ಪ್ಯಾರಿಸ್ ಒಲಿಂಪಿಕ್ಸ್ 2024: ಪಿ ವಿ ಸಿಂಧು ಸೇರಿ ಭಾರತದ ಆರು ಕ್ರೀಡಾಪಟುಗಳ ಶುಭಾರಂಭ

Date:

ಪ್ಯಾರಿಸ್ ಒಲಿಂಪಿಕ್ಸ್ 2024ರ ಎರಡನೇ ದಿನದಲ್ಲಿ ಭಾರತ ಉತ್ತಮ ಶುಭಾರಂಭ ಮಾಡಿದ್ದು, ಪಿ ವಿ ಸಿಂಧು ಸೇರಿ ಆರು ಕ್ರೀಡಾಪಟುಗಳು ಮೊದಲ ಗೆಲುವು ದಾಖಲಿಸಿ ಪದಕದ ಭರವಸೆ ಮೂಡಿಸಿದ್ದಾರೆ.

- Advertisement -

ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್‌ ವಿಭಾಗದಲ್ಲಿ ಈಗಾಗಲೇ ಎರಡು ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದಿರುವ ಪಿ ವಿ ಸಿಂಧು ಮೊದಲ ಸುತ್ತಿನಲ್ಲಿ ಮಾಲ್ಡೀವ್ಸ್‌ನ ಫಾತಿಮತ್ ಅಬ್ದುಲ್‌ ರಝಾಕ್ ವಿರುದ್ಧ 21-9, 21-6 ಅಂತರದಲ್ಲಿ ಗೆಲುವು ದಾಖಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೇವಲ 29 ನಿಮಿಷಗಳಲ್ಲಿ ಆಟ ಮುಗಿಸಿದ ಪಿ ವಿ ಸಿಂಧು ಎರಡನೇ ಸುತ್ತಿಗೆ ಅರ್ಹತೆ ಪಡೆದರು. ಜುಲೈ 29ರಂದು ಎಸ್ಟೋನಿಯಾದ ವಿಶ್ವದ 75ನೇ ಶ್ರೇಯಾಂಕದ ಕ್ರಿಸ್ತಿನ್‌ ಕೂಬಾ ಅವರನ್ನು ಎದುರಿಸಲಿದ್ದಾರೆ. ಸಿಂಧು ಅವರು 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಹಾಗೂ 2021ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಕಂಚು ಪದಕ ಗೆದ್ದಿದ್ದರು.

ಪುರುಷರ ಬ್ಯಾಡ್ಮಿಂಟನ್

ಪುರುಷರ ಬ್ಯಾಡ್ಮಿಂಟನ್ ವಿಭಾಗದ ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಭಾರತದ ಆಟಗಾರರು ಗೆಲುವು ಸಾಧಿಸಿದ್ದಾರೆ. ಸಿಂಗಲ್ಸ್‌ನಲ್ಲಿ ಲಕ್ಷ್ಯ ಸೇನ್‌ ಗ್ಯಾಟೆಮಾಲಾದ ಕೆವಿನ್‌ ಕೋರ್ಡನ್‌ ಅವರನ್ನು 21-8,22-10 ಅಂತರದ ಮೂಲಕ ಪರಾಭವಗೊಳಿಸಿ ಎರಡನೇ ಸುತ್ತಿಗೆ ಪ್ರವೇಶ ಪಡೆದರು. ಡಬಲ್ಸ್‌ನಲ್ಲಿ ಸಾತ್ವಿಕ್‌ ಶ್ರೀರಾಜ್‌ ಹಾಗೂ ಚಿರಾಗ್‌ ಶೆಟ್ಟಿ ಫ್ರಾನ್ಸನ ಲೂಕಸ್‌ ಕೋರ್ವಿ, ರೋನನ್ ಲಬರ್‌ ಅವರನ್ನು ಸೋಲಿಸಿ ಮುಂದಿನ ಸುತ್ತಿಗೆ ಅರ್ಹತೆ ಪಡೆದರು.

ರೋಯಿಂಗ್

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿರುವ ಭಾರತದ ಏಕೈಕ ರೋಯಿಂಗ್ ಆಟಗಾರ ಬಲರಾಜ್ ಪನ್ವಾರ್, ಪುರುಷರ ಸಿಂಗಲ್ ರೋಯಿಂಗ್​ ಈವೆಂಟ್‌ನ ಮೊದಲ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿ ರಿಪಿಚೇಜ್‌ ಸುತ್ತಿಗೆ ಪ್ರವೇಶ ಪಡೆದಿದ್ದಾರೆ. 25 ವರ್ಷದ ಬಾಲರಾಜ್ 7:7.11 ನಿಮಿಷಗಳಲ್ಲಿ ಗುರಿ ತಲುಪಿದರು.

ಬಾಲರಾಜ್ ಈಗ ರಿಪಿಚೇಜ್ ಸುತ್ತಿನಲ್ಲಿ ಪಾಲ್ಗೊಳ್ಳಲಿದ್ದು, ಅವರು ಈ ಸುತ್ತಿನ ಮೂಲಕ ಸೆಮಿಫೈನಲ್ ಅಥವಾ ಫೈನಲ್‌ಗೆ ಪ್ರವೇಶಿಸಲು ಎರಡನೇ ಅವಕಾಶವನ್ನು ಪಡೆಯಲಿದ್ದಾರೆ. ಬಾಲರಾಜ್ ಅವರು 2022ರಲ್ಲಿ ಚೀನಾದಲ್ಲಿ ನಡೆದ ಏಷ್ಯನ್ ಕ್ರೀಡಾಕೂಟದಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದರು ಮತ್ತು ಕೊರಿಯಾದಲ್ಲಿ ನಡೆದ ಏಷ್ಯನ್ ಮತ್ತು ಓಷಿಯಾನಿಯಾ ಒಲಿಂಪಿಕ್​ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಇದೀಗ ಅವರಿಗೆ ಎರಡನೇ ಅವಕಾಶವಿದ್ದು ಸೆಮಿ ಅಥವಾ ಫೈನಲ್​ ಪ್ರವೇಶ ಪಡೆಯುವ ಅವಕಾಶವಿದೆ.

ಏರ್‌ ರೈಫಲ್

ಮಹಿಳೆಯರ ಏರ್‌ ರೈಫಲ್‌ ವಿಭಾಗದ 10 ಮೀಟರ್‌ ಸ್ಪರ್ಧೆಯಲ್ಲಿ ಭಾರತದ ರಮಿತಾ ಜಿಂದಾಲ್‌ ಫೈನಲ್‌ ಪ್ರವೇಶಿಸಿದ್ದಾರೆ. ಇದೇ ವಿಭಾಗದ ಮತ್ತೊಂದು ಸ್ಪರ್ಧೆಯಲ್ಲಿ ನಮ್ಮ ದೇಶದವರೆ ಆದ ಎಲವೆನಿಲ್ ವಲರಿವನ್‌ ಮೊದಲ ಸುತ್ತಿನಲ್ಲಿ ಗೆಲುವು ಪಡೆದರೂ 2ನೇ ಸುತ್ತಿನಲ್ಲಿ ಸೋಲು ಕಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...