸ್ ತಂಡಗಳನ್ನು ಎದುರಿಸಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಟಿ20 ವಿಶ್ವಕಪ್ 2026 ಭಾರತದ ವೇಳಾಪಟ್ಟಿ:
ಫೆಬ್ರವರಿ 7: ಭಾರತ vs ಯುಎಸ್​​ಎ- (ಮುಂಬೈ)
ಫೆಬ್ರವರಿ 12: ಭಾರತ vs ನಮೀಬಿಯಾ- (ದೆಹಲಿ)
ಫೆಬ್ರವರಿ 15: ಭಾರತ vs ಪಾಕಿಸ್ತಾನ- (ಕೊಲಂಬೊ)
ಫೆಬ್ರವರಿ 18: ಭಾರತ vs ನೆದರ್​ಲೆಂಡ್ಸ್-​​ (ಅಹಮದಾಬಾದ್)

ಈ ನಾಲ್ಕು ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿದೆ. ಅಂದರೆ 4 ಗ್ರೂಪ್​ಗಳ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೆ ಅರ್ಹತೆ ಪಡೆಯಲಿದೆ. ಅದರಂತೆ ಮೊದಲ ಸುತ್ತಿನ ಬಳಿಕ ಸೂಪರ್-8 ಹಂತದ ಮುಖಾಮುಖಿ ಶುರುವಾಗಲಿದೆ. ಸೂಪರ್-8 ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು ಸೆಮಿಫೈನಲ್​​ಗೆ ಅರ್ಹತೆ ಪಡೆಯಲಿದೆ.

ಇದನ್ನು ಓದಿದ್ದೀರಾ? Ashes ಸರಣಿ | ಟ್ರಾವಿಸ್‌ ಹೆಡ್‌ ಭರ್ಜರಿ ಶತಕ; ಇಂಗ್ಲೆಂಡ್ ವಿರುದ್ಧ ಆಸೀಸ್‌ಗೆ 8 ವಿಕೆಟ್‌ ಜಯ

ಸೆಮಿಫೈನಲ್ ಪಂದ್ಯ ನಡೆಯುವುದು ಎಲ್ಲಿ?
ಸೆಮಿಫೈನಲ್ ಪಂದ್ಯಗಳಿಗೆ ಮುಂಬೈ ಮತ್ತು ಕೊಲ್ಕತ್ತಾ ನಗರಗಳನ್ನು ಆಯ್ಕೆ ಮಾಡಲಾಗಿದೆ. ಒಂದು ವೇಳೆ ಪಾಕಿಸ್ತಾನ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದರೆ ಆ ಪಂದ್ಯವನ್ನು ಕೊಲಂಬೊದಲ್ಲಿ ಆಡಲಾಗುತ್ತದೆ. ಇದರಿಂದ ಕೊಲ್ಕತ್ತಾದ ಸೆಮಿಫೈನಲ್ ಆತಿಥ್ಯ ಕೈ ತಪ್ಪಬಹುದು.

ಫೈನಲ್ ಪಂದ್ಯ?
ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯವು ಮಾರ್ಚ್ 8 ರಂದು ಅಹಮದಾಬಾದ್​ನ ಸ್ಟೇಡಿಯಂನಲ್ಲಿ ಜರುಗಲಿದೆ. ಅತ್ತ ಪಾಕಿಸ್ತಾನ ತಂಡವು ಫೈನಲ್​ಗೇರಿದರೆ ಅಂತಿಮ ಹಣಾಹಣಿ ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ.

ಟಿ20 ವಿಶ್ವಕಪ್​ನ 4 ಗ್ರೂಪ್​ಗಳು:
ಗ್ರೂಪ್- 1
ಭಾರತ
ಪಾಕಿಸ್ತಾನ
ಯುಎಸ್​ಎ
ನಮೀಬಿಯಾ
ನೆದರ್​ಲೆಂಡ್ಸ್

ಗ್ರೂಪ್-2
ಆಸ್ಟ್ರೇಲಿಯಾ
ಶ್ರೀಲಂಕಾ
ಜಿಂಬಾಬ್ವೆ
ಐರ್ಲೆಂಡ್
ಒಮಾನ್

ಗ್ರೂಪ್-3
ಇಂಗ್ಲೆಂಡ್
ವೆಸ್ಟ್ ಇಂಡೀಸ್
ಇಟಲಿ
ಬಾಂಗ್ಲಾದೇಶ
ನೇಪಾಳ

ಗ್ರೂಪ್-4
ದಕ್ಷಿಣ ಆಫ್ರಿಕಾ
ನ್ಯೂಜಿಲೆಂಡ್
ಅಫ್ಘಾನಿಸ್ತಾನ
ಯುಎಇ
ಕೆನಡಾ



eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

‘ಜೈಲರ್ 2’ ಸಿನಿಮಾ ವೀಕ್ಷಿಸಲು ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್!

ನಟ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಆಕ್ಷನ್-ಥ್ರಿಲ್ಲರ್ ಚಿತ್ರ 'ಜೈಲರ್ 2' ಸಿನಿಮಾವನ್ನು...

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ: ಮೊದಲ ದಿನವೇ 4 ಚಿನ್ನ ಸೇರಿ 11 ಪದಕಗಳ ಸಾಧನೆ!

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತ ಭರ್ಜರಿ...

ವಿಶ್ವಕಪ್ ಸಿದ್ಧತೆಗೆ ಕಿವೀಸ್ ಸರಣಿ ಪರೀಕ್ಷೆ: ಗಿಲ್– ಶ್ರೇಯಸ್ ನಾಯಕತ್ವದಲ್ಲಿ ಟೀಂ ಇಂಡಿಯಾ ಸಜ್ಜು

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಸರಣಿಗೆ ಕ್ಷಣಗಣನೆ ಆರಂಭವಾಗಿದೆ....