ಭಾರತ – ಆಸ್ಟ್ರೇಲಿಯಾ ಟೆಸ್ಟ್‌ | ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿ

Date:

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಶುರುವಾಗಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

- Advertisement -

ಆಸ್ಟ್ರೇಲಿಯಾ ತಂಡ ಇನಿಂಗ್ಸ್ ಆರಂಭಿಸಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ಫೀಲ್ಡಿಂಗ್​ಗಾಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 100 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಕೊಹ್ಲಿ ಎನಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಆಸ್ಟ್ರೇಲಿಯಾ ವಿರುದ್ಧ ನೂರು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಮಾಸ್ಟರ್ ಬ್ಲಾಸ್ಟರ್ ಖ್ಯಾತಿಯ ಸಚಿನ್ ತೆಂಡೂಲ್ಕರ್ ಆಸೀಸ್ ವಿರುದ್ಧ 110 ಪಂದ್ಯಗಳನ್ನಾಡಿ ಈ ದಾಖಲೆ ನಿರ್ಮಿಸಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧ 100ನೇ ಪಂದ್ಯದಲ್ಲಿ ಕಣಕ್ಕಿಳಿದು, ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ 110 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸಚಿನ್ ತೆಂಡೂಲ್ಕರ್ 6,707 ರನ್ ಕಲೆಹಾಕಿದ್ದರು. 100ನೇ ಪಂದ್ಯ ಆಡುತ್ತಿರುವ ವಿರಾಟ್ ಕೊಹ್ಲಿ 5,326 ರನ್ ಗಳಿಸಿದ್ದಾರೆ.

ಪಂದ್ಯಕ್ಕೆ ಮಳೆ ಅಡ್ಡಿ

ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೇ 28 ರನ್‌ಗಳಿಸಿದೆ. ಆಟದ ಮಧ್ಯೆ ಮಳೆ ಬಂದಿದ್ದರಿಂದ ಪಂದ್ಯಕ್ಕೆ ಅಡ್ಡಿಯಾಗಿದೆ. ಆಸ್ಟ್ರೇಲಿಯಾ 13. 2 ಓವರ್‌ಗಳಲ್ಲಿ 28 ರನ್‌ಗಳಿಸಿದೆ. ಖವಾಜ 19. ನಥನ್ 4 ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಫ್ಘಾನ್ ವಿರುದ್ಧ ಭಾರತಕ್ಕೆ ಸರಣಿ ಕ್ಲೀನ್ ಸ್ವೀಪ್: ಶತಕದೊಂದಿಗೆ ಸೂರ್ಯವಂಶಿ ದಾಖಲೆ ಹಿಂದಿಕ್ಕಿದ ಅಭಿಷೇಕ್

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮೂರನೇ ಹಾಗೂ ಅಂತಿಮ...

​’ಕೊನೆಯ ಗಳಿಗೆಯ ಪ್ರಯೋಗಗಳು ಅಪಾಯಕಾರಿ’: ಟೀಮ್ ಇಂಡಿಯಾಗೆ ಯುವರಾಜ್ ಸಿಂಗ್ ಸಲಹೆ

ಮುಂಬರುವ 2027ರ ಏಕದಿನ ವಿಶ್ವಕಪ್‌ ಟೂರ್ನಿಗೆ ಸಜ್ಜಾಗುತ್ತಿರುವ ಭಾರತ ಕ್ರಿಕೆಟ್ ತಂಡದಲ್ಲಿ...

ಸಚಿನ್ ಐತಿಹಾಸಿಕ ದಾಖಲೆ ಮುರಿದ ಜಿಂಬಾಬ್ವೆಯ ಬ್ರೆಂಡನ್ ಟೇಲರ್

ಜಿಂಬಾಬ್ವೆ ರಾಷ್ಟ್ರೀಯ ಕ್ರಿಕೆಟ್ ತಂಡದ ಅತ್ಯಂತ ಹಿರಿಯ ವಿಕೆಟ್ ಕೀಪರ್ ಹಾಗೂ...

​’ಇಮ್ರಾನ್ ಜೈಲಿನಲ್ಲೇ ಕೊನೆಯುಸಿರೆಳೆಯಬಹುದು’: ಆಸ್ಟ್ರೇಲಿಯಾದ 7 ಮಾಜಿ ನಾಯಕರ ತೀವ್ರ ಆತಂಕ

ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ 1992ರ ವಿಶ್ವಕಪ್ ವಿಜೇತ ನಾಯಕ ಇಮ್ರಾನ್...