ಏಪ್ಯಾ ಕಪ್ ಫೈನಲ್ : ಪಾಕ್ ವಿರುದ್ಧ ಟೀಮ್ ಇಂಡಿಯಾಗೆ ರೋಚಕ ಜಯ; 9ನೇ ಬಾರಿ ಚಾಂಪಿಯನ್

Date:

Advertisements

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಏಪ್ಯಾ ಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ರೋಚಕವಾಗಿ ಸೋಲಿಸಿದ್ದಲ್ಲದೇ, 9ನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿದೆ.

ಟಾಸ್ ಗೆದ್ದಿದ್ದ ಸೂರ್ಯ ಕುಮಾರ್ ನೇತೃತ್ವದ ಟೀಮ್ ಇಂಡಿಯಾ, ಪಾಕಿಸ್ತಾನವನ್ನು ಬ್ಯಾಟಿಂಗ್‌ಗೆ ಇಳಿಸಿತ್ತು. ಟೀಮ್ ಇಂಡಿಯಾದ ಸಂಘಟಿತ ಬೌಲಿಂಗ್ ಅನ್ನು ಎದುರಿಸುವಲ್ಲಿ ವಿಫಲರಾದ ಪಾಕಿಸ್ತಾನ 19.1 ಓವರ್‌ ಆಗುವಷ್ಟರಲ್ಲಿ 146 ರನ್ ಗಳಿಸಿ ಆಲೌಟ್ ಆಗಿತ್ತು.

ಈ ಗುರಿಯನ್ನು ಬೆನ್ನಟ್ಟಿದ್ದ ಟೀಮ್ ಇಂಡಿಯಾ ಆರಂಭಿಕ ಆಘಾತ ಎದುರಿಸಿತ್ತಲ್ಲದೇ, 20 ರನ್ ಗಳಿಸುಷ್ಟರಲದಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡಿತ್ತು. ಆ ಬಳಿಕ ಜೊತೆಯಾದ ಸಂಜು ಸ್ಯಾಮ್ಸನ್ ಹಾಗೂ ತಿಲಕ್ ವರ್ಮಾ 4 ನೇ ವಿಕೆಟ್‌ಗೆ ಸಾವಧಾನ ಜೊತೆಯಾಟ ನಡೆಸಿದರು. 77 ರನ್‌ಗಳಾಗುವಷ್ಟರಲ್ಲಿ 24 ರನ್ ಗಳಿಸಿದ್ದ ಸಂಜು ಔಟಾದರು. ಆ ಬಳಿಕ ಕ್ರೀಸ್‌ನಲ್ಲಿದ್ದ ತಿಲಕ್ ವರ್ಮಾಗೆ ಜೊತೆಯಾದ ಶಿವಂ ದುಬೆ 60 ರನ್‌ಗಳ ಜೊತೆಯಾಟ ನಡೆಸಿ, ಪಾಕ್ ಕೈಯಲ್ಲಿದ್ದ ಪಂದ್ಯವನ್ನು ಟೀಮ್ ಇಂಡಿಯಾ ಕಡೆಗೆ ವಾಲಿಸಿದರು.

ಕೊನೆಯ ಓವರ್‌ನಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು 10 ರನ್‌ಗಳಿದ್ದಾಗ ಹಾರಿಸ್ ರೌಫ್ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ತಿಲಕ್ ವರ್ಮಾ ಗೆಲುವಿನ ಸನಿಹಕ್ಕೆ ತಂದು‌ ನಿಲ್ಲಿಸಿದರು. ಕೊನೆಯಲ್ಲಿ ರಿಂಕು ಸಿಂಗ್ ಬೌಂಡರಿ ಬಾರಿಸಿ ಗೆಲುವಿನ ರನ್ ದಾಖಲಿಸಿದರು.

ಟೀಮ್ ಇಂಡಿಯಾ 19.4 ಓವರುಗಳಲ್ಲಿ 5 ವಿಕೆಟ್ ಕಳೆದುಕೊಂಡು 150 ರನ್ ಗಳಿಸಿ, 9ನೇ ಬಾರಿಗೆ ಏಷ್ಯಾ ಕಪ್‌ನಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿತು.

2025ರ ಏಷ್ಯಾ ಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಯಾವುದೇ ಪಂದ್ಯದಲ್ಲಿ ಸೋಲು ಅನುಭವಿಸಿಲ್ಲ. ಶ್ರೀಲಂಕಾ ವಿರುದ್ಧ ನಡೆದಿದ್ದ ಪಂದ್ಯವು ಟೈ ಆಗಿತ್ತಾದರೂ, ಟೀಮ್ ಇಂಡಿಯಾ ಸೂಪರ್ ಓವರ್‌ನಲ್ಲಿ ಪಂದ್ಯವನ್ನು ಗೆದ್ದುಕೊಂಡಿತ್ತು.

ಫೈನಲ್ ಪಂದ್ಯದ ಬಳಿಕವೂ ಕೂಡ ಟೀಮ್ ಇಂಡಿಯಾ No Hand Shake Policy ಅನ್ನು ಮುಂದುವರಿಸಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಖ್ವಿಯಿಂದ ಟ್ರೋಫಿ ಸ್ವೀಕರಿಸದ ಭಾರತ ತಂಡ, ಕಪ್‌ ಇಲ್ಲದೇ ಸಂಭ್ರಮಿಸಿದ ಆಟಗಾರರು

2025ರ ಏಷ್ಯಾಕಪ್ ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ಮಧ್ಯೆ ಆರಂಭದಿಂದಲೂ...

ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ: ಪಾಕಿಸ್ತಾನದ ಕಾಲೆಳೆದ ಪ್ರಧಾನಿ ಮೋದಿ

ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಿ...

ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ...

ತಮಿಳುನಾಡು | ನಟ ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತ: 10 ಮಂದಿ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕೀಯ ಪಕ್ಷದ ನಾಯಕ ವಿಜಯ್ ಅವರ ತಮಿಳಗ ವೆಟ್ಟ್ರಿ...

Download Eedina App Android / iOS

X