ಅಫ್ಘಾನ್‌ ಸರಣಿಗೆ ಭಾರತ ತಂಡ ಪ್ರಕಟ; ಗಿಲ್ ನಾಯಕ, ಮೂವರು ಕನ್ನಡಿಗರಿಗೆ ಮಣೆ

Date:

ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ತವರಿನ ಸರಣಿಗಾಗಿ ಬಿಸಿಸಿಐ ಭಾರತದ ಟೆಸ್ಟ್ ಹಾಗೂ ಏಕದಿನ ತಂಡಗಳನ್ನು ಪ್ರಕಟಿಸಿದೆ. ಎರಡೂ ಮಾದರಿಯ ತಂಡಗಳ ನಾಯಕತ್ವವನ್ನು ಶುಭಮನ್ ಗಿಲ್ ಅವರಿಗೆ ವಹಿಸಲಾಗಿದೆ. 2027ರ ಏಕದಿನ ವಿಶ್ವಕಪ್‌ಗೆ ತಂಡವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಯುವ ಆಟಗಾರರಿಗೆ ಮಣೆ ಹಾಕಲಾಗಿದೆ. ಜೂನ್ 6 ರಿಂದ ಮೊಹಾಲಿ (ಮುಲ್ಲನ್‌ಪುರ್) ಯಲ್ಲಿ ಏಕೈಕ ಟೆಸ್ಟ್ ಪಂದ್ಯ ನಡೆಯಲಿದ್ದು, ಬಳಿಕ ಜೂನ್ 14, 17 ಮತ್ತು 20 ರಂದು ಕ್ರಮವಾಗಿ ಧರ್ಮಶಾಲಾ, ಲಖನೌ ಮತ್ತು ಚೆನ್ನೈನಲ್ಲಿ ಮೂರು ಏಕದಿನ ಪಂದ್ಯಗಳು ನಡೆಯಲಿವೆ.

- Advertisement -

ಈ ಸರಣಿಯಲ್ಲಿ ಕರ್ನಾಟಕದ ಆಟಗಾರರು ಸ್ಥಾನ ಪಡೆದಿದ್ದಾರೆ. ರಿಷಭ್ ಪಂತ್ ಅವರಿಂದ ತೆರವಾದ ಟೆಸ್ಟ್ ತಂಡದ ಉಪನಾಯಕನ ಸ್ಥಾನಕ್ಕೆ ಅನುಭವಿ ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ಬಿಸಿಸಿಐ ನೇಮಿಸಿದೆ. ಏಕದಿನ ಹಾಗೂ ಟೆಸ್ಟ್ ಎರಡರಲ್ಲೂ ಅವರು ವಿಕೆಟ್ ಕೀಪರ್ ಆಗಿ ಜವಾಬ್ದಾರಿ ನಿಭಾಯಿಸುವ ನಿರೀಕ್ಷೆಯಿದೆ. ಇದರ ಜೊತೆಗೆ, ಯುವ ಬ್ಯಾಟರ್ ದೇವದತ್ ಪಡಿಕ್ಕಲ್ ಅವರು ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕೆ.ಎಲ್. ರಾಹುಲ್ ಮತ್ತು ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರು ಟೆಸ್ಟ್ ಹಾಗೂ ಏಕದಿನ ಎರಡೂ ತಂಡಗಳಿಗೂ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತಂಡದ ಪ್ರಮುಖ ವೇಗಿ ಜಸ್‌ಪ್ರೀತ್‌ ಬೂಮ್ರಾ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರಿಗೆ ಈ ಸರಣಿಯಿಂದ ಸಂಪೂರ್ಣ ವಿಶ್ರಾಂತಿ ನೀಡಲಾಗಿದೆ. ಏಕದಿನ ತಂಡದಲ್ಲಿ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಸ್ಥಾನ ಪಡೆದಿದ್ದಾರೆ. ಆದರೆ, ಬೆನ್ನುನೋವಿನಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಹಾಗೂ ರೋಹಿತ್ ಶರ್ಮಾ ಅವರ ಅಂತಿಮ ಲಭ್ಯತೆಯು ಬಿಸಿಸಿಐನ ಫಿಟ್‌ನೆಸ್ ಪರೀಕ್ಷೆ ಉತ್ತೀರ್ಣರಾಗುದರ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ.

ಇದನ್ನು ಓದಿದ್ದೀರಾ? ಪಂಜಾಬ್‌ಗೆ ಸತತ 5ನೇ ಸೋಲು: ಕೋಚ್ ರಿಕಿ ಪಾಂಟಿಂಗ್‌ಗೆ ಪ್ರೀತಿ ಜಿಂಟಾ ತರಾಟೆ?

ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಗುರ್ನೂರ್ ಬ್ರಾರ್, ಹರ್ಷ್ ದುಬೆ, ಮಾನವ್ ಸುತಾರ್ (ಟೆಸ್ಟ್) ಹಾಗೂ ಪ್ರಿನ್ಸ್ ಯಾದವ್ (ಏಕದಿನ) ಅವರು ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಸ್ಥಾನ ಪಡೆದಿದ್ದಾರೆ.

ಏಕದಿನ ತಂಡದಲ್ಲಿ ಸಂಜು ಸ್ಯಾಮ್ಸನ್ ಬದಲು ಎಡಗೈ ಬ್ಯಾಟರ್ ಇಶಾನ್ ಕಿಶನ್ ಅವರಿಗೆ ಬ್ಯಾಕ್-ಅಪ್ ಕೀಪರ್ ಆಗಿ ಮಣೆ ಹಾಕಲಾಗಿದೆ. ಟೆಸ್ಟ್ ತಂಡದಲ್ಲಿ ರಿಷಭ್ ಪಂತ್ ಜೊತೆಗೆ ಧ್ರುವ್ ಜುರೆಲ್ ಅವರನ್ನು ಕಾಯ್ದಿರಿಸಿದ ವಿಕೆಟ್ ಕೀಪರ್ ಆಗಿ ಹೆಸರಿಸಲಾಗಿದೆ.

ಪ್ರಕಟಿಸಲಾದ ಭಾರತ ತಂಡಗಳು

ಟೆಸ್ಟ್ ತಂಡ:
ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್ (ಉಪನಾಯಕ), ಸಾಯಿ ಸುದರ್ಶನ್, ರಿಷಭ್ ಪಂತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಹರ್ಷ್ ದುಬೆ, ಧ್ರುವ್ ಜುರೆಲ್.

ಏಕದಿನ ತಂಡ:
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಶರತ್ತುಗಳು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ತೆರೆಯುವುದಿಲ್ಲ: ಇರಾನ್ ಸ್ಪಷ್ಟನೆ

ತನ್ನ ಎಲ್ಲ ಶರತ್ತುಗಳು ಸಂಪೂರ್ಣವಾಗಿ ಈಡೇರುವವರೆಗೆ ಜಾಗತಿಕ ತೈಲ ಮತ್ತು ಅನಿಲ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...